ಅಯೋಧ್ಯೆ: ಜನವರಿ 22ರಂದು ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ (Ram Lalla Pran Pratishtha) ಅಯೋಧ್ಯೆ ನಗರ ಬಹುತೇಕ ಸಿಂಗಾರಗೊಂಡಿದೆ. ದೇಶದ ಮೂಲೆ ಮೂಲೆಯಿಂದ ಗಣ್ಯಾತಿಗಣ್ಯರ ಆಗಮನ ಫಿಕ್ಸ್ ಆಗಿದ್ದು, ಅಮಂತ್ರಣ ಪತ್ರಿಕೆ ಹಂಚಿಕೆ ಸಹ ನಡೆಯುತ್ತಿದೆ. ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ನಡುವೆ ಬಾಲಿವುಡ್ ಖ್ಯಾತ ನಟರು ಹಾಗೂ ದಂಪತಿಯೂ ಆಗಿರುವ ರಣಬೀರ್ ಕಪೂರ್ (Ranbir Kapoor) ಮತ್ತು ಆಲಿಯಾ ಭಟ್ (Alia Bhatt) ಅವರಿಗೆ ಆಹ್ವಾನ ಪತ್ರಿಕೆ ನೀಡಲಾಗಿದೆ. ಜ.22ರಂದು ನಡೆಯುವ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಮಮಂದಿರ ಲೋಕಾರ್ಪಣೆ- ತಯಾರಾಗುತ್ತೆ 7 ಸಾವಿರ ಕೆ.ಜಿಯ ರಾಮ ಹಲ್ವಾ
Advertisement
Advertisement
4000 ಸಂತರಿಗೆ ಆಹ್ವಾನ:
ಜನವರಿ 22 ರಂದು ಪ್ರಾಣ ಪ್ರತಿಷ್ಠೆಗೆ 4000 ಸಂತರಿಗೆ ಆಹ್ವಾನಿಸಲಾಗಿದ್ದು, ಭಾರತದ ಎಲ್ಲಾ ಸಂಪ್ರದಾಯಗಳ ಸಂತರನ್ನು ಆಹ್ವಾನಿಸಲಾಗಿದೆ. ಅಂಡಮಾನ್ ನಿಕೋಬಾರ್ ಕರಾವಳಿಯಲ್ಲಿ ವಾಸಿಸುವ ಧಾರ್ಮಿಕ ಮುಖಂಡರು, ಜಾರ್ಖಂಡ್‌ನ ಬನವಾಸಿ ಪ್ರದೇಶದ ಧಾರ್ಮಿಕ ಮುಖಂಡರು ಮತ್ತು 125 ಸಂತ ಸಂಪ್ರದಾಯಗಳ ಧಾರ್ಮಿಕ ಮುಖಂಡರನ್ನು ಆಹ್ವಾನಿಸಲಾಗಿದೆ.
Advertisement
ಪ್ರಾಣ ತ್ಯಾಗ ಮಾಡಿದ ಕುಟುಂಬಗಳಿಗೆ ಆಹ್ವಾನ:
ರಾಮ ಮಂದಿರ ಆಂದೋಲನದಲ್ಲಿ ಪ್ರಾಣ ತ್ಯಾಗ ಮಾಡಿದ ರಾಮಭಕ್ತನ ಕುಟುಂಬದ ಸದಸ್ಯರು, ಕೈಗಾರಿಕಾ ಲೋಕದ ಮುಖ್ಯಸ್ಥರು, ತಿರುಪತಿ, ವೈಷ್ಣೋದೇವಿ, ಕಾಶಿ ವಿಶ್ವನಾಥ ದೇಗುಲ ಪ್ರಮುಖರನ್ನು ಪ್ರಾಣ ಪ್ರತಿಷ್ಠೆಗೆ ಆಹ್ವಾನಿಸಲಾಗಿದೆ. 25 ಆರ್‌ಎಸ್‌ಎಸ್ ಕಾರ್ಯಕರ್ತರು, 100 ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು, ಸಿಆರ್‌ಪಿಎಫ್ ಅಧಿಕಾರಿಗಳು ಮತ್ತು ಉತ್ತರ ಪ್ರದೇಶದ ನಿವೃತ್ತ ಪೊಲೀಸ್ ಅಧಿಕಾರಿಗಳಿಗೂ ಆಹ್ವಾನ ನೀಡಲಾಗಿದೆ. ಇದನ್ನೂ ಓದಿ: ಈ ದಿನಕ್ಕಾಗಿ ನಾವು ತಪಸ್ಸು ಮಾಡಿದ್ದೆವು: ರಾಮಮಂದಿರ ಉದ್ಘಾಟನೆ ಬಗ್ಗೆ ಮುಸ್ಲಿಂ ಕರಸೇವಕ ಮಾತು
Advertisement
ಟಾಟಾ, ಅಂಬಾನಿ, ಅದಾನಿಗೂ ಆಹ್ವಾನ:
ಲಾರ್ಸೆನ್ ಟೂಬ್ರೊ ಮುಖ್ಯಸ್ಥರ ಜೊತೆ, ರತನ್ ಟಾಟಾ ಅವರ ಉತ್ತರಾಧಿಕಾರಿ ಚಂದ್ರಶೇಖರನ್, ಅಂಬಾನಿ ಮತ್ತು ಅದಾನಿಗೂ ಆಹ್ವಾನ. ಇದನ್ನೂ ಓದಿ: ಕೊಪ್ಪಳಕ್ಕುಂಟು ಶ್ರೀರಾಮನ ನಂಟು – ರಾಮ, ಆಂಜನೇಯ, ಸುಗ್ರೀವರು ಭೇಟಿಯಾಗಿದ್ದ ಚಂಚಲಕೋಟೆ ಬಗ್ಗೆ ನಿಮ್ಗೆ ಗೊತ್ತಾ?
ಸಿನಿಮಾ, ಕ್ರೀಡೆಯ ಗಣ್ಯರು
ತಮಿಳು ಚಲನಚಿತ್ರ ನಟ ರಜನಿಕಾಂತ್, ಬ್ಯಾಡ್ಮಿಂಟನ್ ಆಟಗಾರ ಗೋಪಿಚಂದ್, ಗಾಯಕ ಗುರುದಾಸ್ ಮನ್, ಬಾಲಿವುಡ್ ನಟ ಅಮಿತಾಬ್ ಬಚ್ಚನ್, ನಟಿ ಮಾಧುರಿ ದೀಕ್ಷಿತ್, ಅರುಣ್ ಗೋವಿಲ್, ಚಲನಚಿತ್ರ ನಿರ್ಮಾಪಕ ಮಧುರ್ ಭಂಡಾರ್ಕರ್, ಮಹಾಭಾರತದಲ್ಲಿ ಕೃಷ್ಣನ ಪಾತ್ರ ನಿರ್ವಹಿಸಿದ ನಿತೀಶ್ ಭಾರದ್ವಾಜ್, ಚಲನಚಿತ್ರ ಸೆನ್ಸಾರ್ ಮಂಡಳಿಯ ಪ್ರಸೂನ್ ಜೋಶಿಯನ್ನು ಆಹ್ವಾನಿಸಿದ್ದಾರೆ. ಇದನ್ನೂ ಓದಿ: ರಾಮಮಂದಿರ ಲೋಕಾರ್ಪಣೆ – AI ಕಣ್ಗಾವಲು ಸಾಧ್ಯತೆ, 11 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