ಕೊಲಂಬೋ: ರನಿಲ್ ವಿಕ್ರಮಸಿಂಘೆ ಗುರುವಾರ ಶ್ರೀಲಂಕಾದ 9ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಬುಧವಾರ ಅಧ್ಯಕ್ಷೀಯ ಚುನಾವಣೆಯಲ್ಲಿ 134 ಮತಗಳನ್ನು ಪಡೆಯುವ ಮೂಲಕ ಬಹುಮತದೊಂದಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
Advertisement
Advertisement
ರನಿಲ್ ವಿಕ್ರಮ ಸಿಂಘೆ ವಿರುದ್ಧ ಭಾರೀ ಪ್ರತಿಭಟನೆ ನಡೆಯುತ್ತಿದ್ದರೂ ಇದರ ನಡುವೆಯೇ ಅವರು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಪ್ರಧಾನಿಯಾಗಿದ್ದಾಗ ಪ್ರತಿಭಟನಾಕಾರರು ಅವರ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿ, ಬೆಂಕಿ ಹಚ್ಚಿ, ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು. ಇದನ್ನೂ ಓದಿ: ಬ್ಯಾಂಕ್ ಮುಂದೆ ಪ್ರತಿಭಟನೆ – ಜನರನ್ನು ಚದುರಿಸಲು ಯುದ್ಧ ಟ್ಯಾಂಕರ್ ನಿಲ್ಲಿಸಿದ ಚೀನಾ
Advertisement
Advertisement
ಬುಧವಾರ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದ ಬಳಿಕ ವಿಕ್ರಮಸಿಂಘೆ, ಸಂಸತ್ತಿನ ಸಂಕೀರ್ಣದ ಒಳಗಡೆ ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಬೇಕೆಂದು ಸ್ಪೀಕರ್ ಅವರಿಗೆ ಮನವಿಯಿಟ್ಟರು. ಶ್ರೀಲಂಕಾವನ್ನು ಈ ಭೀಕರ ಬಿಕ್ಕಟ್ಟಿನಿಂದ ಪಾರು ಮಾಡಲು ಎಲ್ಲಾ ಪಕ್ಷಗಳೊಂದಿಗೆ ಕೆಲಸ ಮಾಡುವುದಾಗಿ ಪ್ರತಿಪಕ್ಷಗಳಿಗೆ ಭರವಸೆ ನೀಡಿದರು. ಇದನ್ನೂ ಓದಿ: ಪಂಜಾಬ್ ಸಿಎಂ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು