ಸಿನಿಮಾಗಳು ಸಟ್ಟೆರುತ್ತವೆ ಆದರೆ ಬೆರಳೆಣಿಕೆಯಷ್ಟು ಸಿನಿಮಾ ಮಾತ್ರ ಚಿತ್ರೀಕರಣ ಮುಗಿಸಿ ಬಿಡುಗಡೆಯಾಗುತ್ತವೆ. ಬಾಲಿವುಡ್ನಲ್ಲಿ ಸರಿ ಸುಮಾರು 5 ವರ್ಷಗಳ ಹಿಂದೆ ಚಿತ್ರೀಕರಣ ಪ್ರಾರಂಭಿಸಿದ್ದ ‘ಬ್ರಹ್ಮಾಸ್ತ್ರ’ ಚಿತ್ರತಂಡ ಇದೀಗ ಚಿತ್ರೀಕರಣವನ್ನು ಪೂರ್ಣ ಗೊಳಿಸಿದೆ.
‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ನಟಿ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಿರ್ದೇಶಕ ಅಯಾನ್ ಮುಖರ್ಜಿ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಚಿತ್ರೀಕರಣ ಮುಕ್ತಾಯವಾಗಿರುವ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ರಶ್ಮಿಕಾ ವೀಡಿಯೋ ನೋಡಿ ಸುಸ್ತಾದ ಅಭಿಮಾನಿಗಳು – ಕೊಡಗಿನ ಬೆಡಗಿಯ ಜಿಮ್ ಕಸರತ್ತು
View this post on Instagram
ಕೊನೆಗೂ ಚಿತ್ರೀಕರಣ ಮುಕ್ತಾಯವಾಗಿದೆ. ‘ಬ್ರಹ್ಮಾಸ್ತ್ರ’ ಚಿತ್ರೀಕರಣ ಪ್ರಾರಂಭ ಮಾಡಿ 5 ವರ್ಷಗಳು ಕಳೆದಿದೆ. ಕೊನೆಗೂ ನಮ್ಮ ಚಿತ್ರದ ಕೊನೆಯ ಚಿತ್ರೀಕರಣ ಮಾಡಿ ಮುಗಿಸಿದ್ದೇವೆ. ಇದು ನಂಬಲಾಗುತ್ತಿಲ್ಲ. ಸವಾಲಿನ ಲೈಫ್ ಟೈಮ್ ಪಯಣ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಜೊತೆಗೆ ಫೋಟೋವನ್ನು ಶೇರ್ ಮಾಡಿದ್ದಾರೆ. ಆಲಿಯಾ ಮತ್ತು ರಣಬೀರ್ ಇಬ್ಬರೂ ಕತ್ತಿಗೆ ಹೂವಿನ ಹಾರ ಹಾಕಿ ದೇವಸ್ತಾನದಲ್ಲಿರುವ ಫೋಟೋವನ್ನು ಶೇರ್ ಮಾಡಿದ್ದಾರೆ.
ಹಿಂದಿ ಜೊತೆಗೆ ದಕ್ಷಿಣ ಭಾರತದ ಭಾಷೆಗಳಲ್ಲೂ ಬಿಡುಗಡೆಯಾಗುತ್ತಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲೂ ಸಿನಿಮಾ ರಿಲೀಸ್ ಆಗುತ್ತಿದೆ. ಬ್ರಹ್ಮಾಸ್ತ್ರ ಸಿನಿಮಾ ಸೆಪ್ಟಂಬರ್ 9ರಂದು ತೆರೆಗೆ ಬರುತ್ತಿದೆ. ಸಿನಿಮಾದಲ್ಲಿ ರಣಬೀರ್ ಕಪೂರ್ ಮತ್ತು ಆಲಿಯಾ, ಅಮಿತಾ ಬಚ್ಚನ್, ಮೌನಿ ರಾಯ್, ನಾಗಾರ್ಜುನ್ ಅಕ್ಕಿನೇನಿ ಸೇರಿದಂತೆ ಭಾರತೀಯ ಸಿನಿಮಾರಂಗದ ದೊಡ್ಡ ಕಲಾ ಬಳಗವಿದೆ.