ಮುಂಬೈ: ‘ಬೀರ್ ಬೈಸೆಪ್ಸ್’ ಎಂದೇ ಖ್ಯಾತಿ ಪಡೆದಿರುವ ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾ (YouTuber Ranveer Allahbadia) ಮಾಡಿದ ಕೀಳು ಅಭಿರುಚಿಯ ಹಾಸ್ಯದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಸಮಯ್ ರೈನಾ ಅವರ ಇಂಡಿಯಾಸ್ ಗಾಟ್ ಲೇಟೆಂಟ್ (India’s Got Latent) ಕಾರ್ಯಕ್ರಮದಲ್ಲಿ ರಣವೀರ್ ತೀರ್ಪುಗಾರರಾಗಿ ಭಾಗವಹಿಸಿದ್ದರು. ಈ ವೇಳೆ ಸ್ಪರ್ಧಿಯೊಬ್ಬರಿಗೆ, ನಿಮ್ಮ ಪೋಷಕರು ಜೀವನದುದ್ದಕ್ಕೂ ಪ್ರತಿದಿನ ಲೈಂಗಿಕ ಕ್ರಿಯೆ ನಡೆಸುವುದನ್ನು ನೀವು ನೋಡುತ್ತೀರಾ ಅಥವಾ ಒಮ್ಮೆ ಅವರೊಂದಿಗೆ ಸೇರಿ ಅದನ್ನು ಶಾಶ್ವತವಾಗಿ ನಿಲ್ಲಿಸುತ್ತೀರಾ ಎಂದು ಪ್ರಶ್ನಿಸಿ ವಿವಾದ ಸೃಷ್ಟಿಸಿದ್ದಾರೆ.
Advertisement
ಯೂಟ್ಯೂಬ್‌ನಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚು ಚಂದಾದಾರರನ್ನು ಹೊಂದಿರುವ ಅವರಿಗೆ ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ರಾಷ್ಟ್ರೀಯ ಯುವ ಕಂಟೆಂಟ್ ಕ್ರಿಯೇಟರ್ ಪ್ರಶಸ್ತಿಗಳನ್ನು ಪಡೆದಿದ್ದರು.
Advertisement
I met Ranveer at a cafe in Dharamshala on August 13th, he was with his girlfriend.
A few people came to the cafe to felicitate him.
So much fame at such a young age, has got the better of him.
Hope no one goes to his podcast show ever again.
Bad example.#RanveerAllahbadia pic.twitter.com/GLerbEFnL9
— Shajan Samuel (@IamShajanSamuel) February 9, 2025
Advertisement
ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಮುಂಬೈನಲ್ಲಿ ಮಾಧ್ಯಮವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, “ನಾನು ರಣವೀರ್ ಅವರ ಹೇಳಿಕೆಯ ಬಗ್ಗೆ ತಿಳಿದುಕೊಂಡಿದ್ದೇನೆ. ವಿಡಿಯೋವನ್ನು ನಾನು ನೋಡಿಲ್ಲ. ಪ್ರತಿಯೊಬ್ಬರಿಗೆ ವಾಕ್ ಸ್ವಾತಂತ್ರ್ಯವಿದೆ. ನಮ್ಮ ಸಮಾಜದಲ್ಲಿ, ನಾವು ಕೆಲವು ನಿಯಮಗಳನ್ನು ಮಾಡಿದ್ದೇವೆ. ಯಾರಾದರೂ ಅವುಗಳನ್ನು ಉಲ್ಲಂಘಿಸಿದರೆ ಅದು ಸಂಪೂರ್ಣವಾಗಿ ತಪ್ಪು ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.
Advertisement
I shouldn’t have said what I said on India’s got latent. I’m sorry. pic.twitter.com/BaLEx5J0kd
— Ranveer Allahbadia (@BeerBicepsGuy) February 10, 2025
ಕಾರ್ಯಕ್ರಮದಲ್ಲಿ ನಿಂದನಾತ್ಮಕ ಭಾಷೆಯನ್ನು ಬಳಸಿದ ಆರೋಪದ ಮೇಲೆ ಮುಂಬೈ ಆಯುಕ್ತರು ಮತ್ತು ಮಹಾರಾಷ್ಟ್ರ ಮಹಿಳಾ ಆಯೋಗಕ್ಕೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
#WATCH | Mumbai: On controversy over YouTuber Ranveer Allahbadia’s remarks on a show, Maharashtra CM Devendra Fadnavis says, “I have come to know about it. I have not seen it yet. Things have been said and presented in a wrong way. Everyone has freedom of speech but our freedom… pic.twitter.com/yXKcaWJWDD
— ANI (@ANI) February 10, 2025
ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ರಣವೀರ್ ಅಲ್ಲಾಬಾದಿಯಾ ಅವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿ ಕ್ಷಮೆ ಕೇಳಿದ್ದಾರೆ. ಆ ರೀತಿ ನಾನು ಹೇಳಬಾರದಿತ್ತು. ನನ್ನ ಹೇಳಿಕೆ ತಪ್ಪಾಗಿದೆ. ಆ ಭಾಗವನ್ನು ಡಿಲೀಟ್ ಮಾಡುವಂತೆ ಕೇಳಿಕೊಂಡಿದ್ದೇನೆ. ನಿಮ್ಮ ಭಾವನೆಗಳಿಗೆ ನೋವಾಗಿದೆ. ಇನ್ನು ಮುಂದೆ ಈ ರೀತಿಯ ತಪ್ಪು ನಡೆಯದಂತೆ ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.