ಬೆಂಗಳೂರು: ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿರುವ ಮಾಜಿ ಸಂಸದೆ ರಮ್ಯಾ ತಮ್ಮ ಟ್ವಿಟ್ಟರ್ ಮತ್ತು ಇನ್‍ಸ್ಟಾಗ್ರಾಂ ಖಾತೆಯ ಸಂದೇಶಗಳನ್ನು ಡಿಲೀಟ್ ಮಾಡಿಕೊಂಡಿದ್ದಾರೆ.
ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕವೂ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದ ರಮ್ಯಾ ಖಾತೆ ಟ್ವಿಟ್ಟರ್ ಅಂಗಳದಿಂದ ಮಾಯವಾಗಿದೆ. ಲೋಕಸಭಾ ಚುನಾವಣೆಯ ಸೋಲಿನ ನಿರಾಶೆಯಿಂದ ಸಾಮಾಜಿಕ ಜಾಲತಾಣದಿಂದ ದೂರ ಉಳಿದ್ರಾ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.
Advertisement
Advertisement
ತಾತ್ಕಲಿಕವಾಗಿ ಎಲ್ಲರನ್ನು ಬ್ಲಾಕ್ ಮಾಡಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ. ಇತ್ತ ಇನ್‍ಸ್ಟಾಗ್ರಾಂನಲ್ಲಿ ರಮ್ಯಾರ ಖಾತೆ ಕಾಣಸಿಗುತ್ತಿಲ್ಲ. ಫೇಸ್‍ಬುಕ್ ಖಾತೆಯಲ್ಲಿ ಮಾತ್ರ ಆ್ಯಕ್ಟೀವ್ ಆಗಿದ್ದಾರೆ. ಸಾಮಾಜಿಕ ಜಾಲತಾಣದ ಮುಖ್ಯಸ್ಥೆಯಾಗಿರುವ ರಮ್ಯಾರ ಖಾತೆಗಳು ಡಿಲೀಟ್ ಆಗಿರುವ ಕುರಿತು ಹಲವು ಊಹಾಪೋಹಗಳು ಹರಿದಾಡುತ್ತಿವೆ.