ಕನ್ನಡ ಚಿತ್ರರಂಗದ ಪ್ರತಿಭಾವಂತ ನಟರಲ್ಲಿ ರಂಗಾಯಣ ರಘು (Rangayana Raghu) ಕೂಡ ಒಬ್ಬರು. ಯಾವುದೇ ಪಾತ್ರ ಕೊಟ್ಟರೂ ಅದನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಅವರು, ಇದೀಗ ವಿಭಿನ್ನ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಟೈಟಲ್‌ನಿಂದಲೇ ಕುತೂಹಲ ಮೂಡಿಸಿರುವ ದೇವಿ ಮಹಾತ್ಮೆ (Devi Mahatme) ಸಿನಿಮಾದಲ್ಲಿ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಇತ್ತೀಚೆಗೆ ಈ ಚಿತ್ರದ ಕುತೂಹಲಕಾರಿ ಟೀಸರ್ ಹೊಂಬಾಳೆ ಮ್ಯೂಸಿಕ್ (Hombale Music) ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಟೀಸರ್ ನೋಡಿದರೆ ನಿರ್ದೇಶಕ ನಾಗರಾಜ್ ಸೋಮಯಾಜಿ ಒಂದು ವಿಭಿನ್ನ ಕಥೆಯನ್ನು ಪ್ರೇಕ್ಷಕರ ಮುಂದೆ ತರುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ.
ಟೀಸರ್‌ನಲ್ಲಿ ರಂಗಾಯಣ ರಘು ಅವರ ಅಭಿನಯ, ಸಮುದ್ರ ತೀರದ ದೃಶ್ಯಗಳು ಹಾಗೂ ಹುಲಿ ವೇಷದ ಝಲಕ್ ವಿಶೇಷ ಗಮನ ಸೆಳೆಯುತ್ತವೆ. 1 ನಿಮಿಷ 5 ಸೆಕೆಂಡ್ ಅವಧಿಯ ಟೀಸರ್ ಥ್ರಿಲ್ಲರ್ ಮತ್ತು ಸಸ್ಪೆನ್ಸ್ ಅಂಶಗಳಿಂದ ಕೂಡಿದ್ದು, ಪ್ರೇಕ್ಷಕರ ಕುತೂಹಲ ಹೆಚ್ಚಿಸಿದೆ. ಚಿತ್ರಕ್ಕೆ ಲಿಕಿತ್ ಪ್ರಸಾದ್ ಕೆ. ಶೆಟ್ಟಿ ಸಂಗೀತ ನೀಡಿದ್ದು, ಅವರ ಹಿನ್ನೆಲೆ ಸಂಗೀತ ಟೀಸರ್‌ಗೆ ಮತ್ತಷ್ಟು ಬಲ ತುಂಬಿದೆ.ಇದನ್ನೂ ಓದಿ: ಮತ್ತೆ ತಮಿಳಿಗೆ ಹಾರಿದ ರಿಯಲ್ ಸ್ಟಾರ್ ಉಪೇಂದ್ರ
ಚಿತ್ರದಲ್ಲಿ ರಂಗಾಯಣ ರಘು ಅವರ ಜೊತೆಗೆ ಪ್ರತಿಮಾ ನಾಯಕ್, ಸುಂದರ್ ವೀಣಾ, ಅರವಿಂದ್ ಕುಪ್ಳೀಕರ್, ಬಾಸುಮ ಕೊಡಗು, ನಾಗೇಂದ್ರ ಶಾ, ಪಿ.ಡಿ. ಸತೀಶ್ ಚಂದ್ರ, ಪ್ರಶಾಂತ್ ಹಿರೇಮಠ, ಆದಿತ್ಯ ರಾಜ್, ರಘು ಪಾಂಡೇಶ್ವರ, ಪಲ್ಲವಿ ಮಂಜುನಾಥ್, ಶೈಲಶ್ರೀ ಮೂಲ್ಕಿ, ಶ್ವೇತಾ ಶ್ರೀನಿವಾಸ್, ಮಹಾದೇವ ಹಡಪದ್ ಹಾಗೂ ಆಸಿಫ್ ಕ್ಷತ್ರಿಯ ನಟಿಸಿದ್ದಾರೆ.
ನಾಗರಾಜ್ ಸೋಮಯಾಜಿ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಬರವಣಿಗೆಯಲ್ಲಿ ಅರವಿಂದ್ ಕುಪ್ಳೀಕರ್, ಭಾಸ್ಕರ್ ಬಂಗೇರ, ಗುರು ಆರ್ಯ ಹಾಗೂ ವಾದಿರಾಜ್ ಶೆಟ್ಟಿ ಸಹಕರಿಸಿದ್ದಾರೆ. ಯುವಿಜಿ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ವಿದ್ಯಾ ಗಾಂಧಿರಾಜನ್ ಹಾಗೂ ಗಾಂಧಿರಾಜನ್ ಚಿತ್ರವನ್ನು ನಿರ್ಮಿಸಿದ್ದಾರೆ.
ಚಿತ್ರಕ್ಕೆ ಎಸ್.ಕೆ. ರಾವ್ ಛಾಯಾಗ್ರಹಣ, ಲಿಕಿತ್ ಪ್ರಸಾದ್ ಕೆ. ಶೆಟ್ಟಿ ಸಂಗೀತ ಹಾಗೂ ಉಜ್ವಲ್ ಚಂದ್ರ ಸಂಕಲನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಸರ್ ಮೂಲಕವೇ ದೇವಿ ಮಹಾತ್ಮೆ ಸಿನಿಮಾ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.ಇದನ್ನೂ ಓದಿ: ನಾಟ್ಯ ಮಯೂರಿಯಾದ ನಿವೇದಿತಾ – ಮುದ್ದಾದ ನವಿಲಿಗೆ ಫ್ಯಾನ್ಸ್ ಫಿದಾ!
