ಬೆಳಗಾವಿ: ಡಿಕೆಶಿ ಮನೆ ಮೇಲೆ ಎಷ್ಟು ಸಾರಿ ರೇಡ್ ಮಾಡುತ್ತೀರಿ. ಸುಮ್ಮನೇ ಇವರ ಮನೆಯಲ್ಲಿ ಒಂದು ಇಡಿ, ಸಿಬಿಐ ಕಚೇರಿ ತಗೆದುಬಿಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ (Randeep Singh Surjewala) ವ್ಯಂಗವಾಡಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ನಿನ್ನೆ ನಡೆದ ದಾಳಿಯನ್ನು ಖಂಡಿಸಿದರು. ಈ ಬಗ್ಗೆ ಮಾತನಾಡಿ, ಡಿಕೆಶಿ ಮನೆಯ ಮೇಲೆ ಒಂದು ಡಜನ್ ಬಾರಿ ದಾಳಿ ಮಾಡಿದ್ದರೂ ನಿಮಗೆ ಏನೂ ಸಿಕ್ಕಿಲ್ಲ. ಕಾಂಗ್ರೆಸ್ ಪಕ್ಷ ಯಾವುದಕ್ಕೂ ಹೆದರಲ್ಲ. ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಕಾರ್ಯಕರ್ತರು ಡಿಕೆಶಿ ಜೊತೆಗೆ ಇದ್ದಾರೆ ಎಂದು ಹೇಳಿದರು.
ಬೊಮ್ಮಾಯಿ (Basavaraj Bommai) ಸರ್ಕಾರ ಅನೈತಿಕ ಮಾರ್ಗದಿಂದ ಬಂದಿರುವ ಸರ್ಕಾರವಾಗಿದೆ. ಬಿಜೆಪಿಯವರು ಜನರ ದೃಷ್ಟಿಯಲ್ಲಿ ನೆಲಕ್ಕೆ ಬಿದ್ದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಒಂದು ದಿನವೂ ಇರಲು ಸರ್ಕಾರಕ್ಕೆ ನೈತಿಕತೆ ಇಲ್ಲ. ಬಿಜೆಪಿ ಹಾಗೂ ಬೊಮ್ಮಾಯಿ ಸರ್ಕಾರ ಚಡಪಡಿಸುತ್ತಿದೆ. ಬೊಮ್ಮಾಯಿ ಸರ್ಕಾರ ಅನೈತಿಕ ಮಾರ್ಗದಿಂದ ಬಂದ ಸರ್ಕಾರವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಜಾಮಿಯಾದಲ್ಲಿನ ಅಕ್ರಮ ಮದರಸಾ ತೆರವಿಗೆ ಹಿಂದೂ ಜಾಗರಣ ವೇದಿಕೆ ಗಡುವು
ಬಿಜೆಪಿಯವರು ಜನರ ದೃಷ್ಟಿಯಲ್ಲಿ ನೆಲಕ್ಕೆ ಬಿದ್ದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಒಂದು ದಿನವೂ ಇರಲು ಸರ್ಕಾರಕ್ಕೆ ನೈತಿಕತೆ ಇಲ್ಲ. 40 ಪರ್ಸೆಂಟ್‌ನಲ್ಲಿ ಬೊಮ್ಮಾಯಿ ಸರ್ಕಾರದಲ್ಲಿ ಮುಳುಗಿದೆ. ಬೊಮ್ಮಾಯಿ ಸರ್ಕಾರ ಎರಡು ಕೈಯಿಂದ ಜನರನ್ನೂ ಲೂಟಿ ಮಾಡಿದೆ. ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೊಟ್ಟ ಮಾತು ಉಳಿಸಿದ ಬಿಜೆಪಿ – ಸಭಾಪತಿ ಸ್ಥಾನಕ್ಕೆ ಹೊರಟ್ಟಿ ನಾಮಪತ್ರ ಸಲ್ಲಿಕೆ