ಮುಂಬೈ: ಇಂಟೆರ್ನೆಟ್ ಸ್ಟಾರ್ ರಾನು ಮೊಂಡಲ್ ಕೆಲವು ದಿನಗಳ ಹಿಂದೆ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ನನ್ನನ್ನು ಮುಟ್ಟಬೇಡಿ ಎಂದು ಹೇಳಿದ್ದರು. ಈ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಮತ್ತೆ ರಾನು ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ನಿರ್ಲಕ್ಷ್ಯಿಸಿದ್ದಾರೆ.
ರಾನು ಅಭಿಮಾನಿಯನ್ನು ನಿರ್ಲಕ್ಷ್ಯಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ರಾನು ವಿಮಾನ ನಿಲ್ದಾಣದಲ್ಲಿ ಬ್ಯಾಗ್ ಹಿಡಿದುಕೊಂಡು ನಿಂತಿರುತ್ತಾರೆ. ಈ ವೇಳೆ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಆದರೆ ರಾನು ಅಭಿಮಾನಿಯನ್ನು ನಿರ್ಲಕ್ಷ್ಯಿಸಿದ್ದಾರೆ. ಇದನ್ನೂ ಓದಿ: ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ರಾನು: ವಿಡಿಯೋ
Advertisement
Advertisement
ಈ ವಿಡಿಯೋ ನೋಡಿದ ನೆಟ್ಟಿಗರು ಮತ್ತೊಮ್ಮೆ ರಾನು ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಕೆಲವರು ರಾನು ಅವರನ್ನು ಅಹಂಕಾರಿ ಎಂದು ಕರೆದರೆ, ಮತ್ತೆ ಕೆಲವರು ಈ ರೀತಿ ವರ್ತಿಸದಂತೆ ರಾನು ಅವರಿಗೆ ಸಲಹೆ ನೀಡಿದ್ದಾರೆ. ಮತ್ತೆ ಕೆಲವರು ಈ ವಿಡಿಯೋ ಪೂರ್ಣವಾಗಿಲ್ಲ. ರಾನು ಅವರ ಪ್ರತಿಕ್ರಿಯೆ ಸಂಪೂರ್ಣವಾಗಿ ಅರ್ಥವಾಗುವುದಿಲ್ಲ. ಈ ಸಂದರ್ಭದಲ್ಲಿ ಅವರನ್ನು ಟ್ರೋಲ್ ಮಾಡುವುದು ಸರಿಯಲ್ಲ ಎಂದು ಕಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: ಮತ್ತೆ ರಾನು ವರ್ತನೆ ನೋಡಿ ನೆಟ್ಟಿಗರು ಗರಂ: ವಿಡಿಯೋ ವೈರಲ್
Advertisement
ಇತ್ತೀಚೆಗೆ ರಾನು ಅವರನ್ನು ಸಾಕಷ್ಟು ಟ್ರೋಲ್ ಮಾಡುತ್ತಿರುವ ಕಾರಣ ಯೂಟ್ಯೂಬರ್ ಭುವನ್ ಬಾಮ್ ಪ್ರತಿಕ್ರಿಯಿಸಿದ್ದಾರೆ. ಅಭಿಮಾನಿಗಳ ಜೊತೆ ಹೇಗೆ ವರ್ತಿಸಬೇಕು ಎಂಬುದು ರಾನು ಅವರಿಗೆ ತಿಳಿದಿಲ್ಲ ಎಂಬುದು ಅವರ ಹಿನ್ನೆಲೆ ನೋಡಿ ಎಲ್ಲರಿಗೂ ತಿಳಿಯುತ್ತೆ. ಇಂತಹ ಪರಿಸ್ಥಿತಿಯಲ್ಲಿ ಅವರ ಪ್ರತಿಕ್ರಿಯೆ ವಿಭಿನ್ನವಾಗಿರುತ್ತೆ. ಇಷ್ಟು ಚಿಕ್ಕ ವಿಷಯಕ್ಕೆ ರಾನು ಅವರನ್ನು ಟ್ರೋಲ್ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾನು ಮೊಂಡಲ್ ಮೇಕಪ್ ಫೋಟೋ ವೈರಲ್ – ನೆಟ್ಟಿಗರಿಂದ ಸಿಕ್ಕಾಪಟ್ಟೆ ಟ್ರೋಲ್
Advertisement
View this post on Instagram
#fan #india#love#support #instagram #tiktok #socialmedia #facebook #whatshapp #hello#tseries #sonytv