ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂದಿ ಜೊತೆ ಚರ್ಚೆಯಲ್ಲಿ ಪಾಲ್ಗೊಳ್ಳಲು ಧೈರ್ಯವಿಲ್ಲ ಅಂತ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಲೇವಡಿ ಮಾಡಿದ್ದಾರೆ.
ದೇಶದ ಪ್ರಧಾನಿ ಬಗ್ಗೆ ಟ್ವೀಟ್ ಮಾಡುವ ಮೂಲಕ ರಮ್ಯಾ ಮತ್ತೆ ಮೋದಿ ಕಾಲೆಳೆದಿದ್ದಾರೆ. ಕಾಂಗ್ರೆಸ್ ಟ್ವಿಟ್ಟರ್ ಖಾತೆಯಲ್ಲಿ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಅವರಿಗೆ ರಾಹುಲ್ ಜೊತೆ 15 ನಿಮಿಷದ ಚರ್ಚೆಯಲ್ಲಿ ಪಾಲ್ಗೊಳಲು ಧೈರ್ಯವಿದೆಯಾ ಅನ್ನೋ ಪ್ರಶ್ನೋತ್ತರವನ್ನು ಪೋಸ್ಟ್ ಮಾಡಿದ್ದರು.
Advertisement
Advertisement
ಇದಕ್ಕೆ ಪ್ರತಿಕ್ರಿಯಿಸಿದ ರಮ್ಯಾ, ಪ್ರಧಾನಿ ಮೋದಿ ಅವರು ಹೇಳುವಂತೆ 56 ಇಂಚು ಎದೆ ಇಲ್ಲದೇ ಹೋದರೂ ಸಂಸತ್ತಿನಲ್ಲಿ 15 ನಿಮಿಷ ರಾಹುಲ್ ಗಾಂಧಿಯವರನ್ನು ಎದುರಿಸುವ ಸವಾಲು ಸ್ವೀಕರಿಸುವರೆಂದು ನಂಬಿದ್ದೇನೆ ಅಂತ ಹೇಳಿದ್ದಾರೆ. ಇದನ್ನೂ ಓದಿ: ಕಾಣೆಯಾಗಿದ್ದ ಮೋದಿ ಮಾರ್ಕ್ಸ್ ಕಾರ್ಡ್ ರಮ್ಯಾಗೆ ಸಿಕ್ತಂತೆ!
Advertisement
ರಮ್ಯಾ ಅವರು ಟ್ವೀಟ್ ಮಾಡುತ್ತಿದ್ದಂತೆಯೇ ಹಲವಾರು ಪರ ವಿರೋಧ ಚರ್ಚೆಗಳು ಆರಂಭವಾದವು. ರಾಹುಲ್ ಗಾಂಧಿಯವರಿಗೆ ಚೀಟಿ ಇಲ್ಲದೇ 15 ನಿಮಿಷ ನಿರರ್ಗಳವಾಗಿ ಮಾತನಾಡುವ ಧೈರ್ಯವಿದೆಯೇ? ಅವರಿಗೆ ನೀವು ಬರೆದ ಅಕ್ಷರಗಳನ್ನೇ ಓದಲು ಆಗುತ್ತಿಲ್ಲ ಅಂತ ಹೇಳಿದ್ದಾರೆ.
Advertisement
Do you think PM Modi will be brave enough to accept Congress President Rahul Gandhi’s challenge to a 15-minute debate? #IndiaSpeaks #RahulDaresModi
— Congress (@INCIndia) April 24, 2018
I really hope @narendramodi takes up @RahulGandhi’s challenge to a debate in parliament, although, I am quite certain Modi ji isn’t the 56 inch he claims to be. #RahulDaresModi
— Ramya/Divya Spandana (@divyaspandana) April 24, 2018