ಹಾವೇರಿ: ಮನೆಗೆ ನುಗ್ಗಿ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರೋ ಅಮಾನವೀಯ ಘಟನೆಯೊಂದು ಜಿಲ್ಲೆಯ ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿಯನ್ನು ನಾಗರಾಜ ಗೊರವರ (21) ಎಂದು ಗುರುತಿಸಲಾಗಿದ್ದು, ಈತ ಹದಿನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. 2017 ಡಿಸೆಂಬರ್ 30 ಶನಿವಾರ ಈ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Advertisement
Advertisement
ಸಂತ್ರಸ್ತೆ ಪೋಷಕರು ಮೃತಪಟ್ಟಿದ್ದು, ಅಜ್ಜಿ ಮನೆಯಲ್ಲಿ ವಾಸಿಸುತ್ತಿದ್ದಳು. ಶನಿವಾರ ಶಾಲೆ ಮುಗಿಸಿಕೊಂಡು ಮನೆಗೆ ಬಂದಿದ್ದಳು. ಅಜ್ಜಿ ಕೂಲಿ ಕೆಲಸಕ್ಕೆಂದು ಹೊರಗಡೆ ಹೋಗಿದ್ದು, ಈ ಸಂದರ್ಭದಲ್ಲಿ ಮನೆಯಲ್ಲಿ ಯಾರು ಇಲ್ಲ ಎಂದು ತಿಳಿದ ಆರೋಪಿ ನಾಗರಾಜ ಏಕಾಏಕಿ ಮನೆಗೆ ನುಗ್ಗಿ ಸಂತ್ರಸ್ತೆಯ ಬಾಯಿಗೆ ಬಟ್ಟೆ ಕಟ್ಟಿ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ನಂತರ ಬಾಲಕಿ ಆತನಿಂದ ಹೇಗೋ ತಪ್ಪಿಸಿಕೊಂಡು ಹೊರಗೆ ಬಂದು ಕೂಗಿಕೊಂಡಿದ್ದಾಳೆ.
Advertisement
ಸಂತ್ರಸ್ತೆ ಕೂಗಿಕೊಂಡ ತಕ್ಷಣ ನೆರೆಹೊರೆಯವರು ಬಂದು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ಈಗ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿ ನಾಗರಾಜನನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
Advertisement
\