ಬೆಂಗಳೂರು: ರಾಮೇಶ್ವರಂ ಕೆಫೆ (Rameshwaram Cafe) ಬ್ಲಾಸ್ಟ್‌ನ ಶಂಕಿತ ಉಗ್ರನ (Suspected Terrorist) ಸುಳಿವು ಕೊಟ್ಟರೆ 10 ಲಕ್ಷ ನಗದು ಬಹುಮಾನ ಕೊಡುವುದಾಗಿ ಬಾಂಬರ್‌ನ ಸಿಸಿಟಿವಿ ಫೋಟೋವೊಂದನ್ನು ಬುಧವಾರ ಎನ್‌ಐಎ (NIA) ಬಿಡುಗಡೆ ಮಾಡಿತ್ತು. ಈ ಬೆನ್ನಲ್ಲೇ ಸಿಸಿಬಿ (CCB) ಪೊಲೀಸರು ಬಾಂಬರ್‌ನ ಮತ್ತೊಂದು ರೇಖಾಚಿತ್ರವನ್ನು (Sketch) ಬಿಡುಗಡೆ ಮಾಡಿದ್ದಾರೆ.
Advertisement
ಸಿಸಿಟಿವಿಯಲ್ಲಿ ಬಾಂಬರ್ ದೃಶ್ಯ ಸಮರ್ಪಕವಾಗಿ ಸೆರೆಯಾಗದ ಕಾರಣ ರೇಖಾಚಿತ್ರ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದರು. ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯವನ್ನು ಆಧಾರವಾಗಿ ಇಟ್ಟುಕೊಂಡು ಸಿಸಿಬಿ ಶಂಕಿತ ಉಗ್ರನ ರೇಖಾಚಿತ್ರ ತಯಾರಿ ಮಾಡಿದೆ. ಈಗಾಗಲೇ ಸಾರ್ವಜನಿಕರಿಂದ ಸಾಕಷ್ಟು ಕರೆಗಳು ಬಂದಿವೆ. ಆರೋಪಿಯನ್ನು ನೋಡಿದ್ದಾಗಿ ಕರೆಗಳು ಬರುತ್ತಿದ್ದ ಕಾರಣ ರೇಖಾಚಿತ್ರ ಬಿಡುಗಡೆ ಮಾಡಲು ಸಿಸಿಬಿ ತಯಾರಿ ನಡೆಸಿತ್ತು. ಇದನ್ನೂ ಓದಿ: ತೆಪ್ಪ ಮಗುಚಿಬಿದ್ದು ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಸಾವು
Advertisement
Advertisement
ಖ್ಯಾತ ಸ್ಕೆಚ್ ಆರ್ಟಿಸ್ಟ್‌ನಿಂದ ಬಾಂಬರ್‌ನ ಇಮ್ಯಾಜಿನರಿ ಸ್ಕೆಚ್ ಬಿಡಿಸಲಾಗಿದೆ. ಸ್ಕೆಚ್ ಆರ್ಟಿಸ್ಟ್ ಎನ್‌ಐಎ ಬಿಡುಗಡೆ ಮಾಡಿದ ಸಿಸಿಟಿವಿ ಫೋಟೋವನ್ನು ಆಧರಿಸಿ ಸಂಪೂರ್ಣ ಮುಖದ ಇಮ್ಯಾಜಿನರಿ ಸ್ಕೆಚ್ ಮಾಡಿದ್ದಾರೆ. ಆರ್ಟಿಸ್ಟ್ ಹರ್ಷ ಅವರು ಈ ರೇಖಾಚಿತ್ರವನ್ನು ಬಿಡಿಸಿದ್ದಾರೆ. ಮಾಸ್ಕ್ ಧರಿಸಿದ ರೀತಿಯಲ್ಲಿ ಹಾಗೂ ಮಾಸ್ಕ್ ಇಲ್ಲದೇ ಟೋಪಿ ಕನ್ನಡಕ ಧರಿಸಿದ ರೇಖಾಚಿತ್ರವನ್ನು ಬಿಡಿಸಲಾಗಿದೆ. ಇದೇ ರೀತಿ ಬಾಂಬರ್ ಇರಬಹುದು ಎಂದು ಕಲ್ಪಿಸಿ ಕಲಾವಿದ ಹರ್ಷ ಈ ರೇಖಾಚಿತ್ರ ಬಿಡಿಸಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್ – ಬಾಂಬರ್ ಬಳ್ಳಾರಿಯಿಂದ ಭಟ್ಕಳಕ್ಕೆ ತೆರಳಿರುವ ಶಂಕೆ
Advertisement