Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 3ನೇ ಕಂತಿಗಾಗಿ ಮತ್ತೆ ಬಂದ ಸುರ್ಜೇವಾಲಾ: ಸಿ.ಟಿ ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 3ನೇ ಕಂತಿಗಾಗಿ ಮತ್ತೆ ಬಂದ ಸುರ್ಜೇವಾಲಾ: ಸಿ.ಟಿ ರವಿ

Bengaluru City

3ನೇ ಕಂತಿಗಾಗಿ ಮತ್ತೆ ಬಂದ ಸುರ್ಜೇವಾಲಾ: ಸಿ.ಟಿ ರವಿ

Public TV
Last updated: November 28, 2023 6:33 pm
Public TV
Share
3 Min Read
CT RAVI
SHARE

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ (Randeep Surjewala) ಅವರು ಮತ್ತೆ ಬೆಂಗಳೂರಿಗೆ ಬಂದಿದ್ದಾರೆ. ಮೊದಲನೇ ಕಂತು ಬಂತು, 2ನೇ ಕಂತು ಬಂತು. 3ನೇ ಕಂತು ಬೇಕು. 3ನೇ ಕಂತಿನಲ್ಲಿ ಚೌಕಾಸಿ ಆಗಬಾರದೆಂದು 3ನೇ ಕಂತಿಗೋಸ್ಕರ ಮತ್ತೆ ಬೆಂಗಳೂರಿಗೆ (Bengaluru) ಬಂದಂತಿದೆ ಎಂದು ಮಾಜಿ ಸಚಿವ ಮತ್ತು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (CT Ravi) ಆರೋಪಿಸಿದ್ದಾರೆ.

ಮಲ್ಲೇಶ್ವರದ (Malleshwaram) ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಯಾವಾಗಲೂ ಚುನಾವಣೆ ನಡೆಸುವುದೇ ಕಡೇ 3 ದಿನಗಳಲ್ಲಿ ಎಂದು ಟೀಕಿಸಿದರು. ತೆಲಂಗಾಣ (Telangana) ಚುನಾವಣಾ (Election) ಉಸ್ತುವಾರಿಯನ್ನು ಕರ್ನಾಟಕದ ಉಪ ಮುಖ್ಯಮಂತ್ರಿಗೆ ನೀಡಿದ್ದಾರೆ. ಹಾಗಾಗಿ 3ನೇ ಕಂತಿಗಾಗಿ ಬಂದಂತಿದೆ. ಕರ್ನಾಟಕ ಇನ್ನೆಷ್ಟು ಕಂತು ಕೊಡಬೇಕೋ? ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡುವ ಬಗ್ಗೆ ನಾವು ಮುಂಚೆಯೇ ತಿಳಿಸಿದ್ದೆವು. ಕಾಂಗ್ರೆಸ್ ಗೆಲ್ಲಿಸಬೇಡಿ ಎಂದು ಜನರಿಗೆ ಮನವಿ ಮಾಡಿದ್ದೆವು. ಆದರೆ ಅದನ್ನು ಮನವರಿಕೆ ಮಾಡಿಕೊಡಲಾಗಲಿಲ್ಲ. ಗ್ಯಾರಂಟಿ ಆಸೆಗೋ, ಇನ್ಯಾವುದೋ ಕಾರಣಕ್ಕೋ ಕಾಂಗ್ರೆಸ್ಸನ್ನು (Congress) ಗೆಲ್ಲಿಸಿದ್ದಾರೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಸ್ವಚ್ಚತೆ, ನೈರ್ಮಲ್ಯ ಸಂರಕ್ಷಣೆಗೆ ಸ್ಥಳೀಯ ಸಂಸ್ಥೆಗಳಿಗೆ 2 ಸಾವಿರ ಕೋಟಿ ಅನುದಾನ: ಡಿಕೆಶಿ

ಸುರ್ಜೇವಾಲಾ ಮೇಲೆ ಹದ್ದಿನ ಕಣ್ಣಿಡಬೇಕು:
ಈಗ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದ್ದಾರೆ. ಐಟಿ ದಾಳಿ ವೇಳೆ ಇಲ್ಲಿ ಸಿಕ್ಕಿದ್ದ 102 ಕೋಟಿ ರೂ. ಕಾಂಗ್ರೆಸ್‌ಗಾಗಿ ಸಂಗ್ರಹಿಸಿದ ಹಣ. ಚುನಾವಣೆ ಆಯೋಗ, ಐಟಿ, ಇ.ಡಿಗಳು ಸುರ್ಜೇವಾಲಾ ಮೇಲೆ ಹದ್ದಿನ ಕಣ್ಣಿಡಬೇಕು ಎಂದು ಆಗ್ರಹಿಸಿದ ಅವರು ಇವತ್ತೇ ಹಣ ಹೋಗುವ ಸಾಧ್ಯತೆ ಇದೆ ಎಂದು ನುಡಿದರು. ಇದನ್ನೂ ಓದಿ: ಸಿಎಂರ ಜನಸ್ಪಂದನವನ್ನು ಅಭಿನಂದಿಸುತ್ತೇನೆ, ಎಲ್ಲವನ್ನು ಟೀಕಿಸಲ್ಲ: ಹೆಚ್‌ಡಿಕೆ

ನಾನು ಕೆಂಪಣ್ಣ ಅವರ ಹೇಳಿಕೆಯನ್ನು ಗಮನಿಸಿಲ್ಲ. ಗುತ್ತಿಗೆದಾರ ಅಂಬಿಕಾಪತಿ ಅವರ ಸಾವು ದುರದೃಷ್ಟಕರ. ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಬಯಸುತ್ತೇನೆ. ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಎಂದು ಈ ಸಂಬಂಧ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ಕೊಟ್ಟರು. ಹೆಸರು ಮುಚ್ಚಿಡುವ ಒತ್ತಡ ಬಂತೋ? ಯಾವ ಒತ್ತಡದಲ್ಲಿ ಅವರಿಗೆ ಹೃದಯಾಘಾತ ಆಗಿದೆ ಎಂದು ಗೊತ್ತಿಲ್ಲ ಎಂದು ತಿಳಿಸಿದರು. ಇವರಿಗೆ ಸತ್ಯ ಹೇಳುವಂತಿಲ್ಲ. ಅವರ ಸಾವು ದುರದೃಷ್ಟಕರ ಎಂದು ತಿಳಿಸಿದರು. ಸುದೀರ್ಘ ಅವಧಿಯ ಕಾಲ ಆಡಳಿತ ನಡೆಸಿದ ಪಕ್ಷ ತನ್ನ ಸಾಧನೆ, ದೂರದೃಷ್ಟಿಯ ಯೋಜನೆಗಳನ್ನು ಜನರ ಮುಂದಿಡುತ್ತದೆ. ಕಾಂಗ್ರೆಸ್ ಬಳಿ ಮಾಡಿದ ಸಾಧನೆ, ದೂರದೃಷ್ಟಿಯ ಯೋಜನೆಗಳಿಲ್ಲ. ಉದ್ಯೋಗ ಸೃಷ್ಟಿಯ ಯೋಜನೆಗಳಿಲ್ಲ. ತಾತ್ಕಾಲಿಕ ಆಸೆ ತೋರಿಸುವ ರಾಜಕಾರಣ ಅವರದು ಎಂದು ಟೀಕಿಸಿದರು. ಇದನ್ನೂ ಓದಿ: ಡಿಕೆಶಿ ಕೇಸ್ ವಾಪಸ್; ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್

ಕರ್ನಾಟಕದಲ್ಲಿ ಅವರು ಮಾಡಿದ್ದು ಕೂಡ ತಾತ್ಕಾಲಿಕ ಆಸೆ ತೋರಿಸುವ ರಾಜಕಾರಣ. ಅದರ ಬಳಿಕವೂ ಅವರು ಹೇಳಿದಂತೆ ನಡೆದುಕೊಂಡಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಜಾರಿ ಮಾಡಿದ ಹೊಸ ಯೋಜನೆಗಳೇನು? ಬಾಕಿ ಹಣ ಎಷ್ಟು ಪಾವತಿ ಮಾಡಿದ್ದೀರಿ? ಎಷ್ಟು ಉದ್ಯೋಗಗಳ ಸೃಷ್ಟಿ ಆಗಿದೆ? ಇವರ ಆರು ತಿಂಗಳ ಸಾಧನೆಯನ್ನು ತಿಳಿಸಲಿ. ಇಷ್ಟು ಉದ್ಯೋಗ ಸೃಷ್ಟಿ ಮಾಡಿದ್ದೇವೆ. ಇಂತಹ ಹೊಸ ಯೋಜನೆ ಕೈಗೆತ್ತಿಕೊಳ್ಳುತ್ತಿದ್ದೇವೆ. ಊರಿಗೊಂದು ಬಾರ್ ಮೂಲಕ ಆದಾಯ ಹೆಚ್ಚಿಸುವ ನಿಮ್ಮ ಕಲ್ಯಾಣದ ಕಲ್ಪನೆ ಊರಿಗೊಂದು ಬಾರ್? ಎಂಬುದೇ ಎಂದು ಕೇಳಿದರು. ಇದನ್ನೂ ಓದಿ: ಯಾರೇ ನಿಂತರೂ 2 ಲಕ್ಷ ಮತಗಳ ಅಂತರದಿಂದ ಗೆಲ್ತೀನಿ: ಪ್ರತಾಪ್‌ ಸಿಂಹ

