ಮೋಹಕತಾರೆ ರಮ್ಯಾ (Ramya) ಸಿನಿಮಾ ಕಾರ್ಯಕ್ರಮವೊಂದಕ್ಕೆ ಹಾಜರಿ ಹಾಕಿದ್ದರು. ಈ ವೇಳೆ, ಮದುವೆ, ಸಿನಿಮಾ ಕಮ್‌ಬ್ಯಾಕ್ ಬಗ್ಗೆ ಮಾತನಾಡುವುದರ ಜೊತೆಗೆ ಹಲವು ವಿಚಾರಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ (Darshan) ಬಗ್ಗೆ ಕೇಳ್ತಿದ್ದಂತೆ ಉತ್ತರಿಸಲು ಅವರು ನಿರಾಕರಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್‌ನಲ್ಲಿರುವ ದರ್ಶನ್ ಬಗ್ಗೆ ಎದುರಾದ ಪ್ರಶ್ನೆಗೆ ರಮ್ಯಾ, ಆ ಬಗ್ಗೆ ಮಾತನಾಡುವುದಿಲ್ಲ ಎಂದು ನಿರಾಕರಿಸಿದ್ದಾರೆ. ದರ್ಶನ್ ಕೇಸ್ ಹೆಸರು ಹೇಳ್ತಿದ್ದಂತೆ ನೋ ಎಂದಿದ್ದಾರೆ.
ಈ ಹಿಂದೆ ಮಾಧ್ಯಮದ ಜೊತೆ ಮಾತನಾಡಿದ ರಮ್ಯಾ, ನಟರಾಗಿ ಜವಾಬ್ದಾರಿಯುತ ಸ್ಥಾನದಲ್ಲಿ ಸಮಾಜಕ್ಕೆ ಒಳ್ಳೆಯದನ್ನು ನೀಡಬೇಕು. ಅಭಿಮಾನಿಗಳನ್ನು ಬಳಸಿಕೊಂಡು ಕೊಲೆ ಮಾಡುವುದು ಎಷ್ಟು ಸರಿ? ಇಂತಹದ್ದನ್ನು ಸಮರ್ಥಿಸಿಕೊಂಡರೆ ಸಮಾಜಕ್ಕೆ ನಾವು ಕೊಡುವ ಸಂದೇಶ ಏನು? ಕಾನೂನಿಗಿಂತ ಯಾರೂ ದೊಡ್ಡವರಿಲ್ಲ ಎಂದು ರೇಣುಕಾಸ್ವಾಮಿ ಕೇಸ್ ಬಗ್ಗೆ ಮಾತನಾಡಿದ್ದರು.