Sunday, 19th May 2019

ಅಂಗಡಿಗೆ ಕರೆದ್ಯೊಯುತ್ತೇನೆ ಎಂದು 6ರ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

ಕಾರವಾರ: 50 ವರ್ಷದ ವ್ಯಕ್ತಿಯೊಬ್ಬ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ.

ಮಂಜುನಾಥ ನಾಗ್ಯಾ ಸಿದ್ಧಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯಾಗಿದ್ದು, ಇಂದು ಸಂಜೆ ವೇಳೆ ತನ್ನ ಬೈಕಿನ ಮೇಲೆ ಅಂಗಡಿಗೆ ಕರೆದ್ಯೊಯುತ್ತೇನೆ ಎಂದು ಹೇಳಿ ಕರೆದುಕೊಂಡು ಹೋಗಿದ್ದಾನೆ. ಈ ಸಮಯದಲ್ಲಿ ಬಾಲಕಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ಪೋಷಕರು ಆರೋಪಿಸಿದ್ದಾರೆ.

ಯಲ್ಲಾಪುರ ತಾಲೂಕಿನ ಆರತಿಬೈಲ್ ನಿವಾಸಿ ಆಗಿರುವ ಮಂಜುನಾಥ ನಾಗ್ಯಾ ಸಿದ್ಧಿ ಬಾಲಕಿಯ ಕುಟುಂಬಸ್ಥರಿಗೆ ಪರಿಚಯಸ್ಥನಾಗಿದ್ದ ಕಾರಣ ಆತನೊಂದಿಗೆ ತೆರಳಿದ್ದಳು. ಇದನ್ನೇ ದುರುಪಯೋಗ ಪಡಿಸಿಕೊಂಡ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದ. ಆ ಬಳಿಕ ಬಾಲಕಿ ಆರೋಪಿಯ ಕೃತ್ಯದ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದು, ತಕ್ಷಣ ಎಚ್ಚೆತ್ತ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಾಲಕಿಯ ತಂದೆ ಯಲ್ಲಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಅನ್ವಯ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಯತ್ನದ ಆರೋಪದಲ್ಲಿ (ಪೋಕ್ಸೊ ಕಾಯ್ದೆ) ದೂರು ದಾಖಲಿಸಿಕೊಳ್ಳಲಾಗಿದೆ. ಪ್ರಾಥಮಿಕ ಹಂತದ ವಿಚಾರಣೆ ವೇಳೆ ಆರೋಪಿ ತಪ್ಪೊಪಿಗೆ ಹೇಳಿಕೆ ನೀಡಿನೆ ಎಂಬ ಮಾಹಿತಿ ಲಭಿಸಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply

Your email address will not be published. Required fields are marked *