ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಪೆನ್‍ಡ್ರೈವ್ ಸುನಾಮಿ ಎದ್ದಿದ್ದು, ಇದೀಗ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ (Prajwal Revanna) ಅಸಲಿ ಸಂಕಷ್ಟ ಶುರುವಾಗಿದೆ.
ಹೌದು. ಪ್ರಜ್ವಲ್ ರೇವಣ್ಣ ವಿರುದ್ಧ ಕೊನೆಗೂ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ 164 ಅಡಿಯಲ್ಲಿ ಕೊಟ್ಟ ಹೇಳಿಕೆ ಆಧರಿಸಿ ಎಫ್‍ಐಆರ್ ದಾಖಲಿಸಿದ್ದಾರೆ. ಒಟ್ಟಿನಲ್ಲಿ ಒಂದೆಡೆ ಲುಕೌಟ್ ನೋಟಿಸ್ ಮತ್ತೊಂದ್ಕಡೆ ಅತ್ಯಾಚಾರ ಕೇಸ್ ದಾಖಲಾಗಿದ್ದು, ಸಂಸದ ಮತ್ತೆ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ.
ಈಗಾಗಲೇ ಪ್ರಜ್ವಲ್ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ಎಲ್ಲೇ ಕಾಣಿಸಿಕೊಂಡರೂ ಅರೆಸ್ಟ್ ಆಗುವುದು ಖಚಿತವಾಗಿದೆ. ಇತ್ತ ಪ್ರಜ್ವಲ್ ರೇವಣ್ಣ ಕೂಡ ಕಾನೂನು ಸಮರ ಸಾಧ್ಯತೆ ಇದೆ. ಜೊತೆಗೆ ಇದೀಗ ಎಸ್‌ಐಟಿ ಅಧಿಕಾರಿಗಳು ಶೀಘ್ರವೇ ವಿಚಾರಣೆಗೆ ಹಾಜರಾಗುವಂತೆ ಇಂದು ಮತ್ತೆ ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು!