ಶಿವಮೊಗ್ಗ: ಭದ್ರಾವತಿಯ (Bhadravati) ಬಿಜೆಪಿ (BJP) ಯುವ ಮೋರ್ಚಾ ಮುಖಂಡ ಹಾಗೂ ವಕೀಲರೊಬ್ಬರ ವಿರುದ್ಧ ಅತ್ಯಾಚಾರ ಮತ್ತು ಬ್ಲ್ಯಾಕ್‍ಮೇಲ್ ಆರೋಪ ಕೇಳಿಬಂದಿದೆ.
ವಕೀಲ ಭರತ್ ಬಿ.ಎಸ್ ವಿರುದ್ಧ ಈ ಆರೋಪ ಕೇಳಿಬಂದಿದೆ. ಆರೋಪಿ 23 ವರ್ಷದ ಮಹಿಳೆಯ ಬಳಿ ಪತಿಯ ಸ್ನೇಹಿತನೆಂದು ಪರಿಚಯಿಸಿಕೊಂಡು, ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯ ಮಾಡಿಕೊಂಡಿದ್ದ. ಅಲ್ಲದೇ ದಿನಸಿ ಅಂಗಡಿಗೆ ಪದೇ ಪದೇ ಬರುತ್ತಿದ್ದ. ಅಲ್ಲಿಯೂ ಮೈ, ಕೈ ಮುಟ್ಟಿ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ವೃದ್ಧೆಗೆ ಡಿಜಿಟಲ್ ಅರೆಸ್ಟ್ – ಬರೋಬ್ಬರಿ 24 ಕೋಟಿ ರೂ. ದೋಚಿದ ಸೈಬರ್ ವಂಚಕರು
ಕಳೆದ ಏ.11 ರಂದು ಸ್ನೇಹಿತ ಭರತ್ ಮನೆಗೆ ಬರುತ್ತಾನೆ ಹಣ ನೀಡು ಎಂದು ಸಂತ್ರಸ್ತೆಯ ಪತಿ ಹೇಳಿದ್ದ. ಪತಿ ಸೂಚನೆಯಂತೆ ಹಣ ನೀಡಲು ಮುಂದಾದಾಗ, ಒಂಟಿಯಾಗಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ. ಯಾರಿಗಾದ್ರೂ ಹೇಳಿದ್ರೆ ಮಾನಹಾನಿ ಮಾಡುವುದಾಗಿ ಹೇಳಿ ಪ್ರಾಣ ಬೆದರಿಕೆ ಹಾಕಿದ್ದ. ಬಳಿಕ ಹಣದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದ. ಏ.25 ರಂದು ಮತ್ತೆ ಅಂಗಡಿಗೆ ಬಂದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದ.
ಮಹಿಳೆಯ ಪತಿ ಮೊಬೈಲ್ ನೋಡುವಾಗ ಇನ್‍ಸ್ಟಾಗ್ರಾಮ್ ಬ್ಲಾಕ್ ಆಗಿದ್ದನ್ನು ನೋಡಿ, ಪ್ರಶ್ನಿಸಿದಾಗ ಕಣ್ಣೀರು ಹಾಕುತ್ತಾ ಮಹಿಳೆ ಸತ್ಯ ಬಿಚ್ಚಿಟ್ಟಿದ್ದಳು. ಪತ್ನಿಯ ಹೆಸರಿನಲ್ಲಿ ವಾಟ್ಸಾಪ್ ಚಾಟ್ ಮಾಡಿ ಆರೋಪಿಯ ಅಸಲಿ ಬುದ್ಧಿಯನ್ನು ಅವರು ಪತ್ತೆ ಮಾಡಿದ್ದರು. ಅತ್ಯಾಚಾರ ಎಸಗಿದ ಆರೋಪಿ ವಿರುದ್ಧ ದಂಪತಿ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.
ದೂರ ದಾಖಲಾದ ಬೆನ್ನಲ್ಲೇ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಆರೋಪ – ನೇಣು ಬಿಗಿದು ಕಾನ್‌ಸ್ಟೇಬಲ್ ಪತ್ನಿ ಆತ್ಮಹತ್ಯೆ
