ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಪುನೀತ್ ಪರ್ವ ಕಾರ್ಯಕ್ರಮದಲ್ಲಿ ರಮ್ಯಾ (Ramya), ಪ್ರಭುದೇವ (Prabhudeva) ಸೇರಿದಂತೆ ಅನೇಕ ತಾರೆಯರು ನೃತ್ಯ (Dance) ಮಾಡಲಿದ್ದಾರೆ. ಪುನೀತ್ ರಾಜ್ ಕುಮಾರ್ ನಟನೆಯ ಸಿನಿಮಾಗಳ ಗೀತೆಗಳಿಗೆ ತಾರೆಯರು ಹೆಜ್ಜೆ ಹಾಕಲಿದ್ದಾರೆ. ಈಗಾಗಲೇ ಅರಮನೆ ಮೈದಾನ ಸಿದ್ಧಗೊಂಡಿದ್ದು, ಕನ್ನಡ ಸಿನಿಮಾ ರಂಗದ ಬಹುತೇಕ ತಾರೆಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ.
ಖ್ಯಾತಗಾಯಕರಾದ ವಿಜಯ್ ಪ್ರಕಾಶ್, ಗುರುಕಿರಣ್ ಸೇರಿದಂತೆ ಅನೇಕ ಗಾಯಕರು ಈ ಕಾರ್ಯಕ್ರಮದಲ್ಲಿ ಪುನೀತ್ ನಟನೆಯ ಹಾಡುಗಳನ್ನು ಹೇಳಲಿದ್ದಾರೆ. ಐದುನೂರಕ್ಕೂ ಹೆಚ್ಚು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುವ ಸಾಧ್ಯತೆ ಇದೆ. ಪುನೀತ್ ರಾಜ್ ಕುಮಾರ್ ಅವರನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುವ ಬಹೃತ್ ಸಮಾರಂಭ ಇದಾಗಿದೆ. ಇದನ್ನೂ ಓದಿ:ಆಮದು ಮಾಡಿಕೊಂಡ ಧರ್ಮಗಳು ಎಂದು ಚೇತನ್ ಮತ್ತೆ ಕಿಡಿ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಪುನೀತ್ ರಾಜ್ ಕುಮಾರ್ (Puneeth Rajkumar) ನೆನಪಿನಲ್ಲಿ ‘ಪುನೀತ್ ಪರ್ವ’ (Puneeth Parva) ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಪುನೀತ್ ನಟನೆಯ ಕಟ್ಟಕಡೆಯ ಡಾಕ್ಯುಮೆಂಟರಿ ಮಾದರಿಯ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಕೂಡ ಇದಾಗಿದ್ದು, ಭಾರತೀಯ ಸಿನಿಮಾ ರಂಗದ ಅನೇಕ ದಿಗ್ಗಜರು ಸಮಾರಂಭದಲ್ಲಿ ಭಾಗಿ ಆಗುತ್ತಿದ್ದಾರೆ. ಅಲ್ಲದೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಗಿದೆ.
ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಮಾತ್ರವಲ್ಲ, 40 ಸಾವಿರಕ್ಕೂ ಅಧಿಕ ಅಭಿಮಾನಿಗಳು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿ ಆಗಿರುವುದರಿಂದ ಪೊಲೀಸ್ ಬಂದೋಬಸ್ತ್ ಕೂಡ ಮಾಡಿಕೊಳ್ಳಲಾಗಿದೆ. ಸಂಜೆ 6 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭವು ಸರಾಗವಾಗಿ ನಡೆಯುವಂತೆ ನೋಡಿಕೊಳ್ಳುವುದಕ್ಕಾಗಿ ಬೆಂಗಳೂರು ಪೊಲೀಸರು ಭಾರೀ ಸಿದ್ದತೆಯನ್ನೇ ಮಾಡಿಕೊಂಡಿದ್ದಾರೆ.