– ರನ್ಯಾ ಕೇಸಲ್ಲಿ ಶಿಷ್ಟಾಚಾರ ದುರ್ಬಳಕೆ ಆರೋಪ – ಐಪಿಎಸ್ ರಾಮಚಂದ್ರರಾವ್ ವಿರುದ್ಧವೂ ತನಿಖೆ
ಬೆಂಗಳೂರು: ರನ್ಯಾ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಏರ್‌ಪೋರ್ಟ್‌ನಲ್ಲಿ ರನ್ಯಾಗೆ ಪ್ರೊಟೋಕಾಲ್ ಒದಗಿಸಿದ್ದ ವಿಚಾರವಾಗಿ ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ಬೆನ್ನಲ್ಲೇ ಪ್ರತ್ಯೇಕ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿರುವ ಸಿಬಿಐ ನಾಲ್ವರಿಗೆ ನೋಟಿಸ್ ನೀಢಿದೆ.
ಶಿಷ್ಟಾಚಾರ ಉಲ್ಲಂಘನೆ ಆರೋಪ ಎದುರಿಸುತ್ತಿರುವ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್ ನೀಡಿದೆ. ತನಿಖಾಧಿಕಾರಿ ಅನುಭವ್ ತ್ಯಾಗಿ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: 2020ನೇ ಸಾಲಿನ ರಾಜ್ಯ ಪ್ರಶಸ್ತಿ ಪ್ರಕಟ – ʻಜಂಟಲ್‍ಮನ್ʼ ಪ್ರಜ್ವಲ್ ದೇವರಾಜ್ ಅತ್ಯುತ್ತಮ ನಟ!
ಇನ್ನೂ ಶಿಷ್ಟಾಚಾರ ದುರ್ಬಳಕೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರರಾವ್ ಪಾತ್ರ ಇದ್ಯಾ…? ಇಲ್ಲವೇ ಎಂಬ ಬಗ್ಗೆ ತನಿಖೆ ನಡೆಸಲು ಸರ್ಕಾರ ಮುಂದಾಗಿದೆ. ಹಿರಿಯ ಐಪಿಎಸ್ ಗೌರವ್ ಗುಪ್ತಾಗೆ ವಾರದಲ್ಲಿ ವರದಿ ನೀಡಲು ಸೂಚಿಸಿದೆ. ಇದೇ ವೇಳೆ, ರನ್ಯಾ ಪ್ರಕರಣದಲ್ಲಿ ಪೊಲೀಸರ ವಿರುದ್ಧ ಕರ್ತವ್ಯಲೋಪ ಎಸಗಿದ ಆರೋಪ ಸಂಬಂಧ ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿದೆ. ಇದನ್ನೂ ಓದಿ: ಇನ್ಮುಂದೆ `ಇಂಡಿಯಾ’ ಅನ್ನಬೇಡಿ, `ಭಾರತ’ ಎಂದೇ ಕರೆಯಿರಿ – ಆರ್‌ಎಸ್‌ಎಸ್ ನಾಯಕ ಹೊಸಬಾಳೆ ಕರೆ
ಶೀಘ್ರವೇ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ. ಪರಿಣಾಮ ಐಪಿಎಸ್ ಅಧಿಕಾರಿ ರಾಮಚಂದ್ರರಾವ್, ರನ್ಯಾ ಏರ್‌ಪೋರ್ಟ್‌ಗೆ ಬಂದಾಗ ಪ್ರೋಟೋಕಾಲ್ ನೀಡಲು ಬಂದಿದ್ದ ಹೆಡ್ ಕಾನ್‌ಸ್ಟೇಬಲ್, ಗುಪ್ತಚರ ಇಲಾಖೆ ಕಾನ್‌ಸ್ಟೇಬಲ್‌ಗೆ ವಿಚಾರಣೆ ಬಿಸಿ ತಾಕುವುದು ಖಚಿತವಾಗಿದೆ. ಈ ಬೆಳವಣಿಗೆ ನಡುವೆ ಡಿಸಿಎಂ ಜೊತೆ, ಗೃಹ ಸಚಿವರ ಜೊತೆ ಸಿಎಂ ಪ್ರತ್ಯೇಕವಾಗಿ ಸಭೆ ನಡೆಸಿದ್ರು. ಗೌರವ್ ಗುಪ್ತಾ ಸಹ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ರು. ಈ ವಿಚಾರದಲ್ಲಿ ರಾಜಕೀಯ ಕೆಸರೆರಚಾಟ ಸಹ ಜೋರಾಗಿದೆ.