– ಮತ್ತೊಂದು ಸಂಕಷ್ಟದಲ್ಲಿ ಸ್ಯಾಂಡಲ್‍ವುಡ್ ಪದ್ಮಾವತಿ
ಬೆಂಗಳೂರು: ಮಾಜಿ ಸಂಸದೆ ಮತ್ತು ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ.
ಕಾಂಗ್ರೆಸ್ ಐಟಿ ಸೆಲ್ ನಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಸಂತ್ರಸ್ತೆ ಮಹಿಳೆಗೆ ಐಟಿ ಸೆಲ್ ಮುಖ್ಯಸ್ಥೆ ರಮ್ಯಾರಿಂದ ನಿಂದನೆ ಆಗಿದೆ ಎಂಬ ಮಾತು ಕೇಳಿ ಬರುತ್ತಿದ್ದು, ಈಗ ರಮ್ಯಾ ವಿರುದ್ಧ ದೂರುದಾರೆ ಗಂಭೀರ ಆರೋಪ ಮಾಡುತ್ತಿದ್ದಾರೆ.
Advertisement
ದೂರು ಕೊಟ್ಟರೂ ಲೈಂಗಿಕ ಕಿರುಕುಳ ನೀಡಿದ್ದ ಪಟ್ನಾಯಕ್ ವಿರುದ್ಧ ಕ್ರಮ ತೆಗೆದುಕೊಂಡಿಲ್ಲ. ಆದರೆ ರಮ್ಯಾ ಅವರು ನನ್ನನ್ನೇ ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಅಷ್ಟೇ ಅಲ್ಲದೇ ಲೈಂಗಿಕ ಕಿರುಕುಳ ಕೊಟ್ಟ ಐಟಿ ಸೆಲ್ ಸದಸ್ಯ ಚಿರಾಗ್ ಪಟ್ನಾಯಕ್ ಪರವೇ ರಮ್ಯಾ ನಿಂತಿದ್ದಾರೆ ಎಂದು ಸಂತ್ರಸ್ತೆ ಆರೋಪಿಸುತ್ತಿದ್ದಾರೆ.
Advertisement
Advertisement
ಸದ್ಯ ಸಂತ್ರಸ್ತೆಯ ಆರೋಪದ ಹಿನ್ನೆಲೆಯಲ್ಲಿ ಚಾರ್ಜ್ ಶೀಟ್ ನಲ್ಲಿ ರಮ್ಯಾ ಹೆಸರು ಉಲ್ಲೇಖವಾಗಿದೆ. ಐಟಿ ಸೆಲ್ ಸದಸ್ಯೆ 2013 ಏಪ್ರಿಲ್ 4ರಿಂದ ಮೇ 23ರವರೆಗೆ ಐಟಿ ಸೆಲ್ ಸದಸ್ಯ ಚಿರಾಗ್ ಪಟ್ನಾಯಕ್ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅವರು ಆರೋಪ ಮಾಡಿದ್ದಾರೆ.
Advertisement
ಈ ಹಿಂದೆ ಕೂಡ ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ನಿಂದ ಪಕ್ಷಕ್ಕೆ ಮುಜುಗರವಾದ ಹಿನ್ನೆಲೆಯಲ್ಲಿ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಹುದ್ದೆಯಿಂದ ಕಿಕ್‍ಔಟ್ ಮಾಡಲಾಗಿದೆ ಎಂದು ಹೇಳಲಾಗುತ್ತಿತ್ತು. ಇದಲ್ಲದೇ ರಾಹುಲ್ ಗಾಂಧಿಯವರ ಟ್ವೀಟ್ ಹಾಗೂ ಸಾರ್ವಜನಿಕ ಭಾಷಣಗಳ ಉಸ್ತುವಾರಿಗಳಿಂದಲೂ ಅವರಿಗೆ ಕೋಕ್ ನೀಡಲಾಗಿದೆ ಎಂದು ವರದಿಯಾಗಿತ್ತು.
ಈ ಸುದ್ದಿಗೆ ಪೂರಕ ಎಂಬಂತೆ ರಮ್ಯಾ ಅವರು ಈ ಹಿಂದೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ, ನಟಿ, ಸಂಸದೆ ಎಂದು ಬರೆದುಕೊಂಡಿದ್ದರು. ಆದರೆ ಈಗ ಈ ಎಲ್ಲ ಮಾಹಿತಿಗಳನ್ನು ಡಿಲೀಟ್ ಮಾಡಿದ್ದಾರೆ.
ಏನಿದು ಟ್ವೀಟ್?
ರಫೇಲ್ ಒಪ್ಪಂದ ಕುರಿತು ರಮ್ಯಾ ಸೆಪ್ಟೆಂಬರ್ 24 ರಂದು ಮೋದಿ ಅವರ ಮೇಣದ ಪ್ರತಿಮೆಯ ಫೋಟೋ ಟ್ವೀಟ್ ಮಾಡಿದ್ದರು. ಈ ಫೋಟೋದಲ್ಲಿ ಮೋದಿ ಸ್ವತಃ ತಮ್ಮ ಪ್ರತಿಮೆ ಮೇಲೆ ಕಳ್ಳ ಎಂದು ಬರೆಯುವಂತೆ ಚಿತ್ರಿಸಲಾಗಿದೆ. ಈ ಫೋಟೋಗೆ ಕಳ್ಳ ಪ್ರಧಾನಿ ಸುಮ್ಮನಿದ್ದಾರೆ (#ChorPMChupHai) ಎಂಬ ಹ್ಯಾಷ್ ಟ್ಯಾಗನ್ನು ರಮ್ಯಾ ಬಳಸಿ ಟ್ವೀಟ್ ಮಾಡಿದ್ದರು. ರಮ್ಯಾ ಮಾಡಿದ ಟ್ವಿಟ್ ನಲ್ಲಿ ನರೇಂದ್ರ ಮೋದಿ ವಿರುದ್ಧ ದ್ವೇಷ ಕಾರುವ ಅಂಶವಿದೆ ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಿಜ್ವಾನ್ ಅಹ್ಮದ್ ದೂರು ನೀಡಿದ್ದರು. ದೂರು ನೀಡಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಎಫ್‍ಐಆರ್ ದಾಖಲಾಗಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
https://www.youtube.com/watch?v=h7Pafv4CDXY