ಕೊಲಂಬೊ: ಆರ್ಥಿಕ ಬಿಕ್ಕಟ್ಟಿನ ನಡುವೆ ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಗೆ ನಡೆದ ಮತದಾನದಲ್ಲಿ ರನಿಲ್ ವಿಕ್ರಮಸಿಂಘೆ ಬಹುಮತದೊಂದಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಗೊಟಬಯಾ ರಜಪಕ್ಸೆ ಅವರು ರಾಜೀನಾಮೆ ನೀಡಿದ ನಂತರ ಹಂಗಾಮಿ ಅಧ್ಯಕ್ಷರಾಗಿ ರನಿಲ್ ವಿಕ್ರಮಸಿಂಘೆ ನೇಮಕಗೊಂಡಿದ್ದರು. ನಂತರ ನಡೆದ ಚುನಾವಣೆಯಲ್ಲಿ ಶ್ರೀಲಂಕಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಅನಾರೋಗ್ಯದಿಂದ ಬಳಲುತ್ತಿದ್ದ ಬೆಂಗಳೂರು ಮಹಿಳೆ ಅಮೆರಿಕದಿಂದ ಏರ್‌ಲಿಫ್ಟ್ – 26 ಗಂಟೆ ಪ್ರಯಾಣಕ್ಕೆ 1 ಕೋಟಿ ವೆಚ್ಚ
Advertisement
Advertisement
ಆರು ಬಾರಿ ಪ್ರಧಾನಿಯಾಗಿರುವ ವಿಕ್ರಮಸಿಂಘೆ ಅವರು 225 ಸದಸ್ಯರ ಸಂಸತ್ತಿನಲ್ಲಿ ಅತಿದೊಡ್ಡ ಬಣವಾದ ರಾಜಪಕ್ಸೆಗಳ ಎಸ್‌ಎಲ್‌ಪಿಪಿಯಿಂದ ಬೆಂಬಲಿತರಾಗಿರುವುದರಿಂದ ಅವರನ್ನು ಮುಂಚೂಣಿಯಲ್ಲಿ ಪರಿಗಣಿಸಲಾಗಿದೆ.
Advertisement
Advertisement
ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿದ ಅವರು, ದೇಶವು ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿದೆ. ನಮ್ಮ ಮುಂದೆ ದೊಡ್ಡ ಸವಾಲುಗಳಿವೆ ಎಂದು ಹೇಳಿದರು. ಇದನ್ನೂ ಓದಿ: ಕೊಲೊಂಬೊದಲ್ಲಿ ನಡೆದ ದಾಳಿಯಲ್ಲಿ ಭಾರತೀಯ ಅಧಿಕಾರಿಗೆ ಗಂಭೀರ ಗಾಯ