ಬೆಂಗಳೂರು: ನಗರದ (Bengaluru) ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ (Rameshwaram Cafe Blast Case) ಬಂಧನಕ್ಕೊಳಗಾದ ಇಬ್ಬರು ಆರೋಪಿಗಳನ್ನು ಎನ್‍ಐಎ (NIA) ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯ (Court) ಆರೋಪಿಗಳನ್ನು 10 ದಿನಗಳ ಕಾಲ ಎನ್‍ಐಎ ಕಸ್ಟಡಿಗೆ ನೀಡಿದೆ.
ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ ಹಿನ್ನೆಲೆ ನ್ಯಾಯಾಧೀಶರ ಮನೆಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಎನ್‍ಐಎ ಪರವಾಗಿ ಎಸ್‍ಪಿಪಿ ಪ್ರಸನ್ನಕುಮಾರ್ ಹಾಜರಾಗಿದ್ದು, ವಾದ ಮಂಡಿಸಿದರು. ಈ ವೇಳೆ ಎನ್‍ಐಎ ಎಸ್ಪಿ ಶಿವವಿಕ್ರಮ್ ಕೂಡ ಹಾಜರಿದ್ದರು. ಇದನ್ನೂ ಓದಿ: ಬೆಂಗಳೂರು ಕೆಫೆ ಬ್ಲಾಸ್ಟ್ ಪ್ರಕರಣ; ಶಂಕಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ ಎನ್‌ಐಎ
Advertisement
Advertisement
ಆರೋಪಿಗಳನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿತ್ತು. ಬಳಿಕ ಕೋಲ್ಕತ್ತಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಶಂಕಿತರಾದ ಅಬ್ದುಲ್ ಮತೀನ್ ತಾಹ, ಮುಸಾವಿರ್ ಹುಸೇನ್‍ನನ್ನು ಎನ್‍ಐಎ ಪೊಲೀಸರು ಕರೆತಂದಿದ್ದರು. ಇಬ್ಬರನ್ನೂ ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ.
Advertisement
Advertisement
ಬಾಂಬ್ ಬ್ಲಾಸ್ಟ್ ಕೇಸಲ್ಲಿ ಬಂಧಿತರಾಗಿರುವ ಮುಜಾಮಿಲ್ ಶರೀಫ್, ಮಾಜ್ ಮಾನಿರ್ ಹೇಳಿಕೆ ಅಧರಿಸಿ ವಿಚಾರಣೆ ನಡೆಸಲಾಗುವುದು. ರಾಮೇಶ್ವರಂ ಬಾಂಬ್ ಸ್ಫೋಟ ಕೇಸಲ್ಲಿ ಯಾರ್ಯಾರ ಪಾತ್ರ ಏನಿತ್ತು? ಈ ಕೃತ್ಯದ ಹಿಂದೆ ಬೇರೆ ಯಾರೆಲ್ಲಾ ಇದ್ದಾರೆ? ರಾಮೇಶ್ವರಂ ಕೆಫೆಯಲ್ಲೇ ಬಾಂಬ್ ಬ್ಲಾಸ್ಟ್ ಮಾಡಿದ ಉದ್ದೇಶವೇನು? ಬೇರೆ ಎಲ್ಲೆಲ್ಲಿ ವಿಧ್ವಂಸಕ ಕೃತ್ಯವೆಸಗಲು ಪ್ಲಾನ್ ಮಾಡಲಾಗಿತ್ತು ಎಂಬ ಅಂಶಗಳು ಸೇರಿದಂತೆ ನಾನಾ ದೃಷ್ಟಿಕೋನದಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಇದನ್ನೂ ಓದಿ: ನಾಳೆ ರಾಜ್ಯಕ್ಕೆ ಮೋದಿ ಆಗಮನ – ಪ್ರಧಾನಿ ಮುಂದೆ ಹಲವು ಪ್ರಶ್ನೆಗಳನ್ನಿಟ್ಟ ಕಾಂಗ್ರೆಸ್ ಅಭ್ಯರ್ಥಿ