ಬೆಂಗಳೂರು: ಹಿಂದುತ್ವ ಮತ್ತು ಹಿಂದೂಯಿಸಂ ಎರಡೂ ಒಂದೇ ಅಲ್ಲ ಎಂದು ಸ್ಯಾಂಡಲ್‍ವುಡ್ ನಟಿ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕವಾಗಿ ಸುದ್ದಿಯಾಗಿದ್ದಾರೆ.
Advertisement
ಹಿಂದುತ್ವ ಮತ್ತು ಹಿಂದೂಯಿಸಂ ಎರಡೂ ಒಂದೇ ಅಲ್ಲ. ಹಿಂದೂಯಿಸಂ ಎಂಬುದು ರಾಜಕೀಯವಲ್ಲ. ಆದರೆ ಹಿಂದುತ್ವ ಎಂಬುದು ರಾಜಕೀಯವಾಗಿದೆ. ಹಿಂದೂಯಿಸಂ ಎಂದರೆ ಎಲ್ಲರನ್ನೂ ಒಳಗೊಳ್ಳುವಂತದ್ದು ಮತ್ತು ಎಲ್ಲರಿಗೂ ಪ್ರೀತಿ ಹಂಚುವಂತದ್ದು. ಅದಕ್ಕೆ ವಿರುದ್ಧವಾದ್ದದ್ದೇ ಹಿಂದುತ್ವ. ನಿಜವಾದ ಹಿಂದುಗಳಿಗೆ ವ್ಯತ್ಯಾಸ ತಿಳಿಯುತ್ತದೆ ಎಂದು ರಮ್ಯಾ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.
Advertisement
View this post on Instagram
Advertisement
ನಮ್ಮ ಪುರಾತನ ಹಿಂದೂ ಧರ್ಮವು ರಾಜಕಾರಣಿಗಳಿಂದ ಒಂದು ರಾಜಕೀಯ ಸಾಧನವಾಗಿ ಬಳಕೆ ಆಗುತ್ತಿರುವುದನ್ನು ನೋಡಲು ನೋವಾಗುತ್ತದೆ. ನಾನು ಹಿಂದೂ ಅಷ್ಟೇ. ಯಾವ ಪಕ್ಷ ಕೂಡ ನನ್ನ ಹಿಂದೂಯಿಸಂ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ ಎಂದು ರಮ್ಯಾ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ರಮ್ಯಾ ಈ ಪೋಸ್ಟ್ ಮಾಡುತ್ತಿದ್ದಂತೆ ನೆಟ್ಟಿಗರು ಕಾಮೆಂಟ್ ಮಾಡುತ್ತಾ ತಮ್ಮ ಅಭಿಪ್ರಾಯವನ್ನು ಸೂಚಿಸುತ್ತಿದ್ದಾರೆ. ಕೆಲವರು ಮೆಚ್ಚುಗೆ ಸೂಚಿಸಿದ್ದಾರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ನಿಮ್ಮಿಂದ ನಾವು ಹಿಂದೂ ಧರ್ಮದ ಬಗ್ಗೆ ಪಾಠ ಕಲಿಯಬೇಕಾಗಿಲ್ಲ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಹಿಂದೂ ಧರ್ಮ, ಹಿಂದುತ್ವ ಬೇರೆ ಬೇರೆ: ರಾಹುಲ್ ಗಾಂಧಿ
Advertisement
2 ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾಂಗ್ರೆಸ್ ಪಕ್ಷದ ಡಿಜಿಟಲ್ ಅಭಿಯಾನವಾದ ಜನ್ ಜಾಗರಣ ಅಭಿಯಾನದ (digital campaign Jan Jagran Abhiyan) ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಹಿಂದೂ ಧರ್ಮ ಮತ್ತು ಹಿಂದುತ್ವದ ನಡುವಿನ ವ್ಯತ್ಯಾಸವೇನು? ಅವು ಒಂದೇ ಆಗಿರಬಹುದೇ? ಒಂದೇ ಆಗಿದ್ದರೆ, ಏಕೆ ಒಂದೇ ಹೆಸರಿಲ್ಲ? ವಿಭಿನ್ನ ವಿಷಯಗಳಾಗಿವೆ ಎಂದು ಹೇಳಿದ್ದರು. ಇದೇ ವಿಚಾರವಾಗಿ ರಮ್ಯಾ ಕೂಡಾ ಮಾತನಾಡಿದ್ದಾರೆ. ಇದನ್ನೂ ಓದಿ: ಚೀನಾ ಕುರಿತು ಸರ್ಕಾರ ಯಾವುದೇ ಕಾರ್ಯತಂತ್ರ ಹೊಂದಿಲ್ಲ: ರಾಹುಲ್ ಗಾಂಧಿ
What is the difference between Hinduism & Hindutva, can they be the same thing? If they’re the same thing, why don’t they have the same name? They’re obviously different things. Is Hinduism about beating a Sikh or a Muslim? Hindutva of course is: Congress leader Rahul Gandhi pic.twitter.com/Hv1GrbM4Lm
— ANI (@ANI) November 12, 2021
ರಮ್ಯಾ ಸಿನಿಮಾ ಕ್ಷೇತ್ರದಿಂದ ದೂರವಾಗಿದ್ದಾರೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಮಾತ್ರ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಕೆಲವು ವಿಚಾರವಾಗಿ ತಮ್ಮ ಅನಿಸಿಕೆಗಳನ್ನು ತಮ್ಮದೇ ಆಗಿರುವ ರೀತಿಯನ್ನು ಅಭಿಮಾನಿಗಳ ಜೊತೆಗೆ ಹಂಚಿಕೊಳ್ಳುತ್ತಿರುತ್ತಾರೆ.