ಮೋದಿ ಟ್ವೀಟ್ ಬಳಸಿ ಬಿಜೆಪಿಯನ್ನ ಕುಟುಕಿದ ರಮ್ಯಾ

Public TV
1 Min Read
ramya bjp

ನವದೆಹಲಿ: ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹೊರಬಂದಿದ್ದು, ಬಿಜೆಪಿ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದೆ. ಐದರಲ್ಲಿ ಕಾಂಗ್ರೆಸ್ ಮೂರು ರಾಜ್ಯಗಳಲ್ಲಿ ಸರ್ಕಾರ ರಚಿಸಲ ಸಿದ್ಧಗೊಂಡಿದೆ. ಉಳಿದಂತೆ ತೆಲಂಗಾಣ ಮತ್ತು ಮೀಜೋರಾಂನಲ್ಲಿ ಪ್ರಾದೇಶಿಕ ಪಕ್ಷಗಳು ಗೆಲುವಿನ ಪತಾಕೆಯನ್ನು ಹಾರಿಸಿವೆ.

ಕಾಂಗ್ರೆಸ್ ಗೆಲುವು ಸಾಧಿಸುತ್ತಲೇ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ತಮ್ಮದೇ ಶೈಲಿಯಲ್ಲಿ ಟ್ವೀಟ್ ಮಾಡುವ ಮೂಲಕ ಬಿಜೆಪಿಯನ್ನು ಕುಟುಕಿದ್ದಾರೆ. 2017ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವನ್ನು ಕಂಡಿತ್ತು. ಪಂಜಾಬ್ ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ನೆಲಕಚ್ಚಿತ್ತು. ಅಂದು ನರೇಂದ್ರ ಮೋದಿ ಇನ್ ಟ್ವಿಟ್ಟರ್ ಖಾತೆಯ ಟ್ವೀಟ್ ನ್ನು ಬಳಸಿ ರಮ್ಯಾ ನೇರವಾಗಿ ಬಿಜೆಪಿ ಮುಕ್ತ ಭಾರತ ಎಂದು ಹೇಳುವ ಮೂಲಕ ಗುಡುಗಿದ್ದಾರೆ.

ಏನದು ಟ್ವೀಟ್?
ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಖಂಡ ಮತ್ತು ಮಣಿಪುರ ರಾಜ್ಯಗಳಲ್ಲಿ ಬಿಜೆಪಿ ಅಲೆ ಕಾಣುತ್ತಿದೆ. ಇದು ಕಾಂಗ್ರೆಸ್ ಮುಕ್ತ ಭಾರತದ ಆರಂಭ: ನರೇಂದ್ರ ಮೋದಿ ಎಂದು ಬರೆದು ಟ್ವೀಟ್ ಮಾಡಲಾಗಿತ್ತು.

ಇಂದು ಅದೇ ಟ್ವೀಟ್‍ನ ಫೋಟೋವನ್ನು ಎಡಿಟ್ ಮಾಡಿ ರಮ್ಯಾವರು ತಮ್ಮ ಟ್ವಿಟ್ಟರ್ ನಲ್ಲಿ ಹಾಕಿಕೊಂಡಿದ್ದಾರೆ. ಕಾಂಗ್ರೆಸ್ ಪದದ ಮೇಲೆ ಗೆರೆ ಹಾಕಿ ಇದು ಬಿಜೆಪಿ ಮುಕ್ತ ಭಾರತದ ಆರಂಭ ಎಂದು ಹಾಕಿಕೊಳ್ಳುವ ಮೂಲಕ ತಿರುಗೇಟು ನೀಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *