Connect with us

Bengaluru City

ರಾಹುಲ್ ಜೀ ನೀವು ತಪ್ಪು ಮಾಡಿದ್ದೀರಿ: ರಮ್ಯಾ

Published

on

ನವದೆಹಲಿ: ಲೋಕಸಭಾ ಚುನಾವಣೆ ಬಳಿಕ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಂಸದೆ ರಮ್ಯಾ ಕಾಂಗ್ರೆಸ್ ಬಂಡಾಯದ ನಡುವೆ ಎಂಟ್ರಿ ಕೊಟ್ಟಿದ್ದು, ನನ್ನ ಪ್ರಕಾರ ರಾಹುಲ್ ಜೀ ತಪ್ಪು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆಯ ಮಾಹಿತಿ ಸೋರಿಕೆಯಾಗಿದೆ ಎಂದು ಟ್ವೀಟ್ ಮಾಡಿ ನಟಿ ರಮ್ಯಾ ಕಿರಿಕಾರಿದ್ದಾರೆ. ಬಂಡಾಯಕ್ಕೆ ಕಾರಣವಾದ 23 ಮಂದಿ ಪತ್ರ ಬರೆದು ಅದನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ. ಅಲ್ಲದೆ ಕಾಂಗ್ರೆಸ್ ಸಭೆಯ ಇಂಚಿಂಚು ಮಾಹಿತಿಗಳನ್ನು ನೀಡುವ ಮೂಲಕ ಎಲ್ಲಾ ವಿಚಾರಗಳನ್ನು ಸೋರಿಕೆ ಮಾಡುತ್ತಿದ್ದಾರೆ ಎಂದಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಗರಂ ಆಗಿ ಕಪಿಲ್ ಸಿಬಲ್ ಮಾಡಿದ ಟ್ವೀಟ್ ಅನ್ನು ರಿಟ್ವೀಟ್ ಮಾಡಿದ ರಮ್ಯಾ, ನನ್ನ ಪ್ರಕಾರ ರಾಹುಲ್ ಜೀ ತಪ್ಪು ಮಾಡಿದ್ದಾರೆ. ಅವರು ಬಿಜೆಪಿ ಮತ್ತು ಮಾಧ್ಯಮಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಬೇಕಿತ್ತು ಎಂದು ಬರೆದುಕೊಂಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಯಾರಿಗೆ ನೀಡಬೇಕು ಎಂಬ ಮೂಲ ವಿಷಯವನ್ನು ಇಟ್ಟುಕೊಂಡು ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಪತ್ರ ಬಂಡಾಯದ ಬಗ್ಗೆ ಈಗ ಭಾರೀ ಚರ್ಚೆ ಆಗುತ್ತಿದೆ.

ಈ ವೇಳೆ 20 ಪ್ರಮುಖರ ನಾಯಕರು ಪತ್ರ ಬರೆದ ವಿಚಾರಕ್ಕೆ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದರು. ಕೋವಿಡ್ 19, ಮಧ್ಯಪ್ರದೇಶ, ರಾಜಸ್ಥಾನ ಬಿಕ್ಕಟ್ಟಿನ ಸಮಯದಲ್ಲಿ ಹಿರಿಯ ನಾಯಕರಾದವರು ಈ ರೀತಿ ಪತ್ರ ಬರೆಯುವುದು ಸರಿಯಲ್ಲ. ಸೋನಿಯಗಾಂಧಿ ಅವರಿಗೆ ಆರೋಗ್ಯ ಸಮಸ್ಯೆ ಇದೆ. ಅವರು ಆಸ್ಪತ್ರೆ ದಾಖಲಾದ ವೇಳೆ ಪತ್ರ ಬರೆಯುವುದು ಎಷ್ಟು ಸರಿ? ಕಾಂಗ್ರೆಸ್ ಕೆಲ ಹಿರಿಯ ನಾಯಕರು ಬಿಜೆಪಿ ಜೊತೆ ಸೇರಿಕೊಂಡು ಈಗ ನಮ್ಮ ವಿರುದ್ಧವೇ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ರಾಹುಲ್ ಮಾತಿನ ವಿರುದ್ಧ ಕಿಡಿಕಾರಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್, ನಾವು ಬಿಜೆಪಿಯೊಂದಿಗೆ ಒಡನಾಟ ಹೊಂದಿದ್ದೇವೆ ಎಂದು ರಾಹುಲ್ ಹೇಳುತ್ತಾರೆ. ಆದರೆ ನಾವು ಕಳೆದ 30 ವರ್ಷಗಳಲ್ಲಿ ಯಾವುದೇ ವಿಷಯದ ಬಗ್ಗೆ ಬಿಜೆಪಿ ಪರವಾಗಿ ಹೇಳಿಕೆ ನೀಡಿಲ್ಲ. ರಾಜಸ್ಥಾನ ಹೈಕೋರ್ಟ್‍ನಲ್ಲಿ ಕಾಂಗ್ರೆಸ್ ಪಕ್ಷವನ್ನು ಸಮರ್ಥಿಸಿಕೊಳ್ಳುವಲ್ಲಿ ಯಶಸ್ವಿಯಾದೆ. ಬಿಜೆಪಿ ಸರ್ಕಾರವನ್ನು ಉರುಳಿಸಿ ಮಣಿಪುರದಲ್ಲಿ ಹಾಲಿ ಪಕ್ಷವನ್ನು ತರುವಲ್ಲಿ ನೆರವಾದೆ. ಆದರೂ ನಾವು ಬಿಜೆಪಿಯೊಂದಿಗೆ ಒಡನಾಟ ಹೊಂದಿದ್ದೇವೆ ಎಂದು ಬರೆದು ಟ್ವೀಟ್ ಮಾಡಿದ್ದರು.

ಸದ್ಯ ಕಪಿಲ್ ಸಿಬಲ್ ಅವರು ತಮ್ಮ ಟ್ವೀಟ್ ಡಿಲೀಟ್ ಮಾಡಿದ್ದು, ರಾಹುಲ್ ಗಾಂಧಿ ನನಗೆ ಕರೆ ಮಾಡಿ ನಿಮ್ಮನ್ನು ಉದ್ದೇಶಿಸಿ ಹೇಳಿಲ್ಲ ಎಂದು ಹೇಳಿದರು. ಹೀಗಾಗಿ ನನ್ನ ಹೇಳಿಕೆಯನ್ನು ಹಿಂದಕ್ಕೆ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ. ಇದರ ನಡುವೆಯೇ ರಮ್ಯಾ ಅವರು ರಾಹುಲ್ ಗಾಂಧಿಗೆ ಬೆಂಬಲ ನೀಡಿ ಬಂಡಾಯದ ನಾಯಕರ ವಿರುದ್ಧ ಟೀಕೆ ಮಾಡಿ ಟ್ವೀಟ್ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *