Bagalkot
ಅತ್ಯಾಚಾರ ಯತ್ನ: ಮನನೊಂದು ಆತ್ಯಹತ್ಯೆಗೆ ಶರಣಾದ ಅಪ್ರಾಪ್ತೆ

ಬಾಗಲಕೋಟೆ: ಕುಡಿದ ಮತ್ತಿನಲ್ಲಿ ವ್ಯಕಿಯೊಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದರಿಂದ ನೊಂದ ಬಾಲಕಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಚನಾಳ ಗ್ರಾಮದಲ್ಲಿ ನಡೆದಿದೆ.
ಸರೋಜಿನಿ (16) ಆತ್ಮಹತ್ಯೆಗೆ ಶರಣಾದ ಅಪ್ರಾಪ್ತೆ. ವೆಂಕಪ್ಪ ಗಡ್ಡಿ (36) ಎಂಬಾತನೇ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ. ವೆಂಕಪ್ಪ ಮೂರು ದಿನಗಳ ಹಿಂದೆ ಗ್ರಾಮದ ಸರೋಜಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದನು. ಇದರಿಂದ ಅವಮಾನ ತಾಳಲಾರದೇ ಆಕೆ ಶುಕ್ರವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮಗಳ ಸಾವಿನ ಬಳಿಕ ಬಾಲಕಿ ತಂದೆ ಕೋಪಗೊಂಡು ವೆಂಕಪ್ಪನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಆರೋಪಿ ಮುಧೋಳ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸ್ಥಳಕ್ಕೆ ಮುಧೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
