‘ಕೀಳಂಬಿ ಮೀಡಿಯಾ ಲ್ಯಾಬ್’ ಮೂಲಕ ರಾಜೇಶ್ ಕೀಳಂಬಿ- ರಂಜಿನಿ ಪ್ರಸನ್ನ ಜೊತೆಗೂಡಿ ಚೊಚ್ಚಲ ಬಾರಿಗೆ ನಿರ್ಮಿಸಿರುವ ‘ಶಾಖಾಹಾರಿ’ (Shakahari) ಸಿನಿಮಾದ ಟೈಟಲ್ ನ್ನು ಯೋಗರಾಜ್ ಭಟ್ (Yogaraj Bhat) ಬಿಡುಗಡೆ ಮಾಡಿ ಶುಭಾಶಯ ಕೋರಿದ್ದಾರೆ. ಮಲೆನಾಡಿನ ತೀರ್ಥಹಳ್ಳಿ ಊರೊಂದರಲ್ಲಿ ನಡೆಯುವ ನಿಗೂಢ ಘಟನೆಯ ಸುತ್ತ ಸಾಗುವ ಕಥೆ ಇದಾಗಿದ್ದು, ಹೋಟೆಲ್ ಭಟ್ಟನಾಗಿ ರಂಗಾಯಣ ರಘು, ಎಸ್.ಐ ಆಗಿ ಗೋಪಾಲ್ ಕೃಷ್ಣ ದೇಶಪಾಂಡೆ- ಸುಜಯ್ ಶಾಸ್ತ್ರಿ (Sujay Shastri) ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
Advertisement
‘ಶಾಖಾಹಾರಿ’ ಸಿನಿಮಾದಲ್ಲಿ ರಂಗಾಯಣ ರಘು (Rangayana Raghu) ಹಿಂದಿನ ಸಿನಿಮಾಗಳಿಗಿಂತ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಒಂದಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿರುವ, ಅಸೋಸಿಯೇಟ್ ಡೈರೆಕ್ಟರ್ ಆಗಿ, ಬರಹಗಾರರಾಗಿ ಅನುಭವವಿರುವ ಯುವ ಪ್ರತಿಭೆ ಸಂದೀಪ್ ಸುಂಕದ್ ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇದನ್ನೂ ಓದಿ:ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಜೊತೆ ಕಾಲ ಕಳೆದ ಮಹೇಶ್ ಬಾಬು ಪುತ್ರ
Advertisement
Advertisement
ವಿಶ್ವಜಿತ್ ರಾವ್ ರವರ ಛಾಯಾಗ್ರಹಣ, ಶಶಾಂಕ್ ನಾರಾಯಣ ಸಂಕಲನ, ಮಯೂರ್ ಅಂಬೆಕಲ್ಲು ಸಂಗೀತ & ಆಶಿಕ್ ಕುಸುಗೊಳ್ಳಿರವರ ಗ್ರೇಡಿಂಗ್ ಈ ಚಿತ್ರಕ್ಕಿದೆ.
Advertisement
ಸಂಪೂರ್ಣ ಮಲೆನಾಡಿನಲ್ಲೇ ಚಿತ್ರೀಕರಣವಾಗಿರೋ ಈ ಸಿನಿಮಾದಲ್ಲಿ ಅನೇಕ ಮಲೆನಾಡಿಗರು ಕೆಲಸ ಮಾಡಿರೋದು ಮತ್ತೊಂದು ವಿಶೇಷದ ಸಂಗತಿ. ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡವೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.