ಬೆಂಗಳೂರು: ಜನವರಿ 22ರಂದು ಸೋಮವಾರ ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಬಿಗಿ ಭದ್ರತೆ ನಿಯೋಜಿಸಲಾಗುತ್ತಿದೆ.
ಬಾಲರಾಮನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜ.22ರಂದು ಯಾವುದೇ ಪೊಲೀಸ್ (Police) ಸಿಬ್ಬಂದಿಗೆ ರಜೆ ನೀಡದಂತೆ ಸೂಚಿಸಲಾಗಿದೆ. ಒಂದು ವೇಳೆ ರಜೆಯಲ್ಲಿರುವವರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಲೇಬೇಕು ಎಂದು ಹಿರಿಯ ಅಧಿಕಾರಿಗಳು ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಅಯೋಧ್ಯೆ ಗರ್ಭಗುಡಿ ಪೀಠದಲ್ಲಿ ಬಾಲರಾಮ – ಮೊದಲ ಚಿತ್ರ ವೈರಲ್
Advertisement
Advertisement
ಈ ಹಿಂದಿನ ಕೋಮುಗಲಭೆಗಳ (Communal Riots) ಬಗ್ಗೆ ಮಾಹಿತಿ ಪಡೆದಿರುವ ಪೊಲೀಸರು, ಅಂತಹ ಗಲಭೆಗಳಲ್ಲಿ ಭಾಗಿಯಾಗಿದ್ದವರ ಮೇಲೂ ಹದ್ದಿನ ಕಣ್ಣು ಇಡಲಾಗಿದೆ. ಜೊತೆಗೆ ಆಯಾ ರೌಡಿಶೀಟರ್‌ಗಳ ಮೇಲೂ ನಿಗಾ ವಹಿಸಲಾಗಿದೆ.
Advertisement
ಅಲ್ಲದೇ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ ಇನ್ಸ್‌ಪೆಕ್ಟರ್‌ಗಳು ಧರ್ಮದ ಮುಖಂಡರನ್ನ ಕರೆಸಿ ಶಾಂತಿಪಾಲನಾ ಸಭೆ ನಡೆಸಬೇಕು. ಈ ಬಗ್ಗೆ ತಮ್ಮ ಸಮುದಾಯದ ಮುಖಂಡರಿಗೆ ಸಲಹೆ ನೀಡುವಂತೆ ಸೂಚಿಸಲು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಸಚಿನ್ ತೆಂಡೂಲ್ಕರ್ ಡೀಪ್‍ಫೇಕ್ ವೀಡಿಯೋ ಪ್ರಕರಣ- ಗೇಮ್ ಅಪ್ಲಿಕೇಶನ್ ವಿರುದ್ಧ ಎಫ್‍ಐಆರ್
Advertisement
ಜ.22ರಂದು ರಾಜ್ಯದಲ್ಲಿಯೂ ಯಾವುದೇ ರ‍್ಯಾಲಿಗಳಿಗೆ ಅವಕಾಶ ಇಲ್ಲ. ಆ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ವಿವಿಧ ಜಿಲ್ಲೆಗಳಿಂದಲೂ ಪೊಲೀಸರನ್ನ ಕರೆಸಲಾಗಿದೆ. ಮಂಡ್ಯ ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಂದಲೂ ಹೆಚ್ಚವರಿ ಪೊಲೀಸರ ನಿಯೋಜನೆ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದಾರೆ. ಇದನ್ನೂ ಓದಿ: ಕಾರ್ಖಾನೆ ಕಾರ್ಮಿಕರ ಕೆಲಸದ ಅವಧಿ 12 ರಿಂದ 8 ಗಂಟೆಗೆ ಇಳಿಸಲು ನಿರ್ಧಾರ