Districts
ಕೊನೆಗೂ ಬೆಂಗಳೂರಿಗೆ ಬಂದ್ರು ರಮ್ಯಾ ಮೇಡಂ

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಂವಾದ ಕಾರ್ಯಕ್ರಮಕ್ಕಾಗಿ ಮಾಜಿ ಸಂಸದೆ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ವಿಭಾಗದ ಮುಖ್ಯಸ್ಥೆ ರಮ್ಯಾ ಅವರು ಬಹುದಿನಗಳ ಬಳಿಕ ಸಿಲಿಕಾನ್ ಸಿಟಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ.
ಇಂದು ಸಂಜೆ ರಾಜಧಾನಿಯ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಟೆಕ್ಕಿಗಳ ಜೊತೆ ನಡೆಯಲಿರುವ ರಾಹುಲ್ ಗಾಂಧಿ ಅವರ ಸಂವಾದ ಕಾರ್ಯಕ್ರಮದಲ್ಲಿ ರಮ್ಯಾ ಕಾಣಿಸಿಕೊಂಡಿದ್ದಾರೆ.
ರಾಹುಲ್ ಗಾಂಧಿ ಅವರ ಸಂವಾದ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ಬಂದಿಳಿದಿರುವ ರಮ್ಯಾ, ಕಾರ್ಯಕ್ರಮದ ಉಸ್ತುವರಿಯನ್ನು ನೋಡಿಕೊಳ್ಳುತ್ತಾ ಬ್ಯುಸಿಯಾಗಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ರಮ್ಯಾ ಮಂಡ್ಯಕ್ಕೆ ಬರಲಿಲ್ಲ. ನಂತರ ಅಂಬರೀಶ್ ಅವರು ಮೃತಪಟ್ಟ ಸಮಯದಲ್ಲೂ ರಮ್ಯಾ ರಾಜ್ಯಕ್ಕೆ ಬಂದಿರಲಿಲ್ಲ. ರಮ್ಯಾ ಆಗಮಿಸಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ರಮ್ಯಾ ವಿರುದ್ಧ ಕಾಂಗ್ರೆಸ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.
