ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ (Ranya Rao) ಪ್ರಕರಣ ಅಗೆದಷ್ಟು ಬಯಲಾಗುತ್ತಲೇ ಇದೆ. ಈ ನಟಿಯ ಕೇವಲ ಒಂದೆರಡು ಬಾರಿ ದುಬೈಗೆ ಹೋಗಿಲ್ಲ. ಈಕೆ ಬರೋಬ್ಬರಿ 40 ಬಾರಿ ದುಬೈಗೆ ಹೋಗಿ ಬಂದಿರುವ ವಿಚಾರ ಈಗ ಬೆಳಕಿಗೆ ಬಂದಿದೆ.
Advertisement
ಸಿಕ್ಕಿ ಬಿದ್ದಿದ್ದು ಹೇಗೆ ಗೊತ್ತಾ?
ಈ ಬಂಧನಕ್ಕೂ 2 ವಾರಗಳ ಹಿಂದೆ ರನ್ಯಾ ದುಬೈಗೆ ಹೋಗಿ ಬಂದಿದ್ದಳು. ಆಗ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಕಸ್ಟಮ್ ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡು, ನಾನು ಡಿಜಿಪಿ ಮಗಳು ಎಂದು ತಪಾಸಣೆಗೆ ಒಳಗಾಗದೇ ಹೊರಗೆ ಬರುತ್ತಿದ್ದದ್ದಳು. ಪ್ರತಿ ಬಾರಿ ಆಕೆಯನ್ನು ಕರೆದೊಯ್ಯಲು ವಿಮಾನ ನಿಲ್ದಾಣ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಬಸವರಾಜು ಹೋಗುತ್ತಿದ್ದರು. ಈ ಜಗಳದ ಬಳಿಕ ರನ್ಯಾಳ ಮೇಲೆ ಕಣ್ಣಿಟ್ಟಿದ್ದ ಡಿಆರ್‌ಐ ಅಧಿಕಾರಿಗಳು ಆಕೆಯ ವಿದೇಶ ಪ್ರಯಾಣದ ಹಿನ್ನೆಲೆಯನ್ನು ಕೆದಕುತ್ತಾ ಹೋದಾಗ ಒಂದೊಂದಾಗಿಯೇ ಎಲ್ಲವೂ ಬಯಲಾಗಿದೆ. ಇದನ್ನೂ ಓದಿ: ತೊಡೆಯ ಭಾಗಕ್ಕೆ 14 ಚಿನ್ನದ ಬಿಸ್ಕೆಟ್ ಅಂಟಿಸಿಕೊಂಡಿದ್ದ ನಟಿ ರನ್ಯಾ – ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದಿದ್ದು ಹೇಗೆ?
Advertisement
ಕಳೆದೊಂದು ವರ್ಷದಿಂದ ನಿರಂತರವಾಗಿ ದುಬೈ ಹಾಗೂ ಮಲೇಷ್ಯಾಕ್ಕೆ ರನ್ಯಾ ಪಯಣಿಸಿದ್ದಳು. ಅದರಲ್ಲೂ ಹೆಚ್ಚಿನ ಬಾರಿ ದುಬೈಗೆ ಹೋಗುತ್ತಿದ್ದ ರನ್ಯಾಳಿಗೆ ಯಾವುದೇ ಹೂಡಿಕೆ, ರಕ್ತ ಸಂಬಂಧಿಕರು ಇಲ್ಲ ಎಂಬ ವಿಚಾರ ಗೊತ್ತಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಎಚ್ಚೆತ್ತ ಡಿಆರ್‌ಐ ಅಧಿಕಾರಿಗಳು ಆಕೆಯ ಮೇಲೆ ಹದ್ದಿನ ಕಣ್ಣಿಟ್ಟಿದ್ದರು.
Advertisement
Advertisement
ರನ್ಯಾ ಮತ್ತೆ ದುಬೈಗೆ ಪ್ರಯಾಣ ಬೆಳೆಸಿದ ಬೆನ್ನಲ್ಲೇ ಜಾಗೃತರಾದ ಅಧಿಕಾರಿಗಳು ರನ್ಯಾ ಬರುವಿಕೆಗಾಗಿಯೇ ಕಾಯುತ್ತಿದ್ದರು. ಮಾ. 3 ರಂದು ರನ್ಯಾ ಪತಿ ಜೊತೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಣಕ್ಕೆ ಬಂದಿಳಿಯುತ್ತಿದ್ದಂತೆ ಡಿಆರ್‌ಐ ಅಧಿಕಾರಿಗಳು ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ‘ಮಾಣಿಕ್ಯ’ ಸಿನಿಮಾ ನಟಿ ರನ್ಯಾ ರಾವ್ ಫ್ಲಾಟ್ ಮೇಲೆ ದಾಳಿ – ಕೋಟಿ ಕೋಟಿ ಮೌಲ್ಯದ ಚಿನ್ನ ವಶ
ಆಗಲೂ ಸಹ ರನ್ಯಾಳನ್ನ ತಪಾಸಣೆ ಇಲ್ಲದೆ ಹೊರಗೆ ಕರೆತರಲು ವಿಮಾನ ನಿಲ್ದಾಣ ಠಾಣೆ ಹೆಡ್ ಕಾನ್‌ಸ್ಟೇಬಲ್ ಬಸವರಾಜ್ ತೆರಳಿದ್ದರು. ರನ್ಯಾಳನ್ನ ಅಧಿಕಾರಿಗಳು ವಶಕ್ಕೆ ಪಡೆದಾಗ ಅವರು ಡಿಜಿಪಿ ರಾಮಚಂದ್ರರಾವ್ ಅವರ ಮಗಳು ಎಂದಿದ್ದಾರೆ. ಇದನ್ನೂ ಓದಿ: ಮಿಲನಾ ಬೆಸ್ಟ್ ಮದರ್: ಪತ್ನಿಯನ್ನು ಹೊಗಳಿದ ಡಾರ್ಲಿಂಗ್ ಕೃಷ್ಣ
ಕೂಡಲೇ ರನ್ಯಾಳನ್ನು ಲೋಹ ಪರಿಶೋಧಕ ಕಚೇರಿಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ 1 ಕೆಜಿ ತೂಕದ 14 ಗೋಲ್ಡ್ ಬಿಸ್ಕೆಟ್ ತಂದಿರುವುದು ತಿಳಿದಿದೆ. ತೊಡೆಯ ಭಾಗಕ್ಕೆ 14 ಬಿಸ್ಕೆಟ್‌ಗಳನ್ನು ಗಮ್ ಹಾಕಿ ಅಂಟಿಸಿಕೊಂಡು ಬಳಿಕ ಟೇಪ್‌ನಿಂದ ಸುತ್ತಿಕೊಂಡಿದ್ದಳು. ಯಾವುದೇ ಸ್ಕ್ಯಾನರ್‌ನಲ್ಲಿ ಅನುಮಾನ ಬಾರದಂತೆ ಕ್ರ್ಯಾಂಪ್ ಬ್ಯಾಂಡೇಜ್ ಹಾಕಿಕೊಂಡು ಬಂದಿದ್ದಳು. ಕೂಡಲೇ ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಿಸಿದಾಗದೇ ಆಕೆ ಪೊಲೀಸ್ ಅಧಿಕಾರಿಯ ಮಗಳು ಎನ್ನುವುದು ಬಯಲಾಗಿದೆ.