ಬೆಂಗಳೂರು: ಇಂದು ಸಂಜೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಗೂ (CLP Meeting) ಮುನ್ನ ಸಿಎಂ ಸಿದ್ದರಾಮಯ್ಯ (CM Siddaramaiah) ತಂಡಕ್ಕೆ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ (Randeep Surjewala) ಅವರು ಎಚ್ಚರಿಕೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ (KPCC Office) ನಡೆದ ಸರ್ವಸದಸ್ಯರ ಸಭೆಯಲ್ಲಿ ಪವರ್ ಶೇರಿಂಗ್ ಬಗ್ಗೆ ಸಚಿವರು ನೀಡಿದ ಬಹಿರಂಗ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಸುವಿನ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಜಮೀರ್ ನೇರ ಕಾರಣ: ಭಾಸ್ಕರ್ ರಾವ್ ಆರೋಪ
ಸರ್ಕಾರಕ್ಕಿಂತ ಪಕ್ಷ ದೊಡ್ಡದು. ಪಕ್ಷ ಇದ್ದಾಗ ಮಾತ್ರ ಯಾವುದೇ ಸರ್ಕಾರವನ್ನು ಬೇಕಾದ್ರೂ ರಚಿಸಬಹುದು. ಯಾವುದೇ ಕಾರಣಕ್ಕೂ ಬಹಿರಂಗ ಹೇಳಿಕೆ ನೀಡಬಾರದು ಎಂದು ಸಿದ್ದರಾಮಯ್ಯ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲೇ ಸಚಿವರ ಹೆಸರು ಹೇಳದೇ ಸುರ್ಜೇವಾಲ ವಾರ್ನಿಂಗ್ ಕೊಟ್ಟಿದ್ದಾರೆ.