ಬೆಂಗಳೂರು: ಚಿನ್ನ ಕಳ್ಳಸಾಗಣೆ (Gold Smuggling) ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿ (CCTV Footage) ನೀಡುವಂತೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ (Highcourt) ಇತ್ಯರ್ಥಪಡಿಸಿದೆ.
ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಿತು. ರನ್ಯಾ ಪರ ವಕೀಲ ವೈ.ಎಲ್.ಮಹೇಶ್ ವಾದ ಮಂಡಿಸಿ, 2025ರ ಜುಲೈ 15ರಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಸಿಐಎಸ್‌ಎಫ್ ಕಮಾಂಡೆಂಟ್ ಸರಿಯಾಗಿ ಪಾಲಿಸಿಲ್ಲ. ಹೀಗಾಗಿ, 2025ರ ಮಾರ್ಚ್ 3ರ ಸ್ಪಷ್ಟ ಸಿಸಿಟಿವಿ ದೃಶ್ಯಾವಳಿ ನೀಡಲು ನಿರ್ದೇಶಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಆನ್ ಆಗದ ಎಸಿ, ಉಸಿರಾಡೋಕೂ ತೊಂದರೆ – ಸ್ಪೈಸ್ ಜೆಟ್ ವಿಮಾನ ಟೇಕಾಫ್‌ಗೆ ಸಿದ್ಧವಾಗ್ತಿದ್ದಂತೆ ಪ್ರಯಾಣಿಕರ ಗದ್ದಲ
ಸಿಐಎಸ್‌ಎಫ್ ಪರ ಎಎಸ್‌ಜಿ ಅರವಿಂದ್ ಕಾಮತ್ ವಾದಿಸಿ, ಆದೇಶವನ್ನು ಸಿಐಎಸ್‌ಎಫ್ ಅಧಿಕಾರಿಗಳು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಅರ್ಜಿದಾರರು ಎರಡು ದಿನಗಳ ಬಳಿಕ ಅಧಿಕಾರಿಗಳನ್ನು ಸಂಪರ್ಕಿಸಿದರೆ, 2025ರ ಮಾರ್ಚ್ 3ರ ಸಂಜೆ 4.30ರಿಂದ ಮಾರ್ಚ್ 4ರ ಬೆಳಿಗ್ಗೆ 11 ಗಂಟೆಯವರೆಗಿನ ವೀಡಿಯೋ ನೀಡಲಾಗುವುದು ಎಂದು ತಿಳಿಸಿದರು. ಈ ವಾದವನ್ನು ದಾಖಲಿಸಿಕೊಂಡ ಹೈಕೋರ್ಟ್, ಅಗತ್ಯ ಸಿಸಿಟಿವಿ ದೃಶ್ಯಾವಳಿ ಒದಗಿಸುವಂತೆ ಸೂಚಿಸಿ ಅರ್ಜಿಯನ್ನು ಮುಕ್ತಾಯಗೊಳಿಸಿತು. ಇದನ್ನೂ ಓದಿ: ಕರ್ನಾಟಕ ಬಂದ್‌ಗೆ ರಾಜ್ಯ ರೈತ ಸಂಘಟನೆ ಬೆಂಬಲ – ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯ

