ನವದೆಹಲಿ: ಬಾಲಿವುಡ್‌ನಲ್ಲಿ ಸೆಲೆಬ್ರಿಟಿಗಳ ಸಾಲುಸಾಲು ಮದುವೆಗಳು ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅವರ ಮದುವೆ ವಿಚಾರವೂ ಕುತೂಹಲ ಮೂಡಿಸಿದೆ.
ಬ್ರಹ್ಮಾಸ್ತ್ರ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭವನ್ನು ಬುಧವಾರ ಆಯೋಜಿಸಲಾಗಿತ್ತು. ಈ ವೇಳೆ ಕುತೂಹಲಕಾರಿ ಘಟನೆಯೊಂದು ನಡೆಯಿತು. ʼನಮ್ಮಿಬ್ಬರ ಮದುವೆ ಯಾವಾಗʼ ಎಂದು ಆಲಿಯಾ ಭಟ್ ಬಳಿ ರಣಬೀರ್ ಕಪೂರ್ ಕೇಳಿದ್ದಾರೆ. ʻನನ್ನನ್ನು ಯಾಕೆ ಹೀಗೆ ಕೇಳುತ್ತಿದ್ದೀರಾʼ ಎಂದು ಆಲಿಯಾ ಪ್ರತಿಯಾಗಿ ಕೇಳಿದ ಸುದ್ದಿ ಈಗ ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಪವರ್ ಸ್ಟಾರ್ ಹೆಸರಲ್ಲಿ ಮಿನಿ ಸ್ಮಾರಕ ನಿರ್ಮಿಸಿದ ಹೊಸೂರು ಗ್ರಾಮಸ್ಥರು
ಬ್ರಹ್ಮಾಸ್ತ್ರ ಸಿನಿಮಾದಲ್ಲಿ ರಣಬೀರ್ ಹಾಗೂ ಆಲಿಯಾ ಒಟ್ಟಿಗೆ ನಟಿಸಿದ್ದಾರೆ. ಚಿತ್ರದ ಪೋಸ್ಟರ್ ಬಿಡುಗಡೆ ಸಮಾರಂಭದಲ್ಲಿ ಆಲಿಯಾ, ರಣಬೀರ್ ಮದುವೆ ವಿಚಾರ ಹೀಗೆ ಪ್ರಸ್ತಾಪವಾಯಿತು. ಬಹಳಷ್ಟು ಸೆಲೆಬ್ರಿಟಿಗಳು ಮದುವೆಯಾಗುತ್ತಿದ್ದಾರೆ. ಹೀಗಾಗಿ ನೀವೂ ಬೇಗನೆ ಮದುವೆಯಾಗಿ ಎಂಬ ಮಾತುಗಳು ಈ ವೇಳೆ ಕೇಳಿ ಬಂದವು.
ಕಳೆದ ವರ್ಷವೇ ರಣಬೀರ್ ಮತ್ತು ಆಲಿಯಾ ವಿವಾಹವಾಗುವುದಕ್ಕೆ ನಿರ್ಧರಿಸಿದ್ದರು. ಆದರೆ ಕೋವಿಡ್ ಕಾರಣದಿಂದಾಗಿ ಮದುವೆಯನ್ನು ಮುಂದೂಡಿದರು. ಇದನ್ನೂ ಓದಿ: ಪತ್ನಿ ಜೊತೆಗೆ ರೋಮ್ಯಾಂಟಿಕ್ ಆಗಿ ಸ್ಟೆಪ್ಸ್ ಹಾಕಿದ ನಿಖಿಲ್