ಬೆಂಗಳೂರು: ಸಹ ಕಲಾವಿದೆಯ ಮೇಲೆ ಅತ್ಯಾಚಾರ (Rape) ಎಸಗಿದ ಪ್ರಕರಣದಲ್ಲಿ ನಟ ಮಡೆನೂರು ಮನು (Madenur Manu) ಜೈಲುಪಾಲಾಗಿದ್ದಾರೆ. ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿದೆ.
5 ದಿನಗಳ ಪೊಲಿಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಇಂದು ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಲತ್ತಹಳ್ಳಿಯಲ್ಲಿ ಮನುಗೆ ಮೆಡಿಕಲ್ ಟೆಸ್ಟ್ ಮಾಡಿಸಲಾಯಿತು. ಇದನ್ನೂ ಓದಿ: ಬೇಕಂತಲೇ ಪಿತೂರಿ ಮಾಡಲಾಗಿದೆ, ನನ್ನ ಗಂಡನಿಗೆ ನ್ಯಾಯ ಸಿಗೋವರೆಗೂ ಹೋರಾಡ್ತೀನಿ: ಮಡೆನೂರು ಮನು ಪತ್ನಿ
ಮೆಡಿಕಲ್ ಟೆಸ್ಟ್ ನಡೆದ ಬಳಿಕ ಪೊಲೀಸರು ಮಧ್ಯಾಹ್ನ 3ನೇ ಎಸಿಎಂಎಂ ಕೋರ್ಟ್‌ಗೆ (ACMM Court) ಹಾಜರು ಪಡಿಸಿದರು. ಈ ವೇಳೆ ನ್ಯಾಯಾಧೀಶರು ಮನು ಪರ ವಕೀಲರಿಗೆ ಕೆಲ ಪ್ರಶ್ನೆ ಕೇಳಿದರು.
ಈ ಪ್ರಶ್ನೆಗೆ, ನನ್ನ ಕಕ್ಷಿದಾರರು ರಿಯಾಲಿಟಿ ಶೋನಲ್ಲಿ ಅಭಿನಯಿಸಿದ್ದಾರೆ. ಮದುವೆಯಾಗಿದೆ, ಆದರೆ ದೂರುದಾರೆ ಬೇರೆಯವರು ಎಂದು ಉತ್ತರ ನೀಡಿದರು. ಇದನ್ನೂ ಓದಿ: ಅವಳ ಹಿಂದೆ ಇಬ್ಬರು ಹೀರೋ, ಒಬ್ಬಳು ಲೇಡಿ ಡಾನ್ ಇದ್ದಾಳೆ – ರೇಪ್ ಕೇಸ್ ದಾಖಲಾದ ಬಳಿಕ ಮಡೆನೂರು ಮನು ಬಾಂಬ್
ದೂರುದಾರೆಗೆ ಮದುವೆ ಆಗಿದ್ಯಾ ಎಂದು ಕೇಳಿದ್ದಕ್ಕೆ ಸಂತ್ರಸ್ತೆಯ ಪರ ವಕೀಲೆ ಮೊಬೈಲ್‌ನಲ್ಲಿರುವ ಕೆಲ ವಿಡಿಯೋವನ್ನು ನ್ಯಾಯಾಲಯಕ್ಕೆ ನೀಡಿದರು. ಅಂತಿಮವಾಗಿ ಕೋರ್ಟ್ 14 ದಿನಗಳ ಕಾಲ ಮನುವನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.