ದಿಸ್ಪುರ: ಉಚಿತವಾಗಿ ಕೊರೊನಾ ಲಸಿಕೆ ನೀಡುತ್ತಿರುವ ಕಾರಣ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ ಎಂದು ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ರಾಮೇಶ್ವರ್ ತೇಲಿ ಹೇಳಿದ್ದಾರೆ.
Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ದುಬಾರಿಯಲ್ಲ. ಕೇಂದ್ರ ಮತ್ತು ರಾಜ್ಯಗಳು ವಿಧಿಸುತ್ತಿರುವ ತೆರಿಗೆಯಿಂದಾಗಿ ದುಬಾರಿಯಾಗುತ್ತಿದೆ. ನೀವೆಲ್ಲರೂ ಉಚಿತವಾಗಿ ಕೊರೊನಾ ಲಸಿಕೆ ಪಡೆದಿದ್ದೀರಿ. ಅದನ್ನು ಪೂರೈಸಲು ಹಣ ಎಲ್ಲಿಂದ ಬಂದಿತ್ತು? ದೇಶದ 130 ಕೋಟಿ ಜನರಿಗೆ ಉಚಿತವಾಗಿ 2 ಡೋಸ್ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರತಿ ಡೋಸ್ ಲಸಿಕೆಗೆ 1,200 ರೂ. ವೆಚ್ಚವಾಗುತ್ತದೆ. ಇದು ಸರ್ಕಾರಕ್ಕೆ ಹೊರೆಯಾಗಲಿದೆ. ಲಸಿಕೆ ಹಣವನ್ನು ಪೆಟ್ರೋಲ್ ತೆರಿಗೆ ಮೂಲಕವಾಗಿ ಪಡೆದುಕೊಳ್ಳಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಬೆಂಗ್ಳೂರು ಮಾತ್ರವಲ್ಲ ಜಿಲ್ಲೆಗಳಲ್ಲಿಯೂ ಭಾರೀ ಮಳೆ- ಎಲ್ಲೆಲ್ಲಿ ಏನೇನಾಗಿದೆ?
Advertisement
Advertisement
ಪೆಟ್ರೋಲ್ ಬೆಲೆಯನ್ನು ನಮ್ಮ ಸಚಿವಾಲಯ ನಿರ್ಧರಿಸುವುದಿಲ್ಲ. ಕಚ್ಚಾತೈಲದ ಬೆಲೆಯಲ್ಲಿ ಬದಲಾವಣೆ ಉಂಟಾದರೆ ಪೆಟ್ರೋಲ್ ಡೀಸೆಲ್ ಬೆಲೆಯಲ್ಲೂ ಬದಲಾವಣೆಯಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮನೆಯಿಂದ ಮಳೆ ನೀರು ಹೊರ ಹಾಕುವ ವೇಳೆ ಕರೆಂಟ್ ಶಾಕ್ – ವ್ಯಕ್ತಿ ದುರ್ಮರಣ