ಮುಂಬೈ: ರೈಲ್ವೆ ನಿಲ್ದಾಣದಲ್ಲಿ ಹಾಡು ಹೇಳಿ ವೈರಲ್ ವಿಡಿಯೋ ಮೂಲಕ ಎಲ್ಲೆಡೆ ಸುದ್ದಿಯಾಗುತ್ತಿದ್ದಂತೆಯೇ ಇದೀಗ 10 ವರ್ಷದ ಬಳಿಕ ರಾನು ಮೊಂಡಲ್ ಅವರನ್ನು ಮಗಳು ಭೇಟಿಯಾಗಿದ್ದಾಳೆ.
ಹೌದು. ರಾನು ಅವರು ನ್ಯೂರೋಲಾಜಿಕಲ್ ಕಾಯಿಲೆಯಿಂದ ಬಳಲುತ್ತಿದ್ದು, ಕಳೆದ 10 ವರ್ಷಗಳ ಹಿಂದೆ ಮಗಳಿಂದ ದೂರ ಆಗಿದ್ದರು. ಆಗಿನಿಂದ ಅವರು ಒಂಟಿಯಾಗಿ ಜೀವನ ನಡೆಸುತ್ತಿದ್ದರು. ರೈಲ್ವೇ ನಿಲ್ದಾಣದಲ್ಲಿ ಹಾಡು ಹೇಳಿಕೊಂಡು ಅದರಿಂದ ಬಂದ ಹಣದಿಂದ ಜೀವನ ಸಾಗಿಸುತ್ತಿದ್ದರು. ಆದರೆ ಈಗ ರಾನು ಅವರು ಎಲ್ಲೆಡೆ ಸಖತ್ ಫೆಮಸ್ ಆಗಿದ್ದಾರೆ. ಅವರು ರೈಲ್ವೇ ನಿಲ್ದಾಣದಲ್ಲಿ “ಏಕ್ ಪ್ಯಾರ್ ಕಾ ನಗ್ಮಾ ಹೇ” ಹಿಂದಿ ಹಾಡು ಹಾಡುತ್ತಿರುವ ವಿಡಿಯೋ ಸಖತ್ ವೈರಲ್ ಆದ ಬಳಿಕ ಅವರಿಗೆ ಬಾಲಿವುಡ್ ಸೇರಿದಂತೆ ಎಲ್ಲೆಡೆಯಿಂದ ಹಾಡಲು ಅವಕಾಶಗಳು ಹುಡುಕಿ ಬರುತ್ತಿದೆ. ಇದರ ಜೊತೆಗೆ ಅವರಿಂದ ದೂರ ಆಗಿದ್ದ ಮಗಳು ಕೂಡ 10 ವರ್ಷದ ಬಳಿಕ ಅವರಿಗೆ ವಾಪಸ್ ಸಿಕ್ಕಿದ್ದಾಳೆ. ತಾಯಿಯ ವಿಡಿಯೋ ವೈರಲ್ ಆದ ಬಳಿಕ ರಾನು ಅವರ ಮಗಳು ಅವರ ಮನೆಗೆ ಬಂದು ಭೇಟಿಯಾಗಿದ್ದಾಳೆ.
Advertisement
Advertisement
ಈ ಬಗ್ಗೆ ಮಾತನಾಡಿದ ರಾನು ಅವರು ನನಗೆ ಖುಷಿಯಾಗಿದೆ, ನನಗೆ ಹೊಸ ಬದುಕು ದೊರಕಿದೆ. ಹೀಗಾಗಿ ಇದನ್ನು ನಾನು ಹಾಳು ಮಾಡಿಕೊಳ್ಳುವುದಿಲ್ಲ. ಸಿಕ್ಕ ಅವಕಾಶವನ್ನು ದೂರ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
Advertisement
ಯಾರಿದು ರಾನು ಮೊಂಡಲ್?
