ಅಥಣಿ: ಅಪ್ರಾಪ್ತೆಯ ಮೇಲೆ ಕಾಮುಕನೋರ್ವ ಅತ್ಯಾಚಾರಕ್ಕೆ ಯತ್ನಿಸಿ ಜೈಲು ಸೇರಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ (Athani) ತಾಲೂಕಿನ ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕಾಮುಕ ಮಹಾಂತೇಶ ಹಿಪ್ಪರಗಿ ಪೊಲೀಸರ ಅತಿಥಿಯಾಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಕೂಡಲೇ ಬಾಲಕಿ ಪೋಷಕರಿಗೆ ಈ ಕುರಿತು ಮಾಹಿತಿ ನೀಡಿದ್ದಾಳೆ. ಬಳಿಕ ಐಗಳಿ ಪೊಲೀಸ್‌ರಿಗೆ ಅಪ್ರಾಪ್ತೆ ಬಾಲಕಿಯ ಪೋಷಕರು ದೂರು ನೀಡಿದ್ದಾರೆ. ಇದನ್ನೂ ಓದಿ: DRDO ಸ್ಟಿಕ್ಕರ್ ನೋಡಿ ಕೆರಳಿದ ಪುಂಡರು – ಕಾರು ಅಡ್ಡಗಟ್ಟಿ ವಿಂಗ್ ಕಮಾಂಡರ್ ಮೇಲೆ ಮಾರಣಾಂತಿಕ ಹಲ್ಲೆ
ಆರೋಪಿಯ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿಕೊಂಡ ಐಗಳಿ ಪೊಲೀಸರು ಕಾಮುಕ ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಘಟನೆ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಓಂ ಪ್ರಕಾಶ್ ಹತ್ಯೆ ಬಗ್ಗೆ ಸಮಗ್ರ ತನಿಖೆ: ಪರಮೇಶ್ವರ್