ಮೋಹಕ ತಾರೆ ರಮ್ಯಾ (Ramya) ಮತ್ತೆ ಸಿನಿಮಾ ರಂಗಕ್ಕೆ ಬರುವ ವಿಚಾರ ಅವರ ಅಭಿಮಾನಿಗಳಲ್ಲಿ ಸಂತಸ ಮೂಡಿಸಿತ್ತು. ಹಲವು ವರ್ಷಗಳ ನಂತರ ಮತ್ತೆ ರಮ್ಯಾ ಸ್ಯಾಂಡಲ್ ವುಡ್ ಗೆ ಬಂದರಲ್ಲ ಅಂತ ಸಂಭ್ರಮಿಸುವ ಹೊತ್ತಿನಲ್ಲೇ, ಏನೋ ಯಡವಟ್ಟಾದ ವಿಚಾರವೊಂದು ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಅವರೇ ನಿರ್ಮಾಣ ಮಾಡುತ್ತಿದ್ದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಿಂದ ರಮ್ಯಾ ಹೊರ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಹಿಂದೆ ರಮ್ಯಾ ಅವರ ಪ್ರೊಡಕ್ಷನ್ ಹೌಸ್ ಆ್ಯಪಲ್ ಬಾಕ್ಸ್ ತಿಳಿಸಿದಂತೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ (Swati Muttina Malehaniye) ಸಿನಿಮಾವನ್ನು ರಮ್ಯಾ ಅವರೇ ನಿರ್ಮಾಣ ಮಾಡಿ, ಅವರೇ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದೀಗ ನಾಯಕಿಯ ಸ್ಥಾನವನ್ನು ಬೇರೊಬ್ಬರು ತುಂಬಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾದಲ್ಲಿ ಸಿರಿ ರವಿಕುಮಾರ್ ಲೀಡ್ ಪಾತ್ರದಲ್ಲಿ ಮಾಡಲಿದ್ದಾರೆ ಎಂದು ಸ್ವತಃ ರಮ್ಯಾ ಅವರ ಪ್ರೊಡಕ್ಷನ್ ಹೌಸ್ ತಿಳಿಸಿದೆ. ಇದನ್ನೂ ಓದಿ: ರಿಷಬ್ ಶೆಟ್ಟಿ ಸಕ್ಸಸ್ ಸೀಕ್ರೆಟ್ ಬಗ್ಗೆ ತಂದೆ ಭಾಸ್ಕರ್ ಶೆಟ್ಟಿ ಮಾತು
ಆ್ಯಪಲ್ ಬಾಕ್ಸ್ (apple box) ಅಧಿಕೃತ ಪೇಜಿನಲ್ಲಿ ಹಾಕಿರುವಂತೆ, ‘ಸಿರಿ ರವಿಕುಮಾರ್ (Siri Ravikumar) ನಮ್ಮ ನಿರ್ಮಾಣದ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಆದರೆ, ರಮ್ಯಾ ಬೆಳ್ಳಿಪರದೆಯ ಮೇಲೆ ಆದಷ್ಟು ಬೇಗ ಮರಳಲಿದ್ದಾರೆ’ ಎಂದು ಬರೆಯಲಾಗಿದೆ. ಅಲ್ಲಿಗೆ ರಮ್ಯಾ ಕೇವಲ ನಿರ್ಮಾಪಕಿಯಾಗಿ ಮಾತ್ರ ಉಳಿಯಲಿದ್ದಾರಾ ಅಥವಾ ಇಬ್ಬರು ನಾಯಕಿಯರು ಈ ಸಿನಿಮಾದಲ್ಲಿ ಇದ್ದಾರಾ ಎನ್ನುವುದು ಸದ್ಯಕ್ಕಿರುವ ಕುತೂಹಲ.
ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ರಾಜ್ ಬಿ ಶೆಟ್ಟಿ (Raj B. Shetty) ಈ ಚಿತ್ರದ ನಿರ್ದೇಶಕರು. ಅವರು ಕೂಡ ಪ್ರಧಾನ ಪಾತ್ರವನ್ನೇ ನಿರ್ವಹಿಸುತ್ತಿದ್ದಾರೆ. ಅಲ್ಲದೇ, ನಿರ್ಮಾಣದಲ್ಲೂ ಹೂಡಿಕೆ ಮಾಡಿದ್ದಾರೆ. ರಮ್ಯಾ ಈ ಸಿನಿಮಾದಲ್ಲಿ ಕೇವಲ ನಿರ್ಮಾಪಕಿಯಾಗಿ ಮಾತ್ರ ಇರುತ್ತಾರಾ? ಅಥವಾ ನಟಿಯಾಗಿಯೂ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಾರಾ ಎನ್ನುವುದನ್ನು ಕಾದು ನೋಡಬೇಕು.