ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ಬ್ಯುಸಿಯಾಗಿರುವ ಮಾಜಿ ಸಂಸದೆ ರಮ್ಯಾ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಕುರಿತು ಸಂಸದ ಡಿಕೆ ಸುರೇಶ್ ಮುನ್ಸೂಚನೆ ನೀಡಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಿನಿಂದಲೇ ಸಿದ್ಧತೆಗಳನ್ನು ನಡೆಸುತ್ತಿದ್ದು, ಹಲವು ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇದರಂತೆ ಮಾಜಿ ಸಂಸದೆ ರಮ್ಯಾ ಅವರು ರಾಜ್ಯ ರಾಜಕಾರಣಕ್ಕೆ ಬರುವ ಆಸಕ್ತಿಯನ್ನು ಹೊಂದಿದ್ದರೆ, ಖಂಡಿತ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
Advertisement
Advertisement
ರಮ್ಯಾ ಅವರಿಗೆ ಪ್ರಸ್ತುತ ಹೈಕಮಾಂಡ್ ಪಕ್ಷದ ಸಾಮಾಜಿಕ ಜಾಲತಾಣಗಳ ನಿರ್ವಹಣೆಯ ಹೊಣೆಯನ್ನು ನೀಡಿದೆ. ಅದನ್ನು ಅವರು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಹೈಕಮಾಂಡ್ ಒಂದು ವೇಳೆ ರಮ್ಯಾ ಅವರ ಅವಶ್ಯಕತೆ ಅರಿತು ಚುನಾವಣೆಗೆ ಸ್ಪರ್ಧಿಸಲು ಸೂಚನೆ ನೀಡಿದರೆ ಸ್ಪರ್ಧಿಸಬೇಕಾಗುತ್ತದೆ ಎಂದರು.
Advertisement
ರಾಜ್ಯ ರಾಜಕಾರಣ ಪ್ರವೇಶದ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ಪಕ್ಷದ ಹೈಕಮಾಂಡ್ ಸೂಚನೆ ನೀಡಿದರೆ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುತ್ತೇನೆ. ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರದ ಜನರು ಚುನಾವಣೆಯಲ್ಲಿ ಸ್ಪರ್ಧಿಸಲು ಕೇಳಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯನ್ನು ಮಾಡುತ್ತಿದ್ದೇನೆ. ಚುನಾವಣೆಯ ಟಿಕೆಟ್ ಹಂಚಿಕೆಯ ವಿಚಾರ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದರು.
Advertisement
https://www.youtube.com/watch?v=QxHvyneQsfU