Recent News

ಮತ್ತೆ ರಾನು ವರ್ತನೆ ನೋಡಿ ನೆಟ್ಟಿಗರು ಗರಂ: ವಿಡಿಯೋ ವೈರಲ್

ಮುಂಬೈ: ಇಂಟೆರ್‌ನೆಟ್ ಸ್ಟಾರ್ ರಾನು ಮೊಂಡಲ್ ಅಭಿಮಾನಿ ಜೊತೆ ವಿಚಿತ್ರವಾಗಿ ವರ್ತಿಸಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಅವರ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದೆ.

ತನ್ನ ಯಶಸ್ಸಿನ ಬಗ್ಗೆ ಮಾಧ್ಯಮದವರು ರಾನು ಅವರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ರಾನು ಮಾಧ್ಯಮದವರ ಬಳಿ ನಡೆದುಕೊಂಡ ವರ್ತನೆ ನೋಡಿ ನೆಟ್ಟಿಗರು ಮತ್ತೆ ಗರಂ ಆಗಿದ್ದಾರೆ. ರಾನು ಏನೋ ತಿನ್ನುತ್ತಾ ಮಾಧ್ಯಮದವರ ಪ್ರಶ್ನೆಯನ್ನು ನಿರ್ಲಕ್ಷ್ಯಿಸುತ್ತಾರೆ. ಈ ವಿಡಿಯೋ ಈಗ ವೈರಲ್ ಆಗಿದ್ದು, ನೆಟ್ಟಿಗರು ರಾನು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದ್ದನ್ನೂ ಓದಿ: ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ರಾನು: ವಿಡಿಯೋ

ವಿಡಿಯೋದಲ್ಲಿ ಮಾಧ್ಯಮದವರು ರಾನು ಅವರನ್ನು ಹೊಗಳುತ್ತಾ ನಿಮಗೆ ಇಷ್ಟು ದೊಡ್ಡ ಯಶಸ್ಸು ಸಿಕ್ಕಿದೆ. ನಿಮಗೆ ಹೇಗೆ ಅನಿಸುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಆಗ ರಾನು ಬ್ಯಾಗಿನಿಂದ ಏನೋ ತೆಗೆದುಕೊಂಡು ತಿನ್ನುತ್ತಾರೆ. ಬಳಿಕ ಅಲ್ಲಿ ಇಲ್ಲಿ ನೋಡುತ್ತಾ ಮಾಧ್ಯಮದವರಿಗೆ ನೀವು ಹೇಳಿದ್ದು ನನಗೆ ಕೇಳಿಸಲಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಬಳಿಕ ಮಾಧ್ಯಮದವರು ಮತ್ತೆ ರಾನು ಅವರಿಗೆ ತಮ್ಮ ಪ್ರಶ್ನೆಯನ್ನು ಕೇಳಿದ್ದಾರೆ.

ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್‍ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗಿದ್ದರು. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡಿದ್ದರು. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ ಹಿಡಿದು ಎಳೆದಿದ್ದೀರಿ. ಈ ರೀತಿ ಕೈ ಹಾಕುವುದು ಸರಿನಾ? ಏನಿದೆಲ್ಲಾ? ಎಂದು ಮಹಿಳೆ ಮೇಲೆ ರೇಗಾಡಿದ ವಿಡಿಯೋ ವೈರಲ್ ಆಗಿತ್ತು.

ಪಶ್ಚಿಮ ಬಂಗಾಳದ ರಣಘಾಟ್ ನಿಲ್ದಾಣದಲ್ಲಿ ರಾನು 1972ರಲ್ಲಿ ಬಿಡುಗಡೆಯಾದ `ಶೋರ್’ ಚಿತ್ರದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಹಾಡಿದ “ಏಕ್ ಪ್ಯಾರ್ ಕಾ ನಗ್ಮಾ ಹೇ” ಚಿತ್ರದ ಹಾಡನ್ನು ಹಾಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋವನ್ನು ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವೈರಲ್ ಆದ ಬೆನ್ನಲೇ ರಾನು ಅವರಿಗೆ ರಿಯಾಲಿಟಿ ಶೋನಲ್ಲಿ ಹಾಡುವ ಅವಕಾಶ ಸಿಕ್ಕಿತ್ತು. ಬಳಿಕ ಗಾಯಕ ಹಿಮೇಶ್ ರೇಶ್ಮಿಯಾ ಅವರು ತಮ್ಮ ಚಿತ್ರದಲ್ಲಿ ಹಾಡಲು ರಾನು ಅವರಿಗೆ ಅವಕಾಶ ಕೊಟ್ಟಿದ್ದರು.

ಚಿತ್ರದಲ್ಲಿ ರಾನು ಹಾಡಿದ ಹಾಡನ್ನು ಹಿಮೇಶ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ರಾನು ಅವರ ಹಾಡಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿತ್ತು. ಅಲ್ಲದೆ ಅವರ ಅಭಿಮಾನಿಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿತ್ತು. ರಾನು ಹಾಡಿದ ಮೊದಲ ಹಾಡಿಗೆ ಹಿಮೇಶ್ ಅವರು 6ರಿಂದ 7 ಲಕ್ಷ ರೂ. ಸಂಭಾವನೆ ಸಹ ನೀಡಿದ್ದರು ಎಂಬ ಮಾತುಗಳು ಕೇಳಿ ಬಂದಿತ್ತು. ಇದಾದ ಬಳಿಕ ಹಿಮೇಶ್ ಮತ್ತೆ ತಮ್ಮ ಚಿತ್ರದಲ್ಲಿ ಹಾಡು ಹಾಡಲು ರಾನು ಅವರಿಗೆ ಅವಕಾಶ ಕೊಟ್ಟಿದ್ದರು.

 

View this post on Instagram

 

Kya se kya hogaye dekhte dekhte 🙇 #ranumondal

A post shared by Our Vadodara (@clickers_of_vadodara) on

Leave a Reply

Your email address will not be published. Required fields are marked *