Tuesday, 12th November 2019

Recent News

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ – ಸೆಲ್ಫಿ ವಿಡಿಯೋ ಮಾಡಿ ವಿಷ ಕುಡಿದ ಯುವಕ

-ಮನೆ ಸಮೀಪ ಅವಳೇ ನನ್ನನ್ನ ಕರೆದಿದ್ದಕ್ಕೆ ಹೋದೆ

ಹಾಸನ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ ಪ್ರಕರಣ ದಾಖಲಾಗಿದ್ದಕ್ಕೆ ಮನನೊಂದ ಯುವಕ ಸೆಲ್ಫಿ ವಿಡಿಯೋ ಮಾಡಿ ವಿಷ ಕುಡಿದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಸಂದೀಪ್ ವಿಷಯ ಕುಡಿದ ಯುವಕ. ಈತನ ಮೇಲೆ ಅತ್ಯಾಚಾರ ಆರೋಪದ ಪ್ರಕರಣ ದಾಖಲಾಗಿತ್ತು. ಇದರಿಂದ ನೊಂದು ತಾನು ಏನು ತಪ್ಪು ಮಾಡಿಲ್ಲ ಎಂದು ವಿಡಿಯೋ ಮಾಡಿ ವಿಷ ಕುಡಿದಿದ್ದಾನೆ. ಸದ್ಯಕ್ಕೆ ಈಗ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಏನಿದು ಪ್ರಕರಣ?
ಸಂದೀಪ್ ಅಪ್ರಾಪ್ತ ಬಾಲಕಿಯನ್ನು ಡ್ರಾಪ್ ನೀಡುವ ನೆಪದಲ್ಲಿ ಕಾರಿನಲ್ಲಿ ಕರೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ನಂತರ ಪೊಲೀಸರು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆದರೆ ಸಂದೀಪ್ ಕೇಸ್ ದಾಖಲಾಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದನು. ಇಂದು ಸೆಲ್ಫಿ ವೀಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ವಿಡಿಯೋದಲ್ಲಿ ಏನಿದೆ?
ನಾನು ತಪ್ಪು ಮಾಡಿಲ್ಲ. ಮನೆ ಸಮೀಪ ಅವಳೇ ನನ್ನನ್ನ ಕರೆದಿದ್ದು, ಅದಕ್ಕೆ ಹೋಗಿದ್ದೆ. ಆದರೆ ಈಗ ಸುಳ್ಳು ಹೇಳುತ್ತಿದ್ದಾಳೆ. ನಾನು ಏನೂ ತಪ್ಪು ಮಾಡಿಲ್ಲ. ಅದಕ್ಕೆ ವಿಷ ಕುಡಿಯುತ್ತಿದ್ದೇನೆ. ಅಪ್ಪ-ಅಮ್ಮ ಎಲ್ಲರೂ ನನ್ನನ್ನು ಕ್ಷಮಿಸಿ ಎಂದು ಸಂದೀಪ್ ವಿಷ ಸೇವಿಸಿದ್ದಾನೆ. ಸಂದೀಪ್ ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಎಂದು ಪೋಷಕರು ಹೇಳುತ್ತಿದ್ದಾರೆ.

Leave a Reply

Your email address will not be published. Required fields are marked *