ಎಲ್ಲ ನಿರುದ್ಯೋಗಿಗಳಿಗೆ 3,000 ಎಂದರು. ಬಳಿಕ ಈ ವರ್ಷ ಪದವಿ ಮುಗಿಸಿದ ನಿರುದ್ಯೋಗಿಗಳಿಗೆ ಭತ್ಯೆ ಎಂದರು. ಅವರಿಗೂ ಬಂದಿಲ್ಲ. ಎಲ್ಲ ಮಹಿಳೆಯರಿಗೂ 2,000 ಎಂದಿದ್ದರು. ಶೋಭಾ ಕರಂದ್ಲಾಜೆ ನಿಮಗೂ ಫ್ರೀ ಎಂದಿದ್ದರು. ಅದೂ ಸರಿಯಾಗಿ ಜಾರಿ ಆಗಿಲ್ಲ. 200 ಯೂನಿಟ್ ಎಲ್ಲರಿಗೂ ಫ್ರೀ ಎಂದಿದ್ದರು. ಅಲ್ಲೂ ಕೂಡ ಹೇಳಿದ್ದೊಂದು ಮಾಡಿದ್ದೊಂದು ಎಂದು ಆರೋಪಿಸಿದರು. ಇದನ್ನೂ ಓದಿ: 50 ವರ್ಷ ದಾಟಿದೆ, ಒಂಟಿತನ ನಿಮ್ಮನ್ನು ಕಾಡುತ್ತಿರಬಹುದು – ರಾಗಾ ಬಗ್ಗೆ ಓವೈಸಿ ವ್ಯಂಗ್ಯ

ಈ ಮಾದರಿ ಎಷ್ಟು ಕಾಲ ನಡೆದೀತು? ಕಣ್ಣ ಮುಂದೆ ವೆನಿಜುವೆಲಾ ಉದಾಹರಣೆ ಇದೆಯಲ್ಲವೇ? ಸ್ವಾತಂತ್ರ‍್ಯ ನಂತರದ 75 ವರ್ಷಗಳಲ್ಲಿ ಹೆಚ್ಚು ವರ್ಷಗಳ ಕಾಲ ಅಧಿಕಾರ ಅಥವಾ ಅಧಿಕಾರದ ಪ್ರಭಾವಲಯದಲ್ಲಿದ್ದ ಕಾಂಗ್ರೆಸ್ ಪಕ್ಷದ ಸಾಧನೆ ಏನು? ಎಂದು ಕೇಳಿದರು. ನಾವು ಐಐಎಂ, ಐಐಟಿಗಳನ್ನು ದ್ವಿಗುಣಗೊಳಿಸಿದ್ದೇವೆ. ವಿಮಾನನಿಲ್ದಾಣಗಳ ಸಂಖ್ಯೆ ಡಬಲ್ ಮಾಡಿದ್ದೇವೆ. ನೀವೇನು ಹೇಳುತ್ತೀರಿ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಮಹಾತ್ಮ ಗಾಂಧಿ ‘ಮಹಾಪುರುಷ’, ಪ್ರಧಾನಿ ಮೋದಿ ‘ಯುಗಪುರುಷ’: ಉಪ ರಾಷ್ಟ್ರಪತಿ ಬಣ್ಣನೆ

ವಿದ್ಯುತ್ ದರ ಬಹುತೇಕ ಡಬಲ್ ಆಗಿದೆ. ಮದ್ಯದ ಬೆಲೆ 50 ರೂ. ಇಂದ 100-150ಕ್ಕೆ ಏರಿದೆ. ಜನರನ್ನು ಸ್ವಾವಲಂಬಿ ಮಾಡಿದ್ದೀರಾ? ಉದ್ಯೋಗ ಸೃಷ್ಟಿಗೆ ಇಂತಹ ಯೋಜನೆ ಮಾಡಿದ್ದೀರಾ ಎಂದು ಕೇಳಿದರು. ಇದನ್ನೂ ಓದಿ: ಸಿಎಂ ತವರಲ್ಲೇ ಈಗ ಕಮಿಷನ್ ಆರೋಪ

TAGGED:bengalurubjpcongressCT RaviRandeep surjewalaಕಾಂಗ್ರೆಸ್ಬಿಜೆಪಿಬೆಂಗಳೂರುರಣದೀಪ್ ಸುರ್ಜೇವಾಲಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
49 minutes ago
Hampi Utsava
Bellary

ಹಂಪಿ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದ ಗತವೈಭವ ಸೃಷ್ಟಿ

Public TV
By Public TV
50 minutes ago
zameer ahmed students
Bellary

ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್

Public TV
By Public TV
53 minutes ago
Hassan Lady Missing
Crime

ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Public TV
By Public TV
1 hour ago
Anti India Terror Accused
Latest

ಭಾರತ ವಿರೋಧಿ ಭಯೋತ್ಪಾದನಾ ಆರೋಪಿಗಳಿಗೆ ಬಾಂಗ್ಲಾ ಚುನಾವಣೆಯಲ್ಲಿ ಗೆಲುವು

Public TV
By Public TV
1 hour ago
Mumbai metro
Crime

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ – ಓರ್ವ ಸಾವು, ಮೂವರು ಗಂಭೀರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?