ಮೈಸೂರು: ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಭಾವಚಿತ್ರವನ್ನ ಅಶ್ಲೀಲ ವೆಬ್‍ಸೈಟ್‍ಗೆ ಅಪ್ಲೋಡ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಇಂದು ಜಯಲಕ್ಷೀಪುರಂ ಪೊಲೀಸರು ಬಂಧಿಸಿದ್ದಾರೆ.
Advertisement
ಜೈಕುಮಾರ್ ಬಂಧಿತ ಆರೋಪಿ. ಈತ ಇದೇ ಕಾಲೇಜಿನಲ್ಲಿ ಪರಿಸರ ಅಧ್ಯಯನ ವಿಭಾಗದ ಕೊನೆ ಸೆಮಿಸ್ಟರ್ ಓದುತ್ತಿದ್ದು, ಪರಿಸರ ವಿಭಾಗದ ಎಲ್ಲಾ ಸೆಮಿಸ್ಟರ್‍ಗಳಲ್ಲಿ ಟಾಪರ್ ಆಗಿದ್ದಾನೆ.
Advertisement
Advertisement
ಇದನ್ನೂ ಓದಿ: ಮೈಸೂರು ವಿವಿ ಪ್ರಾಧ್ಯಾಪಕನಿಂದಲೇ ಅಶ್ಲೀಲ ವೆಬ್‍ಸೈಟಿಗೆ ವಿದ್ಯಾರ್ಥಿನಿಯರ ಫೋಟೋ ಅಪ್ಲೋಡ್?
Advertisement
ಏನಿದು ಪ್ರಕರಣ?: ವಾರದ ಹಿಂದೆ ಲೋಕ್ಯಾಟೋ ಎಂಬ ವೇಶ್ಯಾವಾಟಿಕೆಯ ವೆಬ್‍ಸೈಟ್ ನಲ್ಲಿ ಮೈಸೂರು ವಿಶ್ವವಿದ್ಯಾಲಯದ ವಿಜ್ಞಾನ ವಿಭಾಗದ 10 ವಿದ್ಯಾರ್ಥಿನಿಯರ ಫೋಟೋ ಮತ್ತು ಮೊಬೈಲ್ ನಂಬರ್ ಅಪ್ಲೋಡ್ ಮಾಡಲಾಗಿತ್ತು. ಇದರಿಂದಾಗಿ ಈ ವೆಬ್‍ಸೈಟ್ ನೋಡುವ ಕಾಮುಕರು ಈ ನಂಬರ್ ಗಳಿಗೆ ಕರೆ ಮಾಡಿ ಕೆಟ್ಟದಾಗಿ ಮಾತಾಡುತ್ತಿದ್ದರು. ನಮ್ಮ ನಂಬರ್ ಬೇರೆಯವರಿಗೆ ಹೇಗೆ ಸಿಕ್ಕಿತು? ಅದರಲ್ಲೂ ಈ ರೀತಿ ಯಾಕೆ ಕೆಟ್ಟದಾಗಿ ಮಾತಾಡುತ್ತಿದ್ದಾರೆ ಅಂತಾ ವಿದ್ಯಾರ್ಥಿನಿಯರು ಪರಿಶೀಲಿಸಿದಾಗ ಅವರ ಫೋಟೋ ಮತ್ತು ನಂಬರ್ ಅನ್‍ಲೈನ್ ವೇಶ್ಯಾವಾಟಿಕೆಯ ವೆಬ್‍ಸೈಟ್‍ನಲ್ಲಿ ಇರುವುದು ಗಮನಕ್ಕೆ ಬಂದಿತ್ತು. ತಕ್ಷಣ ಈ ವಿಚಾರವನ್ನು ವಿಭಾಗದ ಮುಖ್ಯಸ್ಥರ ಗಮನಕ್ಕೆ ತಂದು ನಂತರ ವಿವಿಯ ಕುಲಸಚಿವರ ಗಮನಕ್ಕೆ ತರಲಾಗಿತ್ತು. ಅವರ ಅನುಮತಿಯಂತೆ ಮೈಸೂರಿನ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು.
ಈ ಸುದ್ದಿ ಬೆಳಕಿಗೆ ಬಂದಾಗ ವಿದ್ಯಾರ್ಥಿನಿಯರಿಗೆ ಪರಿಚಯ ಇರುವವರೇ ಈ ಕೃತ್ಯವೆಸಗಿದ್ದಾರೆ ಎನ್ನುವ ಶಂಕೆ ಮೂಡಿತ್ತು. ಅಲ್ಲದೇ ವಿದ್ಯಾರ್ಥಿನಿಯರು ಪ್ರಾಧ್ಯಾಪಕರ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದರು. ಆದ್ರೆ ಇದೀಗ ಪೊಲೀಸರು ಜೈಕುಮಾರ್ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ತಾನೇ ಫೋಟೋ ಹಾಗೂ ಫೋನ್ ನಂಬರ್ ಅಪ್‍ಲೋಡ್ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.