ಬೆಂಗಳೂರು: ಕೆ.ಆರ್.ನಗರ (KR Nagar) ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ದೋಷಿನಾ? ನಿರ್ದೋಷಿನಾ? ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಆ.1) ತೀರ್ಪು ಪ್ರಕಟಿಸಲಿದೆ.
ಈಗಾಗಲೇ ವಿಶೇಷ ನ್ಯಾಯಾಲಯ ಕೆಆರ್ ನಗರ ಸಂತ್ರಸ್ತೆಯ ಅತ್ಯಾಚಾರ ಕೇಸ್‌ಲ್ಲಿ 26 ಸಾಕ್ಷಿಗಳ ವಿಚಾರಣೆ ನಡೆಸಿ, ಜು.30ರಂದು ತೀರ್ಪು ಕಾಯ್ದಿರಿಸಿತ್ತು. ಆದರೆ ಬಳಿಕ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್.ಜಿ ಬಳಿ ಮೊಬೈಲ್ ಸಾಕ್ಷ್ಯ, ತಾಂತ್ರಿಕ ಸಾಕ್ಷ್ಯಗಳ ಬಗ್ಗೆ ಸ್ಪಷ್ಟನೆಗಳನ್ನು ಕೇಳಿದ್ದರು. ಇದರೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಗ್ಗೆ ಕೆಲ ಮಾಹಿತಿ ಕೇಳಿ ಆ.1ಕ್ಕೆ ಮೂಂದುಡಿತ್ತು.ಇದನ್ನೂ ಓದಿ:ಬಿಹಾರ ಸರ್ಕಾರದಿಂದ ಬಂಪರ್ ಗಿಫ್ಟ್ – ಬಿಸಿಯೂಟ ತಯಾರಕರು, ದೈಹಿಕ, ಆರೋಗ್ಯ ಶಿಕ್ಷಕರ ಗೌರವಧನ ಡಬಲ್
ಕೆ.ಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಶುಕ್ರವಾರ (ಆ.1) ಹೊರಬೀಳಲಿರುವ ತೀರ್ಪು ಬಹಳ ಮಹತ್ವದ್ದಾಗಿರಲಿದೆ. ಇಂದಿನ ಪ್ರಕಣರದ ಕೇಸ್ ಖುಲಾಸೆಯಾದ್ರೂ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಇನ್ನೂ ಮೂರು ಪ್ರಕರಣಗಳು ಬಾಕಿ ಇರೋದ್ರಿಂದ ಕೇಸ್ ಖುಲಾಸೆಯಾದ್ರೂ ಬಿಡುಗಡೆ ಆಗೋದು ಅನುಮಾನವಾಗಿದೆ.
ಏನಿದು ಪ್ರಕರಣ?
ಕೆ.ಆರ್.ನಗರ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ನಂತರ ವಿಷಯ ಹೊರಗೆ ಬರುತ್ತೆ ಎಂದು ತಿಳಿದು ಸಂತ್ರಸ್ತೆಯನ್ನು ರೇವಣ್ಣ, ಭವಾನಿ, ಸತೀಶ್ ಬಾಬು ಸೇರಿದಂತೆ 9 ಜನ ಸೇರಿಕೊಂಡು ಅಪಹರಿಸಿದ್ದರು. ಬಳಿಕ ಆಕೆಯನ್ನು ಹುಣಸೂರು ಬಳಿಯ ತೋಟದ ಮನೆಯೊಂದರಲ್ಲಿ ಕೂಡಿ ಹಾಕಲಾಗಿತ್ತು. ಇದೇ ಅಪಹರಣ ಪ್ರಕರಣದಿಂದಲೇ ರೇವಣ್ಣ ಸೇರಿದಂತೆ 8 ಜನ ಜೈಲಿಗೆ ಹೋಗಿದ್ದರು. ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಬಳಿಕ ನಿರೀಕ್ಷಣಾ ಜಾಮೀನು ಪಡೆದಿದ್ದರು.
ಆನಂತರ ಸಂತ್ರಸ್ತೆಯನ್ನು ರಕ್ಷಿಸಿದ ಎಸ್‌ಐಟಿ, ಆಕೆಯ ಹೇಳಿಕೆ ದಾಖಲು ಮಾಡಿ ಪ್ರಕರಣ ದಾಖಲಿಸಿತ್ತು. ಹೇಳಿಕೆಯ ಮೇಲೆ ತನಿಖೆ ಮಾಡಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಬಳಿಕ ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಸಂತ್ರಸ್ತೆಯನ್ನು ಬೆತ್ತಲುಗೊಳಿಸಿ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿದ್ದ ವಿಡಿಯೋವೊಂದು ಪತ್ತೆಯಾಗಿತ್ತು. ಇದು ಪ್ರಕರಣದ ಬಹುದೊಡ್ಡ ಸಾಕ್ಷ್ಯವಾಗಿ ಪರಿಣಮಿಸಿತು. ಕೊನೆಗೆ ಎಫ್‌ಎಸ್‌ಎಸ್ ಮೂಲಕ ವಿಡಿಯೋ ತುಣುಕಿನಲ್ಲಿರುವುದು ಪ್ರಜ್ವಲ್ ರೇವಣ್ಣ ಎನ್ನುವುದು ಸಾಬೀತಾಗಿತ್ತು.
ಕಳೆದ ಲೋಕಸಭಾ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ದೃಶ್ಯವಿದ್ದ ಪೆನ್ ಡ್ರೈವ್‌ಗಳನ್ನು ಹಾಸನ ಕ್ಷೇತ್ರದಾದ್ಯಂತ ಹಂಚಲಾಗಿತ್ತು. ಬಳಿಕ ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ್ದ ದೂರಿನ ಆಧಾರದ ಮೇಲೆ ತನಿಖೆ ಆರಂಭವಾಗಿತ್ತು. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ಇತ್ತೀಚಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಪ್ರಜ್ವಲ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.ಇದನ್ನೂ ಓದಿ: ಆನೇಕಲ್ | ಬಾಲಕ ನಿಶ್ಚಿತ್ ಬರ್ಬರ ಹತ್ಯೆ; ಆರೋಪಿಗಳ ಕಾಲಿಗೆ ಗುಂಡೇಟು, ಇಬ್ಬರು ಅರೆಸ್ಟ್