ಕಿರುತೆರೆಯ ಜನಪ್ರಿಯ ಶೋ Weekend With Ramesh ಸೀಸನ್ 5ರಲ್ಲಿ ರಮ್ಯಾ ಭಾಗಿಯಾಗಿದ್ದಾರೆ. ಈ ವಾರಾಂತ್ಯದಲ್ಲಿ ಪ್ರೇಕ್ಷಕರಿಗೆ ಹಬ್ಬದ ಎಂದೇ ಹೇಳಬಹುದು. ಸಾಕಷ್ಟು ಸಮಯ ತೆರೆಮರೆಯಲ್ಲಿದ್ದ ರಮ್ಯಾ ಮತ್ತೆ ಸ್ಯಾಂಡಲ್‌ವುಡ್ ಕಂಬ್ಯಾಕ್ ಆಗಿದ್ದಾರೆ. ಜೊತೆ ವೀಕೆಂಡ್‌ನಲ್ಲಿ ರಮೇಶ್ ಜೊತೆ ರಮ್ಯಾ (Ramya) ತಮ್ಮ ಜೀವನದ ಸಾಕಷ್ಟು ವಿಚಾರಗಳನ್ನ ಹಂಚಿಕೊಂಡಿದ್ದಾರೆ. ಈ ವೇಳೆ ಅಪ್ಪುನ (Appu) ನೆನೆದು ರಮ್ಯಾ ಕಣ್ಣೀರಿಟ್ಟಿದ್ದಾರೆ.
ರಮ್ಯಾ ಒಂದು ದಶಕಗಳ ಕಾಲ ಸ್ಯಾಂಡಲ್‌ವುಡ್ ಆಳಿದ ನಾಯಕಿ. ಅವರು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬರುತ್ತಾರೆ ಎಂದಾಗ ಎಲ್ಲರ ನಿರೀಕ್ಷೆ ಹೆಚ್ಚಾಗಿತ್ತು. ಶೋ ಸಂಬಂಧಿಸಿದಂತೆ ರಮ್ಯಾ ಅವರ ಮೊದಲ ಪ್ರೋಮೋ ಬಿಟ್ಟಿದ್ದಾರೆ. ಲೈಟ್ ಬಣ್ಣದ ಸೀರೆಯಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. `ಅಭಿ’ (Abhi) ಸಿನಿಮಾದಿಂದ ಶುರುವಾದ ಸಿನಿ ಜರ್ನಿ ರಾಜಕೀಯ ಕ್ಷೇತ್ರಕ್ಕೂ ಕಾಲಿಡುವ ಹಾಗೇ ಮಾಡಿತ್ತು. ಸಿನಿಮಾ-ರಾಜಕೀಯ ಎರಡಲ್ಲೂ ಗುರುತಿಸಿಕೊಂಡರು. ಈ ಬಗ್ಗೆ ನಟಿ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ.
ರಮ್ಯಾ ಅವರ ವೃತ್ತಿ ಜೀವನದಲ್ಲಿ ರಾಜ್‌ಕುಮಾರ್ ಕುಟುಂಬ ವಿಶೇಷವಾಗಿದೆ. ರಮ್ಯಾ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಪಾರ್ವತಮ್ಮ. ಅವರಿಗೆ ರಮ್ಯಾ ಎಂದು ನಾಮಕರಣ ಮಾಡಿದ್ದೂ ಅವರೇ. ಇದನ್ನು ರಮ್ಯಾ ಉಲ್ಲೇಖ ಮಾಡಿದ್ದಾರೆ. ರಕ್ಷಿತಾ ಜೊತೆಗಿನ ಸ್ಪರ್ಧೆ ಬಗ್ಗೆ ಮಾತನಾಡಿದ್ದಾರೆ. ಶ್ರೀನಗರ ಕಿಟ್ಟಿ ಹಾಗೂ ರಮ್ಯಾ ಅಭಿನಯದ `ಸಂಜು ಮತ್ತು ಗೀತಾ’ ಸಿನಿಮಾ ಯಶಸ್ಸು ಕಂಡಿತ್ತು. ಶ್ರೀನಗರ ಕಿಟ್ಟಿ ಕೂಡ ವೇದಿಕೆ ಏರಿದ್ದಾರೆ. ಈ ವೇಳೆ `ಐ ಲವ್ ಯೂ ಸಂಜು’ ಎಂದಿದ್ದಾರೆ ರಮ್ಯಾ. ಪುನೀತ್ ಹಾಗೂ ರಮ್ಯಾ ಅವರದ್ದು ಹಿಟ್ ಕಾಂಬಿನೇಷನ್. ಆ ಬಗ್ಗೆಯೂ ರಮ್ಯಾ ಮಾತನಾಡಿದ್ದಾರೆ. ರಮ್ಯಾ ಪುನೀತ್ ನೆನೆದು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಮೊದಲ ಪ್ಯಾನ್ ಇಂಡಿಯಾ ಮಕ್ಕಳ ಚಿತ್ರಕ್ಕೆ ರಾಗಿಣಿ ದ್ವಿವೇದಿ ಸಾಥ್
ʻಅಭಿʼ ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್‌ಗೆ ನಾಯಕಿಯಾಗಿ ಪರಿಚಿತರಾದ ರಮ್ಯಾ ಸಾಕಷ್ಟು ಹಿಟ್ ಸಿನಿಮಾ ನೀಡಿ ಸೈ ಎನಿಸಿಕೊಂಡಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ನಟಿಸಿ ಬಂದಿದ್ದಾರೆ.