ʻಕಾಂತಾರʼ ಚಾವುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಇದೀಗ ಮೈಸೂರಿನ (Mysuru) ಚಾಮುಂಡೇಶ್ವರಿ ಬೆಟ್ಟಕ್ಕೆ (Chamundeshwari Temple) ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ.
ರಣವೀರ್ ಸಿಂಗ್ ಯಾರಿಗೂ ತಿಳಿಯದಂತೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ, ಕ್ಷಮೆಯಾಚಿಸಿದ್ದಾರೆ. ತಾಯಿ ಎದುರು ಕುಳಿತು ತಲೆಬಾಗಿ ಕ್ಷಮೆ ಕೇಳಿರುವ ಕೆಲ ದೃಶ್ಯಗಳು ʻಪಬ್ಲಿಕ್ ಟಿವಿʼಗೆ ಲಭ್ಯವಾಗಿದೆ. ಇದನ್ನೂ ಓದಿ:ತುಳುನಾಡಿನ ದೈವಕ್ಕೆ ಅಪಮಾನ ಮಾಡಿದ ಬಾಲಿವುಡ್ ನಟ ರಣವೀರ್ ಸಿಂಗ್
ಈ ಪ್ರಕರಣ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದಾಗ, ರಣವೀರ್ ಸಿಂಗ್ ಸ್ವತಃ ಎಕ್ಸ್‌ನಲ್ಲಿ ಕ್ಷಮೆ ಕೇಳಿದ್ದರು. ಜೊತೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ಕ್ಷಮೆ ಕೇಳುವುದಾಗಿ ತಿಳಿಸಿದ್ದರು.
ಏನಿದು ಪ್ರಕರಣ?
ಗೋವಾ ಫಿಲ್ಮೋತ್ಸವ ಕಾರ್ಯಕ್ರಮದಲ್ಲಿ ರಣವೀರ್ ಸಿಂಗ್ ನಟ ರಿಷಬ್ ಶೆಟ್ಟಿ ಮುಂದೆಯೇ ಮಾತನಾಡಿದ್ದರು. ರಿಷಬ್ ಅವರ ಕಾಂತಾರ ಸಿನಿಮಾವನ್ನ ಥಿಯೇಟರ್‌ನಲ್ಲಿ ನಾನು ನೋಡಿದೆ. ಅದ್ಭುತವಾಗಿತ್ತು ನಿಮ್ಮ ನಟನೆ. ಅದರಲ್ಲೂ ಹೆಣ್ಣು ದೆವ್ವ ನಿಮ್ಮ ಮೈಸೇರುವ ದೃಶ್ಯವಂತೂ ಅತ್ಯದ್ಭುತವಾಗಿತ್ತು. ಆ ದೃಶ್ಯದಲ್ಲಿ ನಿಮ್ಮ ನಟನೆ ಹಾಗೂ ನಿಮ್ಮ ನೋಟ ಮಜವಾಗಿತ್ತು ಅಂತ ರಣವೀರ್ ಸಿಂಗ್ ಅನುಕರಣೆ ಮಾಡಿದ್ದರು. ರಣವೀರ್ ಮಾಡಿದ ಅಪಹಾಸ್ಯಕ್ಕೆ ದೈವಾರಾಧಕರು ಆಕ್ರೋಶ ಹೊರಹಾಕಿದ್ದರು.ಇದನ್ನೂ ಓದಿ: ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
