ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ (Muniratna) ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ (Judicial Custody) ವಿಧಿಸಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಕಗ್ಗಲಿಪುರ ಪೊಲೀಸರು ಮುನಿರತ್ನ ಅವರನ್ನು ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿದ್ದಾರೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಪಂಚಾಯ್ತಿ ಆವರಣಕ್ಕೆ ಬಿದ್ದ ಕಾರು – ಐವರು ಪಾರು
ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ:
ಮುನಿರತ್ನ ಅವರ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ (SIT) ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧದಿಂದ ಕಲಿತ ಪಾಠ.. ಚೀನಾಗೆ ಟಕ್ಕರ್ ಕೊಡಲು ‘ಮೌಂಟೆನ್ ಟ್ಯಾಂಕ್’ ಅಭಿವೃದ್ಧಿ – ಇಂಡಿಯನ್ ಆರ್ಮಿಗೆ ಆನೆ ಬಲ
ಶುಕ್ರವಾರವಷ್ಟೇ ಬಂಧಿಸಿದ್ದ ಪೊಲೀಸರು:
ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದರು. ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿತ್ತು. ಒಂದು ಪ್ರಕರಣದಲ್ಲಿ ಜಾಮೀನು ಪಡೆದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರುತ್ತಿದ್ದಂತೆ ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿದ್ದರು. ಮಾಗಡಿ ಡಿವೈಎಸ್ಪಿ ಪ್ರವೀಣ್ ಹಾಗೂ ರಾಮನಗರ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದ ತಂಡ 7 ಜೀಪುಗಳು, ಒಂದು ಮೀಸಲು ಪಡೆಯ ವಾಹನ ಭದ್ರತೆಯಲ್ಲಿ ಶಾಸಕ ಮುನಿರತ್ನ ಅವರನ್ನ ಬಂಧಿಸಲಾಗಿತ್ತು. ಇದನ್ನೂ ಓದಿ: ದೆಹಲಿ ನೂತನ ಸಿಎಂ ಆಗಿ ಅತಿಶಿ ಇಂದು ಪ್ರಮಾಣ ವಚನ ಸ್ವೀಕಾರ
ಏನಿದು ಪ್ರಕರಣ?
ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಬುಧವಾರ ಸಂಜೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿತ್ತು. ಕಗ್ಗಲೀಪುರದ ಖಾಸಗಿ ರೆಸಾರ್ಟ್ನಲ್ಲಿ ಅತ್ಯಾಚಾರ ನಡೆದಿರುವುದಾಗಿ 40 ವರ್ಷ ವಯಸ್ಸಿನ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ದೂರಿನ ಅನ್ವಯ ಪೊಲೀಸರು ಐಟಿ ಆಕ್ಟ್ 2000, ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್ ದಾಖಲಿಸಿದ್ದರು. ಮುನಿರತ್ನ ನಾಯ್ಡು (ಎ1), ವಿಜಯ್ ಕುಮಾರ್ (ಎ2), ಸುಧಾಕರ (ಎ3), ಕಿರಣ್ ಕುಮಾರ್ (ಎ4), ಲೋಹಿತ್ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು. ಇದನ್ನೂ ಓದಿ: ಗುಣಮಟ್ಟದಲ್ಲಿ ರಾಜಿಯಾಗೋ ಪ್ರಶ್ನೆಯೇ ಇಲ್ಲ, ದೇಶದ ಯಾವ ಲ್ಯಾಬ್‌ನಲ್ಲಾದ್ರೂ ನಂದಿನಿ ಪ್ರೊಡಕ್ಟ್ ಪರೀಕ್ಷೆ ಮಾಡಲಿ: KMF ಎಂಡಿ