ಬೆಂಗಳೂರು: ಯಾರೋ ಬಿಜೆಪಿಯವರೇ ಯಡಿಯೂರಪ್ಪ ಮನೆಗೆ ಕಲ್ಲು ಎಸೆಯುವುದಕ್ಕೆ ಕಳಿಸಿರಬೇಕು ಎಂದು ರಣದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala) ಹೇಳಿದರು.
ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ನಿವಾಸದ ಬಳಿ ನಡೆದ ಘಟನೆಗೆ ಬೇಸರವಿದೆ. ಯಡಿಯೂರಪ್ಪ ಮನೆ ಮೇಲೆ ಯಾಕೆ ದಾಳಿ ಆಯ್ತು? ಅವರು ಈಗ ಅಧಿಕಾರದಲ್ಲಿಲ್ಲ. ಅದಕ್ಕೆ ಯಾರೋ ಬಿಜೆಪಿಯವರೇ (BJP) ಯಡಿಯೂರಪ್ಪ ಮನೆಗೆ ಕಲ್ಲು ಎಸೆಯುವುದಕ್ಕೆ ಕಳಿಸಿರಬೇಕು ಎಂದು ತಿಳಿಸಿದರು.
Advertisement
Advertisement
ಬೊಮ್ಮಾಯಿ ಆಧುನಿಕ ಶಕುನಿ. ಜನರನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಜಾತಿ ಜಾತಿಗಳ ಮಧ್ಯೆ ಸಂಘರ್ಷ ತರುತ್ತಿದ್ದಾರೆ. 56% ಮೀಸಲಾತಿಯನ್ನು ಹೇಗೆ ಜಾರಿಗೆ ತರುತ್ತಾರೆ? ಎಸ್.ಸಿ, ಎಸ್.ಟಿ ಸಮುದಾಯವನ್ನು ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅದೇ ರೀತಿ ಪ್ರಧಾನಿ ಬರ್ತಾರೆ ಟಾಟಾ ಬೈಬೈ ಮಾಡಿ ಹೋಗುತ್ತಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಬಿಜೆಪಿ ಪಕ್ಷವು ಜನರಿಗೆ ಟೊಳ್ಳು ಭರವಸೆ ನೀಡಿಲ್ಲ- ಡಾ.ಕೆ.ಸುಧಾಕರ್
Advertisement
Advertisement
ಘಟನೆಯೇನು?: ರಾಜ್ಯ ಸರ್ಕಾರ (Government Of Karnataka) ಕಳೆದ ಎರಡು ದಿನಗಳ ಹಿಂದೆ ಮೀಸಲಾತಿ (Reservation) ಪ್ರಕಟ ಮಾಡಿದ್ದು, ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ರಾಜ್ಯ ಸರ್ಕಾರದ ಈ ಕ್ರಮವನ್ನು ವಿರೋಧಿಸಿ ಶಿವಮೊಗ್ಗ (Shivamogga) ಜಿಲ್ಲೆಯ ಶಿಕಾರಿಪುರದಲ್ಲಿ (Shikaripura) ಬಂಜಾರ ಸಮುದಾಯದವರು ಪ್ರತಿಭಟನೆ ನಡೆಸಿದರು.
ಸದಾಶಿವ ಆಯೋಗದ ವರದಿಯಿಂದ ಬಂಜಾರ ಸಮುದಾಯಕ್ಕೆ ಅನ್ಯಾಯವಾಗಲಿದೆ. ಹೀಗಾಗಿ ಈ ವರದಿ ಜಾರಿಗೊಳಿಸದಂತೆ ಆಗ್ರಹಿಸಿದರು. ಅಲ್ಲದೇ ನಗರದ ಮಾಳರಕೇರಿ ಬಡಾವಣೆಯಲ್ಲಿನ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ನಿವಾಸದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು. ಇದನ್ನೂ ಓದಿ: ಬಿಎಸ್‍ವೈ ಮನೆ ಮೇಲೆ ದಾಳಿ ರಾಜಕೀಯ ಪ್ರೇರಿತವೂ ಇರಬಹುದು: ಸಚಿವ ಜೋಶಿ