ಅಂದುಕೊಂಡಂತೆ ಆಗಿದ್ದರೆ, ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ (Ramya) ತಮ್ಮದೇ ನಿರ್ಮಾಣದ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಕಮ್ ಬ್ಯಾಕ್ ಆಗಬೇಕಿತ್ತು. ಆದರೆ, ಬೇರೊಬ್ಬ ನಾಯಕಿಯನ್ನು ತಮ್ಮ ಚಿತ್ರಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ರಮ್ಯಾ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. ಇದೀಗ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದ್ದು, ಡಾಲಿ ಧನಂಜಯ್ ನಟನೆಯ ಉತ್ತರಕಾಂಡ (Uttara Kanda) ಚಿತ್ರದ ಮೂಲಕ ರಮ್ಯಾ ಬಣ್ಣದ ಪ್ರಪಂಚಕ್ಕೆ ಕಾಲಿಡಲಿದ್ದಾರೆ ಎನ್ನುವ ಮಾಹಿತಿ ಇದೆ. ಸದ್ಯದಲ್ಲೇ ಈ ಸುದ್ದಿ ಅಧಿಕೃತವಾಗಲಿದೆ ಎಂದೂ ಹೇಳಲಾಗುತ್ತಿದೆ.
ವಿಜಯ್ ಕಿರಗಂದೂರು ಅವರು ಪ್ರಸ್ತುತ ಪಡಿಸುತ್ತಿರುವ ಚಿತ್ರ “ಉತ್ತರಕಾಂಡ ” ವನ್ನು ಕೆ.ಆರ್.ಜಿ. ಸ್ಟುಡಿಯೋಸ್ ಸಂಸ್ಥೆಯ ಕಾರ್ತಿಕ್ (Karthik Gowda) ಮತ್ತು ಯೋಗಿ.ಜಿ.ರಾಜ್ ಅವರು ನಿರ್ಮಿಸುತ್ತಿದ್ದಾರೆ. ಡಾಲಿ ಧನಂಜಯ (Dolly Dhananjay) ಮುಖ್ಯ ಪಾತ್ರದಲ್ಲಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿರುವ ಈ ಚಿತ್ರವನ್ನು ರೋಹಿತ್ ಪದಕಿ (Rohit Padaki) ಅವರು ನಿರ್ದೇಶಿಸುತ್ತಿದ್ದಾರೆ. ರತ್ನನ್ ಪ್ರಪಂಚ ಯಶಸ್ಸಿನ ನಂತರ ಕೆ.ಆರ್.ಜಿ ಸ್ಟುಡಿಯೋಸ್ , ಡಾಲಿ ಧನಂಜಯ ಮತ್ತು ರೋಹಿತ್ ಪದಕಿ ಅವರ ತಂಡ ಮತ್ತೊಮ್ಮೆ ಕೈ ಜೋಡಿಸುತಿದ್ದಾರೆ. ಇದನ್ನೂ ಓದಿ:ಚಿಲ್ಲರೆ, ಮಾನಗೆಟ್ಟವನೇ ಎಂದು ರೂಪೇಶ್ ರಾಜಣ್ಣಗೆ ಸಂಬರ್ಗಿ ಕ್ಲಾಸ್
ಚಿತ್ರವನ್ನು ಉತ್ತರ ಕರ್ನಾಟಕದ ಹಿನ್ನೆಲೆಯಲ್ಲಿ ಚಿತ್ರೀಕರಿಸಲಾಗುತ್ತದೆ ಅನ್ನುವುದು ವಿಷೇಶ ಸಂಗತಿ. ರಾಜ್ಯೋತ್ಸವದ ದಿನ ಮಾಡಿದ ಹೊಸ ಪ್ರಕಟಣೆಯಂತೆ ನವಂಬರ್ 6ರಂದು , ಮಧ್ಯಾಹ್ನ 3.22 ಕ್ಕೆ ಚಿತ್ರದ ಪೂಜೆ ಕಾರ್ಯಕ್ರಮ ಅದ್ದೂರಿಯಾಗಿ ಬೆಂಗಳೂರಿನಲ್ಲಿ ನಡೆಯಲಿದೆ. ಚಿತ್ರ ತಂಡದ ಬಗ್ಗೆ ಮತ್ತು ಚಿತ್ರದ ಬಗ್ಗೆ ಮತ್ತಷ್ಟು ವಿವರಗಳನ್ನು ಆ ದಿನ ಹಂಚಿಕೊಳ್ಳಲಾಗುತ್ತದೆ .
ಮನುಷ್ಯನ ಮನಸ್ಸಿನ ಒಳಗಿನ ಖೇದಗಳನ್ನು, ಗೊಂದಲಗಳನ್ನು, ತಳಮಳಗಳನ್ನು ಬಹಳ ಸುಂದರವಾಗಿ ಕಥೆಯ ರೂಪದಲ್ಲಿ ರೋಹಿತ್ ಅವರು ಹೆಣೆದಿದ್ದಾರೆ. ಚರಣ್ ರಾಜ್ ಅವರು ಸಂಗೀತ ನಿರ್ದೇಶನ ಮಾಡುತ್ತಿರುವ ಈ ಚಿತ್ರಕ್ಕೆ ಸ್ವಾಮಿ ಅವರು ಛಾಯಾಗ್ರಾಹಕರಾಗಿದ್ದಾರೆ. ದೀಪು ಎಸ್ ಕುಮಾರ್ ಅವರು ಸಂಕಲನ ಮತ್ತು ವಿಶ್ವಾಸ್ ಕಶ್ಯಪ್ ಅವರು ವಿನ್ಯಾಸದ ಜವಾಬ್ಧಾರಿ ವಹಿಸಿಕೊಂಡಿದ್ದಾರೆ.