ಕಳೆದ ತಿಂಗಳು ಪಶ್ಚಿಮ ಬಂಗಾಳದ ರಣಘಾಟ್ ನಿಲ್ದಾಣದಲ್ಲಿ ಮೊಂಡಲ್ ಎಂಬವರು 1972ರಲ್ಲಿ ಬಿಡುಗಡೆಯಾದ ‘ಶೋರ್’ ಚಿತ್ರದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಹಾಡಿದ “ಏಕ್ ಪ್ಯಾರ್ ಕಾ ನಗ್ಮಾ ಹೇ” ಚಿತ್ರದ ಹಾಡನ್ನು ಹಾಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಮೊಂಡಲ್ ಅವರ ಈ ವಿಡಿಯೋವನ್ನು ‘ಬಾರ್ಪೆಟಾ ಟೌನ್ ದಿ ಪ್ಲೇಸ್ ಆಫ್ ಪೀಸ್’ ಪೇಜ್ ಫೇಸ್‍ಬುಕ್‍ನಲ್ಲಿ ಹಂಚಿಕೊಂಡಿತ್ತು. ಈ ವಿಡಿಯೋ ವೈರಲ್ ಆಗಿದ್ದು, ಮೊಂಡಲ್ ಅವರಿಗೆ ಮುಂಬೈನಲ್ಲಿ ನಡೆಯುವ ರಿಯಾಲಿಟಿ ಶೋನಲ್ಲಿ ಅವಕಾಶ ಸಿಕ್ಕಿತ್ತು. ಮಹಿಳೆಯೊಬ್ಬರು ಮೊಂಡಲ್ ಅವರನ್ನು ಗುರುತಿಸಿ ಅವರನ್ನು ಸಂಪೂರ್ಣವಾಗಿ ಬದಲಾಯಿಸಿದ್ದರು.
Advertisement
ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾನು ಅವರು ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟಿದ್ದರು. ಬಳಿಕ ಖ್ಯಾತ ಗಾಯಕ ಹಿಮೇಶ್ ರೇಶ್ಮಿಯಾ ಅವರು ತಮ್ಮ ಹೊಸ ಚಿತ್ರದಲ್ಲಿ ಹಾಡಲು ರಾನು ಮೊಂಡಲ್ ಅವರಿಗೆ ಅವಕಾಶ ನೀಡಿದ್ದಾರೆ. ಈ ವಿಷಯವನ್ನು ಸ್ವತಃ ಹಿಮೇಶ್ ರೇಶ್ಮಿಯಾ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ವಿಡಿಯೋ ಹಾಕುವ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದರು. ವಿಡಿಯೋದಲ್ಲಿ ರಾನು ಮೊಂಡಲ್ ಅವರು ಹಾಡು ರೆಕಾರ್ಡ್ ಮಾಡುತ್ತಿದ್ದಾಗ ಹಿಮೇಶ್ ಅವರಿಗೆ ಪ್ರೋತ್ಸಾಹ ನೀಡಿತ್ತಿರುವ ದೃಶ್ಯ ಸೆರೆಯಾಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಹಿಮೇಶ್ ಅವರನ್ನು ಹೊಗಳುತ್ತಿದ್ದಾರೆ. ಅಲ್ಲದೆ ಈ ವಿಡಿಯೋವನ್ನು ಕೂಡ ಸಖತ್ ವೈರಲ್ ಆಗಿದೆ.
ವರದಿಗಳ ಪ್ರಕಾರ ಹಿಮೇಶ್ ಅವರು ತಮ್ಮ ಮುಂಬರುವ ‘ಹ್ಯಾಪಿ ಹಾರ್ಡಿ ಮತ್ತು ಹೀರ್’ ಚಿತ್ರದಲ್ಲಿ ಹಾಡು ಹಾಡಲು ಅವಕಾಶ ನೀಡಿದ್ದಾರೆ. ರಾನು ಅವರು ಈ ಚಿತ್ರದ ‘ತೇರಿ ಮೇರಿ ಕಹಾನಿ’ ಎಂಬ ಹಾಡಿಗೆ ಧ್ವನಿ ನೀಡಿದ್ದಾರೆ.
The lady Ranu Mondal singing Lata ji's song outside Kolkata railway station. Today she recorded her first song with Himesh sir for his film #HappyHardyAndHeer pic.twitter.com/3mqNUkXDhM
— Team Himesh (@TeamHimesh) August 22, 2019