-ಪ್ರೋಟೋಕಾಲ್ ಉಲ್ಲಂಘನೆ ಆರೋಪದ ಬಗ್ಗೆ ಪ್ರತಿಕ್ರಿಯೆಗೆ ಪರಂ ನಕಾರ
ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿನಿಸ್ಟರ್ ಕೈವಾಡವಿದೆ ಎನ್ನುವುದು ಊಹಾಪೋಹ ಎಂದು ಸಚಿವ ಜಮೀರ್ ಅಹ್ಮದ್ (Zameer Ahmed) ಪ್ರತಿಕ್ರಿಯಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ರನ್ಯಾ ರಾವ್ ಕೇಸಲ್ಲಿ ಸಚಿವರು ಭಾಗಿಯಾಗಿರುವ ಆರೋಪಗಳು ಬಿಜೆಪಿಯವರ ಊಹಾಪೋಹ. ತನಿಖೆ ವೇಳೆ ಯಾರ ಕೈವಾಡವಿದೆ ಎನ್ನುವುದು ಗೊತ್ತಾಗುತ್ತದೆ. ಆ ಮಿನಿಸ್ಟರ್ ಕೈವಾಡವಿದೆ. ಈ ಮಿನಿಸ್ಟರ್ ಕೈವಾಡವಿದೆ ಎನ್ನುವುದು ಊಹಾಪೋಹ. ಎಲ್ಲ ಸತ್ಯ ತನಿಖೆಯಿಂದ ಹೊರಗೆ ಬರಲಿ ಎಂದರು.ಇದನ್ನೂ ಓದಿ:ಕೇಂದ್ರ ಬಜೆಟ್‍ನಲ್ಲಿ ಕರ್ನಾಟಕದ ಹೆಸರೇ ಇರಲಿಲ್ಲ: ರೇವಣ್ಣಗೆ ಶ್ರೇಯಸ್ ಪಟೇಲ್ ತಿರುಗೇಟು
ಇದಕ್ಕೂ ಮುನ್ನ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, ಪ್ರೋಟೋಕಾಲ್ ಉಲ್ಲಂಘನೆ ಆರೋಪದ ತನಿಖೆಗೆ ಆದೇಶ ವಿಚಾರವಾಗಿ ಪ್ರತಿಕ್ರಿಯಿಸಲು ನಿರಾಕರಿಸಿ, ನಿನ್ನೆ ಆದೇಶ ಆಗಿದೆ, ಇವತ್ತು ಗೊತ್ತಾಗಿದೆ ಅಷ್ಟೇ ಎಂದು ಹೇಳಿದರು.
ಗೃಹ ಸಚಿವ ಪರಮೇಶ್ವರ್ ಅವರಿಗೆ ಸಿಎಂ ಸಿದ್ದರಾಮಯ್ಯ ಬುಲಾವ್ ಕೊಟ್ಟು ಕರೆಸಿಕೊಂಡಿದ್ದು, ಕಲಾಪ ಮುಗಿಯುತ್ತಿದ್ದಂತೆ ಸಿಎಂ ಕೊಠಡಿಯಲ್ಲಿ ರನ್ಯಾರಾವ್ ಕೇಸ್ ಪ್ರೋಟೋಕಾಲ್ ಉಲ್ಲಂಘನೆ ಆರೋಪದ ಬಗ್ಗೆ ಮಾಹಿತಿ ಪಡೆದುಕೊಂಡರು.ಇದನ್ನೂ ಓದಿ: ರೈತರ ಹೊಟ್ಟು, ಮೇವಿನ ಬಣವೆಗೆ ಬೆಂಕಿ – ಕೃಷಿ ಸಲಕರಣೆಗಳು ಬೆಂಕಿಗಾಹುತಿ