ಬೆಂಗಳೂರು: ಅತ್ಯಾಚಾರ ಕುರಿತು ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ನೀಡಿದ ವಿವಾದಾತ್ಮಕ ಹೇಳಿಕೆ ಬಗ್ಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಸ್ಪೀಕರ್ ಹಾಗೂ ಶಾಸಕ ಇಬ್ಬರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement
ಹಿರಿಯ ಕಾಂಗ್ರೆಸ್ ಶಾಸಕರಿಂದ ವ್ಯಕ್ತವಾದ ಹೆಚ್ಚು ಆಕ್ಷೇಪಾರ್ಹ ಮತ್ತು ಮತಿಹೀನ ಹೇಳಿಕೆ ಹಾಗೂ ಅದಕ್ಕೆ ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಪ್ರತಿಕ್ರಿಯಿಸಿದ ರೀತಿಯನ್ನು ಕಾಂಗ್ರೆಸ್ ಪಕ್ಷವು ಒಪ್ಪುವುದಿಲ್ಲ. ಸಭಾಧ್ಯಕ್ಷರು ಮತ್ತು ಹಿರಿಯ ಶಾಸಕರು ಮಾದರಿಯಾಗಿರಬೇಕು. ಅಂತಹ ಸ್ವೀಕಾರಾರ್ಹವಲ್ಲದ ನಡವಳಿಕೆಯಿಂದ ದೂರವಿರಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಕುರಿತ ರಮೇಶ್ ಕುಮಾರ್ ಹೇಳಿಕೆಗೆ ಕಾಂಗ್ರೆಸ್ ನಾಯಕರಿಂದಲೇ ಟೀಕೆ
Advertisement
Congress Party disapproves the exchange of highly objectionable & insensitive banter between Karnataka Assembly Speaker & Sr. Congress MLA in the House.
Speaker as custodian & Sr legislators are expected to be role models & should desist from such unacceptable behaviour.
— Randeep Singh Surjewala (@rssurjewala) December 17, 2021
Advertisement
ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದಿಸಿ ಎಂದು ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದರು.
Advertisement
ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ರಮೇಶ್ ಕುಮಾರ್ ಟ್ವೀಟ್ ಮಾಡಿ ಕ್ಷಮೆ ಯಾಚಿಸಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಎಚ್ಚರಿಕೆಯಿಂದ ಮಾತಾಡ್ತೀನಿ- ಕ್ಷಮೆಯಾಚಿಸಿದ ರಮೇಶ್ ಕುಮಾರ್