ಬೀದರ್: ಅತ್ಯಾಚಾರ ಆರೋಪ ಹೊತ್ತಿರುವ ಬಿಜೆಪಿ (BJP) ಶಾಸಕ ಪ್ರಭು ಚೌಹಾಣ್ (Prabhu Chauhan) ಪುತ್ರ ಪ್ರತೀಕ್ ಚೌಹಾಣ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿಯನ್ನು ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿದೆ.
ಚೌಹಾಣ್ ಪುತ್ರನ ಪರ ವಕೀಲ ಎಂ.ಎಂ.ಗೋಡ್ಬಲೆಯವರು ನಿರೀಕ್ಷಣಾ ಜಾಮೀನಿಗಾಗಿ ಮಂಗಳವಾರ (ಜು.29) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ್ದ ಕೋರ್ಟ್ ಗುರುವಾರಕ್ಕೆ (ಜು.31) ತೀರ್ಪನ್ನು ಕಾಯ್ದಿರಿಸಿತ್ತು. ಬಳಿಕ ಜಾಮೀನು ನೀಡದಂತೆ ಕೋರ್ಟ್‌ಗೆ ಸಂತ್ರಸ್ತೆ ಪರ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.ಇದನ್ನೂ ಓದಿ: ಅತ್ಯಾಚಾರ ಆರೋಪ ಕೇಸ್; ಜಾಮೀನಿಗಾಗಿ ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರ ಕೋರ್ಟ್‌ಗೆ ಅರ್ಜಿ
ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಬೆನ್ನಲ್ಲೇ ಬಿಜೆಪಿ ಶಾಸಕ ಚೌಹಾಣ್ ಪುತ್ರನಿಗೆ ಬಂಧನ ಭೀತಿ ಹೆಚ್ಚಾಗಿದೆ. ಈಗಾಗಲೇ ಬೀದರ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.
ಬಿಜೆಪಿ ಶಾಸಕರ ಪುತ್ರನ ವಿರುದ್ಧ ಯುವತಿಯೊಬ್ಬಳು ಅತ್ಯಾಚಾರ ಕೇಸ್ ದಾಖಲಿಸಿದ್ದರು. ಮದುವೆಯಾಗುವುದಾಗಿ ನಂಬಿಸಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಗಂಭೀರ ಆರೋಪ ಮಾಡಿದ್ದರು.ಇದನ್ನೂ ಓದಿ: ನಂಗೆ ಯಾರೂ ಬಾಯ್‌ಫ್ರೆಂಡ್ ಇಲ್ಲ, 4 ತಿಂಗಳು ನನ್ನ ಫೋನ್ ಪ್ರತೀಕ್ ಚೌಹಾಣ್ ಬಳಿ ಇತ್ತು: ಸಂತ್ರಸ್ತೆ